AIIMS Fire Breaks: ದೆಹಲಿ ಏಮ್ಸ್‌ನ ಎಂಡೋಸ್ಕೋಪಿ ಕೊಠಡಿಯಲ್ಲಿ ಅಗ್ನಿ ಆಕಸ್ಮಿಕ; ರೋಗಿಗಳ ಸ್ಥಳಾಂತರ
Fire Breaks Out At AIIMS Delhi: ದೆಹಲಿ ಏಮ್ಸ್‌ನ ಎಂಡೋಸ್ಕೋಪಿ ಕೊಠಡಿಯಲ್ಲಿ ಅಗ್ನಿ ಅನಾಹುತ ಉಂಟಾಗಿದ್ದು, ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನವದೆಹಲಿ: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್) ಕಟ್ಟಡದ ಎಂಡೋಸ್ಕೋಪಿ ಕೊಠಡಿಯಲ್ಲಿ ಇಂದು (ಆಗಸ್ಟ್) ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳನ್ನು ಸ್ಥಳಾಂತರಗೊಳಿಸಲಾಗಿದೆ. ಕೊಠಡಿಯಲ್ಲಿದ್ದ ಎಲ್ಲರನ್ನೂ ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯು ಆಸ್ಪತ್ರೆಯ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ದಿಗ್ಭ್ರಮೆಗೊಳಿಸಿದೆ.
ಹೊಗೆ ಬರುತ್ತಿರುವುದನ್ನು ಗಮನಿಸಿದ ಆಸ್ಪತ್ರೆಯ ಸಿಬ್ಬಂದಿ ಅಲಾರಂ ಒತ್ತಿದ್ದಾರೆ, ಅಲ್ಲದೇ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು.
ತಕ್ಷಣಕ್ಕೆ ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದ್ದಾರೆ, ಮಾತ್ರವಲ್ಲ ಪರಿಸ್ಥಿತಿಯನ್ನು ನಿಯಂತ್ರಿಸಗೊಳಿಸಿದ್ದಾರೆ.
ʼಆರಕ್ಕೂ ಹೆಚ್ಚು ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆʼ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಎಎನ್‌ಐ ವರದಿ ಮಾಡಿದೆ.
ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ವಿಭಾಗ