ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ, ಐತಿಹಾಸಿಕ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ಕಾರ್ಯಕ್ರಮದ ವಿವರ ಹೀಗಿದೆ-india news pm modi to address from red fort as india celebrates 78th independence day today uks ,ರಾಷ್ಟ್ರ-ಜಗತ್ತು ಸುದ್ದಿ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ, ಐತಿಹಾಸಿಕ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ಕಾರ್ಯಕ್ರಮದ ವಿವರ ಹೀಗಿದೆ

ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ, ಐತಿಹಾಸಿಕ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ಕಾರ್ಯಕ್ರಮದ ವಿವರ ಹೀಗಿದೆ

Indian Independence Day; ರಾಷ್ಟ್ರ ರಾಜಧಾನಿದ ನವದೆಹಲಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ ಶುರುವಾಗಿದೆ. ಐತಿಹಾಸಿಕ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ಕಾರ್ಯಕ್ರಮದ ವಿವರ ಇಲ್ಲಿದೆ.

ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ, ಐತಿಹಾಸಿಕ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ಕಾರ್ಯಕ್ರಮದ ವಿವರ ಹೀಗಿದೆ
ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ, ಐತಿಹಾಸಿಕ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ಕಾರ್ಯಕ್ರಮದ ವಿವರ ಹೀಗಿದೆ

ನವದೆಹಲಿ: ದೇಶಾದ್ಯಂತ ಇಂದು (ಆಗಸ್ಟ್ 15) 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಸಡಗರ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಆಚರಣೆಗೆ ಚಾಲನೆ ನೀಡಲಿದ್ದಾರೆ. ಅದಾಗಿ, ದೇಶವಾಸಿಗಳನ್ನು ಉದ್ದೇಶಿಸಿ ಮಾತನಾಡುತ್ತಾರೆ.

ನರೇಂದ್ರ ಮೋದಿಯವರು ಪ್ರಧಾನಿಯಾಗಿ ಸತತ 11ನೇ ಸ್ವಾತಂತ್ರ್ಯ ದಿನದ ಭಾಷಣ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರತದ ಸೇನಾ ಸಾಮರ್ಥ್ಯ, ಸಾಂಸ್ಕೃತಿಕ ವೈವಿಧ್ಯತೆ ಮತ್ತು ತಾಂತ್ರಿಕ ಪ್ರಗತಿಯನ್ನು ಪ್ರದರ್ಶಿಸುವ ಭವ್ಯ ಮೆರವಣಿಗೆಯೂ ನಡೆಯಲಿದೆ.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ವಿವರ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ಕಾರ ಮತ್ತು ಸೇನೆಯ ಉನ್ನತಾಧಿಕಾರಿಗಳು ಬರಮಾಡಿಕೊಳ್ಳುವುದರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭವು ಪ್ರಾರಂಭವಾಗುತ್ತದೆ. ಅದಾಗಿ, ಗೌರವ ರಕ್ಷೆ ಪಡೆಯುವ ಕಾರ್ಯಕ್ರಮ ನಡೆಯಲಿದೆ. ಇದನ್ನು ಈ ವರ್ಷ ಭಾರತೀಯ ನೌಕಾಪಡೆಯು ಸಂಯೋಜಿಸುತ್ತಿದೆ.

ಪ್ರಧಾನ ಮಂತ್ರಿಯವರು ಸಾಂಕೇತಿಕವಾಗಿ ರಾಷ್ಟ್ರಧ್ವಜಾರೋಹಣ ಮಾಡಿದ ಕೂಡಲೇ 1721 ಫೀಲ್ಡ್ ಬ್ಯಾಟರಿ ಬಳಸಿಕೊಂಡು 105 ಎಂಎಂ ಲೈಟ್ ಫೀಲ್ಡ್ ಗನ್‌ಗಳಿಂದ 21 ಗನ್‌ ಸೆಲ್ಯೂಟ್‌ ಕಾರ್ಯ ನಡೆಯಲಿದೆ. ಪ್ರಧಾನಮಂತ್ರಿಯವರು ಗೌರವ ರಕ್ಷೆ ಸ್ವೀಕರಿಸುತ್ತಾರೆ. ಅದಾಗಿ ಕೆಂಪುಕೋಟೆ ಪ್ರವೇಶಿಸುತ್ತಾರೆ. ಅಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ನೌಕಾ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಮತ್ತು ಏರ್ ಫೋರ್ಸ್ ಚೀಫ್ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಪ್ರಧಾನಿಯವರನ್ನು ಬರಮಾಡಿಕೊಳ್ಳುತ್ತಾರೆ. ಅಲ್ಲಿ ಅವರು ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ.

ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜಾರೋಹಣ ಮಾಡುವಾಗ “ರಾಷ್ಟ್ರಧ್ವಜ ವಂದನೆ” ನಡೆಯುತ್ತದೆ. ಇದರಲ್ಲಿ ನ್ಯಾಷನಲ್ ಫ್ಲಾಗ್‌ ಗಾರ್ಡ್‌ನ ಭೂಸೇನೆ, ನೌಕಾ ಸೇನೆ, ವಾಯುಸೇನೆಗಳ ತಲಾ ಒಬ್ಬ ಅಧಿಕಾರಿ, 32 ಸಿಬ್ಬಂದಿ ಮತ್ತು ದೆಹಲಿ ಪೊಲೀಸ್ ಇಲಾಖೆಯ 128 ಅಧಿಕಾರಿಗಳು ಭಾಗವಹಿಸುತ್ತಾರೆ. ಒಬ್ಬ ಜ್ಯೂನಿಯರ್ ಕಮಿಷನ್‌ ಆಫೀಸರ್‌, 25 ಯೋಧರನ್ನು ಒಳಗೊಂಡ ಪಂಜಾಬ್‌ ರೆಜಿಮೆಂಟ್ ಮಿಲಿಟರಿ ಬ್ಯಾಂಡ್‌ ಇದೇ ವೇಳೆ ರಾಷ್ಟ್ರಗೀತೆಯನ್ನು ನುಡಿಸಲಿದೆ.

ಕೆಂಪುಕೋಟೆಯಿಂದ 7.30ಕ್ಕೆ ಪ್ರಧಾನಿ ಮೋದಿ ಭಾಷಣ

ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ 7.30ಕ್ಕೆ ಕೆಂಪುಕೋಟೆಯಿಂದ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರೆಸ್‌ ಇನ್‌ಫಾರ್ಮೇಶನ್ ಬ್ಯೂರೋ, ಪ್ರಧಾನಿಯವರ ಕಚೇರಿ ಯೂಟ್ಯೂಬ್‌ ಮತ್ತು ಇತರೆ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರಂಗಳಲ್ಲಿ ಈ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ.

ಯುವಕರು, ಬುಡಕಟ್ಟು ಸಮುದಾಯಗಳು, ರೈತರು, ಮಹಿಳೆಯರು ಮತ್ತು ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳು ಸೇರಿದಂತೆ ಭಾರತೀಯ ಸಮಾಜದ ವಿವಿಧ ವರ್ಗಗಳನ್ನು ಪ್ರತಿನಿಧಿಸುವ ಸುಮಾರು 6,000 ವಿಶೇಷ ಅತಿಥಿಗಳನ್ನು ಈ ಸಮಾರಂಭವನ್ನು ವೀಕ್ಷಿಸಲು ಈ ವರ್ಷ ಆಹ್ವಾನಿಸಲಾಗಿದೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.