Fake Video: ಕಾವೇರಿ ವಿವಾದ, ತಮಿಳರ ಮೇಲೆ ಹಲ್ಲೆ ಕುರಿತ ಸುಳ್ಳು ಸುದ್ದಿ ಹರಡಿದ ಆರೋಪಿಗಳ ಪತ್ತೆಗೆ ತಮಿಳುನಾಡು ಪೊಲೀಸರ ಶೋಧ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Fake Video: ಕಾವೇರಿ ವಿವಾದ, ತಮಿಳರ ಮೇಲೆ ಹಲ್ಲೆ ಕುರಿತ ಸುಳ್ಳು ಸುದ್ದಿ ಹರಡಿದ ಆರೋಪಿಗಳ ಪತ್ತೆಗೆ ತಮಿಳುನಾಡು ಪೊಲೀಸರ ಶೋಧ

Fake Video: ಕಾವೇರಿ ವಿವಾದ, ತಮಿಳರ ಮೇಲೆ ಹಲ್ಲೆ ಕುರಿತ ಸುಳ್ಳು ಸುದ್ದಿ ಹರಡಿದ ಆರೋಪಿಗಳ ಪತ್ತೆಗೆ ತಮಿಳುನಾಡು ಪೊಲೀಸರ ಶೋಧ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕದಲ್ಲಿ ತಮಿಳರ ಮೇಲೆ ಹಲ್ಲೆ ನಡೆಸಲಾಗುತ್ತಿದೆ ಎಂಬ ವದಂತಿ ಹಬ್ಬಿಸುವುದರ ವಿರುದ್ಧ ತಮಿಳುನಾಡು ಪೊಲೀಸರು ಜನರಿಗೆ ಎಚ್ಚರಿಕೆ ನೀಡಿದ್ದು, ಕಠಿಣ ಎದುರಿಸಬೇಕಾದೀತು ಎಂದು ಹೇಳಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕದಲ್ಲಿ ತಮಿಳರ ಮೇಲೆ ಹಲ್ಲೆ ನಡೆಯುತ್ತಿದೆ ಎಂಬ ವದಂತಿ ಹಬ್ಬಿಸದಂತೆ ತಮಿಳುನಾಡು ಪೊಲೀಸರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕದಲ್ಲಿ ತಮಿಳರ ಮೇಲೆ ಹಲ್ಲೆ ನಡೆಯುತ್ತಿದೆ ಎಂಬ ವದಂತಿ ಹಬ್ಬಿಸದಂತೆ ತಮಿಳುನಾಡು ಪೊಲೀಸರು ಜನರಿಗೆ ಎಚ್ಚರಿಕೆ ನೀಡಿದ್ದಾರೆ. (HT Archives)

ಚೆನ್ನೈ: ಬರಪರಿಸ್ಥಿತಿ ಇರುವಾಗ ಕಾವೇರಿ ನೀರು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ಪ್ರತಿಭಟನೆಗಳು, ಬಂದ್‌ ಮುಂತಾದವು ತೀವ್ರಗೊಳ್ಳುತ್ತಿರುವಾಗಲೇ ಸುಳ್ಳು ಸುದ್ದಿಯನ್ನು ಹರಡುವುದಕ್ಕಾಗಿ ಹಳೆಯ ವಿಡಿಯೋವನ್ನು ವೈರಲ್ ಮಾಡುವ ಪ್ರಯತ್ನ ನಡೆದಿತ್ತು. ಈ ಪ್ರಯತ್ನ ನಡೆಸಿದ ಇಬ್ಬರ ವಿರುದ್ಧ ತಮಿಳುನಾಡು ಪೊಲೀಸರು ಕೇಸ್ ದಾಖಲಿಸಿದ್ದು, ಸುಳ್ಳು ಸುದ್ದಿ ಹರಡದಂತೆ ಎಚ್ಚರಿಕೆ ನೀಡಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕದಲ್ಲಿ ತಮಿಳರ ಮೇಲೆ ಹಲ್ಲೆ ನಡೆಸಲಾಗುತ್ತಿದೆ ಎಂಬ ವದಂತಿ ಹಬ್ಬಿಸುವುದರ ವಿರುದ್ಧ ತಮಿಳುನಾಡು ಪೊಲೀಸರು ಜನರಿಗೆ ಎಚ್ಚರಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ HT ಕನ್ನಡದ ಮಾತೃತಾಣ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಎರಡು ಪ್ರಕರಣಗಳು ದಾಖಲು, ಆರೋಪಿಗಳಿಗೆ ಶೋಧ ನಡೆಸಿರುವ ಪೊಲೀಸರು

ಮಧುರೈ ಮತ್ತು ತಿರುನಲ್ವೇಲಿ ಜಿಲ್ಲೆಗಳಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಒಬ್ಬ ಆರೋಪಿ ಟಿ ಸೀಮಾನ್ ವಿರುದ್ಧ ಮಧುರೈನಲ್ಲಿ ಐಪಿಸಿ ಸೆಕ್ಷನ್ 53, 153 ಎ, 504, 505 (1) (ಬಿ), 505 (2) ಮತ್ತು 67/ಐಟಿ ತಿದ್ದುಪಡಿ ಕಾಯ್ದೆ 2008 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವ್ಯಕ್ತಿ ಬೆಂಗಳೂರಿನಲ್ಲಿ ಲಾರಿ ಚಾಲಕನಿಗೆ ಥಳಿಸಿದ ಹಳೆಯ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅದೇ ರೀತಿ ಸೆಲ್ವನ್ ಎಂಬ ಮತ್ತೊಬ್ಬ ವ್ಯಕ್ತಿಯ ವಿರುದ್ಧ ತಿರುನಲ್ವೇಲಿ ಪೊಲೀಸರು ಐಪಿಸಿ ಸೆಕ್ಷನ್ 153, 153ಎ ಮತ್ತು 505(1) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ | ಕರ್ನಾಟಕ ಬಂದ್‌ನ ಲೈವ್ ಅಪ್ಡೇಟ್ಸ್‌ - ನಾಳೆ ಕರ್ನಾಟಕ ಬಂದ್‌, ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದ ಸೆಕ್ಷನ್ 144 ಜಾರಿ

"ಇಂತಹ ಸುಳ್ಳು ಸುದ್ದಿ ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡುವ ಮೂಲಕ ಅವರು ಎರಡು ರಾಜ್ಯಗಳ ನಡುವೆ ಸಾರ್ವಜನಿಕ ಅಸಂಗತವನ್ನು ಸೃಷ್ಟಿಸಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಪೊಲೀಸ್ ತಂಡಗಳು ಅವರಿಗಾಗಿ ಹುಡುಕಾಟ ನಡೆಸುತ್ತಿವೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು. ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವ ಇಂತಹ ವದಂತಿಗಳನ್ನು ಹರಡುವುದರ ವಿರುದ್ಧ ನಾವು ಜನರಿಗೆ ಕಠಿಣ ಎಚ್ಚರಿಕೆ ನೀಡುತ್ತಿದ್ದೇವೆ. ತಪ್ಪಿತಸ್ಥರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ' ಎಂದು ಹಿರಿಯ ಪೊಲೀಸ್ ಅಧಿಕಾರಿ ಎಚ್ಚರಿಸಿದ್ದಾರೆ.

ಕರ್ನಾಟಕ - ತಮಿಳುನಾಡು ಕಾವೇರಿ ವಿವಾದ ಏನು

ರಾಜ್ಯಗಳ ನಡುವಿನ ನೀರು ಹಂಚಿಕೆ ಒಪ್ಪಂದಗಳು ಮತ್ತು ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರಗಳ ಜಾರಿಯಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಕಳೆದ ವಾರ ನಿರಾಕರಿಸಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳವರೆಗೆ ತಮಿಳುನಾಡಿಗೆ 5,000 ಕ್ಯೂಸೆಕ್ (ಸೆಕೆಂಡಿಗೆ ಕ್ಯೂಬಿಕ್ ಅಡಿ) ನೀರು ಬಿಡುವುದನ್ನು ಮುಂದುವರಿಸಲು ಸೆಪ್ಟೆಂಬರ್ 18 ರಂದು ಕರ್ನಾಟಕಕ್ಕೆ ಸೂಚಿಸಿದೆ. ಅಲ್ಲದೆ, ಕಾವೇರಿ ನೀರು ನಿಯಂತ್ರಣ ಸಮಿತಿಯ ಸೆಪ್ಟೆಂಬರ್ 12 ರ ಆದೇಶವನ್ನು ಎತ್ತಿಹಿಡಿಯಿತು.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.