LPG Price Cut: ಅಂತಾರಾಷ್ಟ್ರೀಯ ಮಹಿಳಾ ದಿನದ ಉಡುಗೊರೆ; ಎಲ್‌ಪಿಜಿ ಸಿಲಿಂಡರ್ ದರ ಇಳಿಸಿದ ಪ್ರಧಾನಿ ಮೋದಿ-india news pm modi announces reduction in lpg cylinder price on women s day nari shakti lpg price cut uks ,ರಾಷ್ಟ್ರ-ಜಗತ್ತು ಸುದ್ದಿ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Lpg Price Cut: ಅಂತಾರಾಷ್ಟ್ರೀಯ ಮಹಿಳಾ ದಿನದ ಉಡುಗೊರೆ; ಎಲ್‌ಪಿಜಿ ಸಿಲಿಂಡರ್ ದರ ಇಳಿಸಿದ ಪ್ರಧಾನಿ ಮೋದಿ

LPG Price Cut: ಅಂತಾರಾಷ್ಟ್ರೀಯ ಮಹಿಳಾ ದಿನದ ಉಡುಗೊರೆ; ಎಲ್‌ಪಿಜಿ ಸಿಲಿಂಡರ್ ದರ ಇಳಿಸಿದ ಪ್ರಧಾನಿ ಮೋದಿ

ಅಂತಾರಾಷ್ಟ್ರೀಯ ಮಹಿಳಾ ದಿನ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಅಚ್ಚರಿಯ ಉಡುಗೊರೆ ಪ್ರಕಟಿಸಿದರು. ಅಡುಗೆ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಇಳಿಕೆ ಮಾಡಿರುವುದಾಗಿ ಅವರು ಘೋಷಿಸಿದ್ದು, ಇದರಿಂದ ಅನೇಕರ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಿಲಿಂಡರ್ ದರ ಎಷ್ಟು ಇಳಿಕೆಯಾಗಿದೆ ಇಲ್ಲಿದೆ ಆ ವಿವರ.

ಎಲ್‌ಪಿಜಿ ಸಿಲಿಂಡರ್ ಸಾಂಕೇತಿಕ ಚಿತ್ರ (ಎಡ ಚಿತ್ರ); ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಡತ ಚಿತ್ರ (ಎಡ ಚಿತ್ರ)
ಎಲ್‌ಪಿಜಿ ಸಿಲಿಂಡರ್ ಸಾಂಕೇತಿಕ ಚಿತ್ರ (ಎಡ ಚಿತ್ರ); ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಡತ ಚಿತ್ರ (ಎಡ ಚಿತ್ರ) (Pexels/ HT Photo)

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನವಾದ ಇಂದು (ಮಾರ್ಚ್ 8) ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಅಚ್ಚರಿಯ ಉಡುಗೊರೆ ಪ್ರಕಟಿಸಿದರು. ಮಹಿಳಾ ದಿನದ ಉಡುಗೊರೆಯಾಗಿ ಮನೆಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು 100 ರೂಪಾಯಿ ಇಳಿಕೆ ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ನಿರ್ಧಾರವು ದೇಶದ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲಿದೆ ಎಂಬ ವಿಶ್ವಾಸವನ್ನೂ ಅವರು ಟ್ವೀಟ್‌ನಲ್ಲಿ ವ್ಯಕ್ತಪಡಿಸಿದರು.

ಸರ್ಕಾರದ ಈ ಕ್ರಮವು ವಿಶೇಷವಾಗಿ ದೇಶದ ಮಹಿಳೆಯರಿಗೆ ಹೆಚ್ಚಿನ ಪ್ರಯೋಜನವನ್ನು ಒದಗಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೊಂಡಿದ್ದಾರೆ.

"ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಕಡಿಮೆ ಮಾಡಲು ನಿರ್ಧರಿಸಿದೆ. ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ" ಎಂದು ಅವರು ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಹಿಳಾ ದಿನದ ಟ್ವೀಟ್‌

ಅಡುಗೆ ಅನಿಲವನ್ನು ಕೈಗೆಟುಕುವಂತೆ ಮಾಡುವ ಮೂಲಕ, ತಮ್ಮ ಸರ್ಕಾರವು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಬಯಸುತ್ತದೆ. ಕೇಂದ್ರದ ನಿರ್ಧಾರವು ಮಹಿಳೆಯರನ್ನು ಸಬಲೀಕರಣಗೊಳಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

"ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸುವ ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ 'ಸುಗಮ ಜೀವನ'ವನ್ನು ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ" ಎಂದು ಅವರು ಹೇಳಿದರು.

ಉಜ್ವಲ ಯೋಜನೆ ಅವಧಿ ವಿಸ್ತರಣೆ, ಸಬ್ಸಿಡಿ 300 ರೂಪಾಯಿಗೆ ಏರಿಕೆ

ಏತನ್ಮಧ್ಯೆ, ಎಲ್‌ಪಿಜಿ ದರಕ್ಕೆ ಸಂಬಂಧಿತ ನಿರ್ಧಾರದಲ್ಲಿ, ಏಪ್ರಿಲ್ 1 ರಿಂದ ಪ್ರಾರಂಭವಾಗುವ ಮುಂದಿನ ಹಣಕಾಸು ವರ್ಷದಲ್ಲಿ ಉಜ್ವಲ ಯೋಜನೆಯಡಿ ಬಡ ಮಹಿಳೆಯರಿಗೆ ಎಲ್ಪಿಜಿ ಸಿಲಿಂಡರ್ ಸಬ್ಸಿಡಿಗೆ 300 ರೂ.ಗಳನ್ನು ವಿಸ್ತರಿಸುವುದಾಗಿ ಕೇಂದ್ರ ಸರ್ಕಾರ ಗುರುವಾರ ಪ್ರಕಟಿಸಿದೆ.

ಕಳೆದ ವರ್ಷ ಅಕ್ಟೋಬರ್‌ ತಿಂಗಳಲ್ಲಿ ಕೇಂದ್ರ ಸರ್ಕಾರವು 14.2 ಕೆಜಿ ಸಿಲಿಂಡರ್‌ಗಳ ಸಬ್ಸಿಡಿಯನ್ನು ವರ್ಷಕ್ಕೆ 12 ರೀಫಿಲ್‌ಗಳಿಗೆ ಪ್ರತಿ ಸಿಲಿಂಡರ್ ಮೇಲೆ 200 ರೂಪಾಯಿ ಇದ್ದದ್ದನು 300 ರೂಪಾಯಿಗೆ ಏರಿಸಿತು. ಅದು ಈ ಮಾರ್ಚ್ 31ರ ತನಕ ಚಾಲ್ತಿಯಲ್ಲಿತ್ತು. ಆದರೆ ಇದನ್ನು ಈಗ 2025ರ ಮಾರ್ಚ್ ತನಕ ವಿಸ್ತರಿಸಲಾಗಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನದಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ಅಂತಾರಾಷ್ಟ್ರೀಯ ಮಹಿಳಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾರಿ ಶಕ್ತಿಯ ಶಕ್ತಿ ಮತ್ತು ಧೈರ್ಯಕ್ಕೆ ನಮಸ್ಕರಿಸಿದ್ದಾರೆ.

"ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು! ನಮ್ಮ ನಾರಿ ಶಕ್ತಿಯ ಶಕ್ತಿ, ಧೈರ್ಯ ಮತ್ತು ಸ್ಥಿತಿಸ್ಥಾಪಕತ್ವಕ್ಕೆ ನಾವು ವಂದಿಸುತ್ತೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಗಳನ್ನು ಶ್ಲಾಘಿಸುತ್ತೇವೆ. ಶಿಕ್ಷಣ, ಉದ್ಯಮಶೀಲತೆ, ಕೃಷಿ, ತಂತ್ರಜ್ಞಾನ ಮತ್ತು ಹೆಚ್ಚಿನ ಉಪಕ್ರಮಗಳ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದು ಕಳೆದ ದಶಕದಲ್ಲಿ ನಮ್ಮ ಸಾಧನೆಗಳಲ್ಲಿಯೂ ಪ್ರತಿಫಲಿಸುತ್ತದೆ" ಎಂದು ಅವರು ಹೇಳಿದರು.

(This copy first appeared in Hindustan Times Kannada website. To read more on Lok Sabha Elections, Political developments, Lok Sabha Constituency profiles, Political Analysis in Kannada please visit kannada.hindustantimes.com)

mysore-dasara_Entry_Point
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.