ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ರೆಮಲ್ ಚಂಡಮಾರುತಕ್ಕೆ ತತ್ತರಿಸಿದ ಮಿಜೋರಾಂ; ಭಾರಿ ಮಳೆಯಿಂದ ಕುಸಿತ ಕಲ್ಲು ಕ್ವಾರಿ, 27 ಮಂದಿ ಸಾವು

ರೆಮಲ್ ಚಂಡಮಾರುತಕ್ಕೆ ತತ್ತರಿಸಿದ ಮಿಜೋರಾಂ; ಭಾರಿ ಮಳೆಯಿಂದ ಕುಸಿತ ಕಲ್ಲು ಕ್ವಾರಿ, 27 ಮಂದಿ ಸಾವು

ಮಿಜೋರಾಂನ ಐಜ್ವಾಲ್ ಪಟ್ಟಣದ ದಕ್ಷಿಣ ಹೊರವಲಯದಲ್ಲಿರುವ ಮೆಲ್ಥಮ್ ಮತ್ತು ಹ್ಲಿಮೆನ್ ನಡುವಿನ ಪ್ರದೇಶದಲ್ಲಿ ಸಂಭವಿಸಿದ ಕಲ್ಲು ಕ್ವಾರಿ ಕುಸಿತದಲ್ಲಿ 27 ಮಂದಿ ಮೃತಪಟ್ಟಿದ್ದಾರೆ.

ರೆಮಲ್ ಚಂಡಮಾರುತಕ್ಕೆ ತತ್ತರಿಸಿರುವ ಮಿಜೋರಾಂನಲ್ಲಿ ಭಾರಿ ಮಳೆಯಾಗುತ್ತಿದ್ದು, ಭೂಕುಸಿತದಿಂದ 14 ಮಂದಿ ಮೃತಪಟ್ಟಿದ್ದಾರೆ.
ರೆಮಲ್ ಚಂಡಮಾರುತಕ್ಕೆ ತತ್ತರಿಸಿರುವ ಮಿಜೋರಾಂನಲ್ಲಿ ಭಾರಿ ಮಳೆಯಾಗುತ್ತಿದ್ದು, ಭೂಕುಸಿತದಿಂದ 14 ಮಂದಿ ಮೃತಪಟ್ಟಿದ್ದಾರೆ.

ದೆಹಲಿ: ರೆಮಲ್ ಚಂಡಮಾರುತದ (Remal Cyclone) ನಂತರ ಮಿಚೋರಾಂನಲ್ಲಿ (Mizoram Heavy Rain) ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೆ, ಹಲವು ಅನಾಹುತಗಳಿಗೂ ಕಾರಣವಾಗಿದೆ. ಐಜ್ವಾಲ್‌ನ ಮೆಲ್ತುಮ್ ಪ್ರದೇಶದಲ್ಲಿ ಕಲ್ಲು ಕ್ವಾರಿ ಕುಸಿದು 27 ಜನರು ಸಾವನ್ನಪ್ಪಿದ್ದಾರೆ. ಇಂದು (ಮೇ 28, ಮಂಗಳವಾರ) ಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಮಗು ಸೇರಿದಂತೆ ಕೆಲವು ವ್ಯಕ್ತಿಗಳನ್ನು ಇಲ್ಲಿಯವರೆಗೆ ರಕ್ಷಿಸಲಾಗಿದೆ. ಆದರೆ ಭಾರಿ ಮಳೆಯಿಂದಾಗಿ ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ವಿಳಂಬವಾಗಿದೆ. ಐಜ್ವಾಲ್ ಜಿಲ್ಲೆಯ ಮೆಲ್ಥಮ್ ಮತ್ತು ಹ್ಲಿಮೆನ್ ಗಡಿಯಲ್ಲಿರುವ ಕಲ್ಲಿನ ಕ್ವಾರಿ ಕುಸಿದಿದ್ದು, ಅನೇಕ ಕಾರ್ಮಿಕರು ಅದರ ಅಡಿಯಲ್ಲಿ ಸಿಲುಕಿದ್ದಾರೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್‌), ಅಸ್ಸಾಂ ರೈಫಲ್ಸ್ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿಯೊಂದಿಗೆ ತಕ್ಷಣವೇ ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಮಿಜೋರಾಂನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅನಿಲ್ ಶುಕ್ಲಾ ಹೇಳಿದ್ದಾರೆ.

ಅಧಿಕೃತ ವರದಿಗಳ ಪ್ರಕಾರ, ಇಲ್ಲಿಯವರೆಗೆ 27 ಜನರು ಸಾವನ್ನಪ್ಪಿದ್ದಾರೆ. ರೆಮಲ್ ಚಂಡಮಾರುತದಿಂದಾಗಿ ಮೇ 27 ರಂದು ಭಾರಿ ಮಳೆ ಪ್ರಾರಂಭವಾಯಿತು. ನಂತರ ಇದು ಮೇ 28 ರಂದು ತೀವ್ರಗೊಂಡಿತು, ಇದು ರಾಜ್ಯದಾದ್ಯಂತ ಅನೇಕ ಪ್ರದೇಶಗಳಲ್ಲಿ ಭೂಕುಸಿತಕ್ಕೆ ಕಾರಣವಾಗಿದೆ. ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ್ ಮಂಗಳವಾರ ಬೆಳಿಗ್ಗೆ ಗೃಹ ಸಚಿವ ಕೆ ಸಪ್ದಂಗನ್ ಜೊಖಾವ್ತಾರ್ ಮತ್ತು ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ತುರ್ತು ಸಭೆ ನಡೆಸಿದ್ದಾರೆ.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ಸಿಎಂ ಲಾಲ್ದುಹೋಮಾ, ಅವರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ರೆಮಲ್ ಚಂಡಮಾರುತದಿಂದ ಉಂಟಾದ ಸಾವು ನೋವುಗಳು ಮತ್ತು ಹಾನಿಯನ್ನು ನಿರ್ಣಯಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ವಿವರಿಸಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ, ಇಲ್ಲಿಯವರೆಗೆ 14 ಜನರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಇನ್ನೂ ಕಾಣೆಯಾಗಿದ್ದಾರೆ."ಪರಿಸ್ಥಿತಿಯನ್ನು ನಿಭಾಯಿಸಲು ನಾವು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ" ಮುಖ್ಯಮಂತ್ರಿ ಲಾಲ್ದುಹೋಮಾ ಅವರು ಹೇಳಿದ್ದಾರೆ.

ರೆಮಲ್‌ ಚಂಡಮಾರುತಕ್ಕೆ ಕನಿಷ್ಠ 61 ಬಲಿ

ವರ್ಷದ ಮೊದಲ ಪ್ರಮುಖ ಚಂಡಮಾರುತವಾದ ರೆಮಲ್ ಚಂಡಮಾರುತವು ಮಂಗಳವಾರ ಕನಿಷ್ಠ 61 ಜನರನ್ನು ಬಲಿ ತೆಗೆದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ 8 ಮತ್ತು ಬಾಂಗ್ಲಾದೇಶದಲ್ಲಿ 17 ಸೇರಿದಂತೆ 25 ಮಂದಿಯನ್ನು ಬಲಿ ಪಡೆದಿದೆ ಎಂದು ಎಎಫ್‌ಪಿ ವರದಿಯಲ್ಲಿ ತಿಳಿಸಿದೆ. ಚಂಡಮಾರುತದಿಂದಾಗಿ ಮಿಜೋರಾಂನಲ್ಲಿ 27 ಜನರು ಸಾವನ್ನಪ್ಪಿದ್ದಾರೆ ಎಂದು ಮಿಜೋರಾಂನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳವಾರ (ಮೇ 28) ತಿಳಿಸಿದೆ.

ಮೇಘಾಲಯದಲ್ಲಿ ಚಂಡಮಾರುತದ ನಂತರದ ಅವಾಂತರಗಳಿಂದ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಅಸ್ಸಾಂನಲ್ಲಿ ರೆಮಲ್ ಚಂಡಮಾರುತದಿಂದಾಗಿ ಮಳೆ ಸಂಬಂಧಿತ ಘಟನೆಗಳಿಂದಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ನಾಗಾಲ್ಯಾಂಡ್‌ನಲ್ಲಿ ಇದೇ ರೀತಿಯ ಘಟನೆಗಳಲ್ಲಿ ನಾಲ್ಕು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024