ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gujarat Fire: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಗೇಮಿಂಗ್ ಜೋನ್ ಭೀಕರ ಅಗ್ನಿ ದುರಂತ; ಕನಿಷ್ಠ 24 ಮಂದಿ ಸಾವು, 65ಕ್ಕೂ ಅಧಿಕ ಜನರಿಗೆ ಗಾಯ

Gujarat Fire: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಗೇಮಿಂಗ್ ಜೋನ್ ಭೀಕರ ಅಗ್ನಿ ದುರಂತ; ಕನಿಷ್ಠ 24 ಮಂದಿ ಸಾವು, 65ಕ್ಕೂ ಅಧಿಕ ಜನರಿಗೆ ಗಾಯ

ರಾಜ್‌ಕೋಟ್‌ನ ಗೇಮಿಂಗ್ ಜೋನ್‌ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 24 ಮಂದಿ ಸಜೀವ ದಹನವಾಗಿದ್ದಾರೆ. ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.

ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ. 65ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ. 65ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. (ANI)

ರಾಜ್‌ಕೋಟ್ (ಗುಜರಾತ್): ರಾಜ್‌ಕೋಟ್‌ನಲ್ಲಿ ಹಿಂದೆಂದೂ ಕಂಡು ಕೇಳರಿಯದ ಭೀಕರ ಅಗ್ನಿ ದುರಂತ ಸಂಭವಿಸಿದೆ. ರಾಜ್‌ಕೋಟ್‌ನಲ್ಲಿರುವ (Rajkot Fire Case) ಟಿಆರ್‌ಪಿ ಗೇಮಿಂಗ್ ಜೋನ್‌ನಲ್ಲಿ (TRP Gaming Zone) ( ಇಂದು (ಮೇ 25, ಶನಿವಾರ) ಸಂಜೆ ಭಾರಿ ಬೆಂಕಿ (Fire Incident) ಕಾಣಿಸಿಕೊಂಡ ಪರಿಣಾಮ 24 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಪ್ರಯತ್ನಗಳು ಮುಂದುವರಿದಿವೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

ಟ್ರೆಂಡಿಂಗ್​ ಸುದ್ದಿ

ಭೀಕರ ದುರಂತದ ಬಗ್ಗೆ ಮಾಹಿತಿ ನೀಡಿರುವ ರಾಜ್‌ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ, "ಟಿಆರ್‌ಪಿ ಗೇಮಿಂಗ್ ವಲಯದಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಬೆಂಕಿ ನಿಯಂತ್ರಣದಲ್ಲಿದೆ. ನಾವು ಸಾಧ್ಯವಾದಷ್ಟು ಶವಗಳನ್ನು ಹೊರ ತೆಗೆಯಲು ಪ್ರಯತ್ನಿಸುತ್ತಿದ್ದೇವೆ. ಈವರೆಗೆ ಸುಮಾರು 20 ಶವಗಳನ್ನು ಹೊರ ತೆಗೆಯಲಾಗಿದೆ, ಹೆಚ್ಚಿನ ತನಿಖೆಗಾಗಿ ಅವುಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಗೇಮಿಂಗ್ ವಲಯವು ಯುವರಾಜ್ ಸಿಂಗ್ ಸೋಲಂಕಿ ಎಂಬ ವ್ಯಕ್ತಿಯ ಒಡೆತನದಲ್ಲಿದೆ. ನಿರ್ಲಕ್ಷ್ಯ ಮತ್ತು ಸಂಭವಿಸಿದ ಸಾವುಗಳಿಗಾಗಿ ನಾವು ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ರಾಜು ಭಾರ್ಗವ ಎಎನ್ಐಗೆ ತಿಳಿಸಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಬೆಂಕಿ ಘಟನೆಯಲ್ಲಿ ತಕ್ಷಣದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗಾಗಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಆಡಳಿತಕ್ಕೆ ಸೂಚನೆ ನೀಡಿದ್ದಾರೆ. "ರಾಜ್‌ಕೋಟ್ ಆಟದ ವಲಯದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ತಕ್ಷಣದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ. ಗಾಯಗೊಂಡವರಿಗೆ ತಕ್ಷಣದ ಚಿಕಿತ್ಸೆಗೆ ವ್ಯವಸ್ಥೆಗಳಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ" ಎಂದು ಭೂಪೇಂದ್ರ ಪಟೇಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಗೇಮಿಂಗ್ ವಲಯದಲ್ಲಿ ಸಂಭವಿಸಿದ ಬೆಂಕಿಯ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕಿ ದರ್ಶಿತಾ ಶಾ, "ಇಂದು ರಾಜ್‌ಕೋಟ್‌ನಲ್ಲಿ ನಡೆದಿರುವ ಈ ಘಟನೆ ಬಹಳ ದುಃಖಕರವಾಗಿದೆ. ರಾಜ್‌ಕೋಟ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಟದ ವಲಯದಲ್ಲಿ ಬೆಂಕಿಯಿಂದ ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಈ ವಿಷಯದ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ. ಆದರೆ ಇದೀಗ ಸಾಧ್ಯವಾದಷ್ಟು ಜನರನ್ನು ಉಳಿಸುವುದು ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಭೀಕರ ಅಗ್ನಿ ದುರಂತಕ್ಕೆ 10 ಮಂದಿ ಬಲಿ

ಗುರುವಾರವಷ್ಟೇ (ಮೇ 23) ಮಹಾರಾಷ್ಟ್ರದ ಡೊಂಬಿವ್ಲಿಯ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಲ್ಲಿ ಸಂಭವಿಸಿದ ಸ್ಫೋಟ ಶಬ್ದ 3 ಕಿಲೋಮೀಟರ್ ದೂರದಲ್ಲಿ ಕೇಳಿಸಿತ್ತು ಎಂದು ವರದಿಯಾಗಿದೆ.

ಸ್ಫೋಟದ ಪರಿಣಾಮವು ಎಷ್ಟು ತೀವ್ರವಾಗಿತ್ತೆಂದರೆ ಮನೆಗಳ ಕಿಟಕಿ ಗಾಜುಗಳನ್ನು ಛಿದ್ರಗೊಳಿಸಿದೆ. ಸುತ್ತಮುತ್ತಲಿನ ಕಾರುಗಳು, ರಸ್ತೆಗಳು ಮತ್ತು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರಂತಕ್ಕೆ ಸಂಬಂಧಿಸಿದ್ದಂತೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನ್ಯಾಯಾಲಯವು ಡೊಂಬಿವ್ಲಿಯ ರಾಸಾಯನಿಕ ಕಾರ್ಖಾನೆಯ ಮಾಲೀಕರನ್ನು ಮೇ 29 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಅಮುದನ್ ಕೆಮಿಕಲ್ಸ್ ಮಾಲೀಕ ಮಲಯ್ ಮೆಹ್ತಾ (38) ಬಂಧಿತ ಆರೋಪಿ. ಅಪರಾಧ ವಿಭಾಗದ ಉಲ್ಲಾಸ್‌ನಗರದ ಘಟಕವು ತನಿಖೆಯನ್ನು ವಹಿಸಿಕೊಂಡಿದೆ. ಕಂಪನಿಯ ಮಾಲೀಕರು, ನಿರ್ದೇಶಕರು, ನಿರ್ವಹಣಾ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಎಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ.

ಟಿ20 ವರ್ಲ್ಡ್‌ಕಪ್ 2024

ವಿಭಾಗ