ಇಂದು ಸಿಕ್ಕಿಂ ವಿಧಾನಸಭೆ ಚುನಾವಣಾ ಫಲಿತಾಂಶ; 2ನೇ ಬಾರಿ ಅಧಿಕಾರದ ನಿರೀಕ್ಷೆಯಲ್ಲಿ ಪ್ರೇಮ್ ತಮಾಂಗ್ -Sikkim Assembly Election Results
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ-ಎಸ್‌ಕೆಎಂ 17 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‌ಡಿಎಪ್ 15 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು. 2ನೇ ಬಾರಿಗೆ ಅಧಿಕಾರಿದ ನಿರೀಕ್ಷೆಯಲ್ಲಿ ಸಿಎಂ ಪ್ರೇಮ್ ಸಿಂಗ್ ತಮಾಂಗ್ ಅವರಿದ್ದಾರೆ.
ದೆಹಲಿ: ಸಿಕ್ಕಿಂ ವಿಧಾನಸಭಾ ಚುನಾವಣೆ 2024 ರ ಮತ ಎಣಿಕೆ (Sikkim Assembly Election Results 2024) ಇಂದು (ಜೂನ್ 2, ಭಾನುವಾರ) ಆರಂಭವಾಗಿದ್ದು, ಆಡಳಿತ ಪಕ್ಷ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ-ಎಸ್‌ಕೆಎಂ ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದೆ. ವಿರೋಧ ಎಸ್‌ಡಿಎಫ್ ಹಿನ್ನಡೆಯನ್ನು ಅನುಭವಿಸಿದೆ. ಲೋಕಸಭಾ ಚುನಾವಣೆ, ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯಗಳ ಚುನಾವಣಾ ಫಲಿತಾಂಶದ ಎರಡು ದಿನಗಳ ಮೊದಲೇ ಸಿಕ್ಕಿಂ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 6 ಗಂಟೆಯಿಂದಲೇ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದೆ.
ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ವಿಧಾನಸಭೆಗಳ ಅವಧಿ ಜೂನ್ 2 ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಜೂನ್ 2ರ ಭಾನುವಾರವೇ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣಾ ಮತ ಎಣಿಕೆಯನ್ನು ಆರಂಭಿಸಿದೆ. ಚುನಾವಣಾ ಆಯೋಗವು ಭಾರತದ ಸಂವಿಧಾನದ 324, 172 (1) ನೇ ವಿಧಿ ಮತ್ತು 1951 ರ ಜನ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 15 ಅನ್ನು ಉಲ್ಲೇಖಿಸಿದ್ದು, ಅವಧಿ ಮುಗಿಯುವ ಮೊದಲು ಚುನಾವಣೆಗಳನ್ನು ನಡೆಸುವುದು ಅವಶ್ಯಕ ಎಂದು ಹೇಳಿದೆ.
ಸಿಕ್ಕಿಂನ 32 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದ ಲೋಕಸಭಾ ಚುನಾವಣೆಯ ಜೊತೆಗೆ ಚುನಾವಣೆ ನಡೆದಿತ್ತು. ಸಿಕ್ಕಿಂನಲ್ಲಿ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ಮತ್ತು ಪ್ರತಿಪಕ್ಷ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (ಎಸ್‌ಡಿಎಫ್) ನಡುವೆ ತೀವ್ರ ಸ್ಪರ್ಧೆ ಇದೆ. ಕಳೆದ ನವೆಂಬರ್‌ನಲ್ಲಿ ಫುಟ್ಬಾಲ್ ತಾರೆ ಬೈಚುಂಗ್ ಭುಟಿಯಾ ಅವರ ಹಮ್ರೊ ಸಿಕ್ಕಿಂ ಪಕ್ಷವು ಎಸ್‌ಡಿಎಫ್‌ನೊಂದಿಗೆ ವಿಲೀನಗೊಂಡಿತ್ತು.
ಸಿಕ್ಕಿಂ ಸಿಎಂ ಪ್ರೇಮ್ ತಮಾಂಗ್, ಪತ್ನಿ ಕೃಷ್ಣ ಕುಮಾರಿ ರಾಯ್, ಮಾಜಿ ಸಿಎಂ ಪವನ್ ಚಾಮ್ಲಿಂಗ್ ಭವಿಷ್ಯ ಇಂದು ನಿರ್ಧಾರ
ಬಿಜೆಪಿ, ಕಾಂಗ್ರೆಸ್ ಮತ್ತು ಸಿಟಿಜನ್ ಆಕ್ಷನ್ ಪಾರ್ಟಿ-ಸಿಕ್ಕಿಂ (ಸಿಎಪಿ-ಎಸ್) ಅಭ್ಯರ್ಥಿಗಳು ಸಹ ಕಣದಲ್ಲಿದ್ದಾರೆ. ಭಾನುವಾರ (ಜೂನ್ 2) ಬೆಳಿಗ್ಗೆ 6 ರಿಂದ ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ ಸಿಕ್ಕಿಂನ ಆರು ಕೇಂದ್ರರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್, ಅವರ ಪತ್ನಿ ಕೃಷ್ಣ ಕುಮಾರಿ ರಾಯ್, ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಹಾಗೂ ಭಾರತದ ಮಾಜಿ ಫುಟ್ಬಾಲ್ ಆಟಗಾರ ಬೈಚುಂಗ್ ಭುಟಿಯಾ ಕಣದಲ್ಲಿರುವ 146 ಅಭ್ಯರ್ಥಿಗಳಲ್ಲಿ ಪ್ರಮುಖ ಅಭ್ಯರ್ಥಿಗಳು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಸ್‌ಕೆಎಂ 17 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‌ಡಿಎಫ್ 15 ಸ್ಥಾನಗಳನ್ನು ಗಳಿಸಿತ್ತು. ತಮಾಂಗ್ ತಮ್ಮ ಪಕ್ಷಕ್ಕೆ ಸತತ ಎರಡನೇ ಅವಧಿಗೆ ಆಯ್ಕೆಯಾಗುವ ಭರವಸೆ ಹೊಂದಿದ್ದಾರೆ. ಅವರ ಪತ್ನಿ ಕೃಷ್ಣ ಕುಮಾರಿ ರೈ ನಾಮ್ಚಿ-ಸಿಂಘಿಥಾಂಗ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಸಿಕ್ಕಿಂನಲ್ಲಿ 25 ವರ್ಷಗಳ ಕಾಲ ಆಡಳಿತ ನಡೆಸಿದ ತಮ್ಮ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಸಿಕ್ಕಿಂ ಜನರು ಮತ ಚಲಾಯಿಸಿದ್ದಾರೆ ಎಂದು 73 ವರ್ಷದ ಚಾಮ್ಲಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾಮ್ಚೆಬಂಗ್ ಮತ್ತು ಪೋಕ್ಲೋಕ್ ಕಮ್ರಾಂಗ್ ಎಂಬ ಎರಡು ವಿಧಾನಸಭಾ ಕ್ಷೇತ್ರಗಳ ಎರಡು ಕಡೆಗಳಲ್ಲಿ ಸ್ಪರ್ಧಿಸಿದ್ದಾರೆ. ಶಾಸಕರಾಗಿ ದಾಖಲೆಯ ಒಂಬತ್ತನೇ ಅವಧಿಗೆ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರು ಪ್ರಯತ್ನಿಸುತ್ತಿದ್ದಾರೆ.
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)