Budget 2024: ಜಾಗತಿಕ ಸಂಬಂಧ ಹೆಚ್ಚು ಸಂಕೀರ್ಣ, ಯುದ್ಧದ ಸವಾಲು; ಕೇಂದ್ರ ಬಜೆಟ್‌ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್‌ ಆತಂಕ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Budget 2024: ಜಾಗತಿಕ ಸಂಬಂಧ ಹೆಚ್ಚು ಸಂಕೀರ್ಣ, ಯುದ್ಧದ ಸವಾಲು; ಕೇಂದ್ರ ಬಜೆಟ್‌ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್‌ ಆತಂಕ

Budget 2024: ಜಾಗತಿಕ ಸಂಬಂಧ ಹೆಚ್ಚು ಸಂಕೀರ್ಣ, ಯುದ್ಧದ ಸವಾಲು; ಕೇಂದ್ರ ಬಜೆಟ್‌ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್‌ ಆತಂಕ

Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೇಂದ್ರ ಬಜೆಟ್‌ ಮಂಡಿಸುತ್ತಿದ್ದಾರೆ. ಬಜೆಟ್‌ ಭಾಷಣದಲ್ಲಿ ಅಂತಾರಾಷ್ಟ್ರೀಯ ಸಂಬಂಧ ಮತ್ತು ಯುದ್ಧಾಂತಕದ ಕುರಿತು ಮಾತನಾಡಿದ್ದಾರೆ. ಬಜೆಟ್‌ ಭಾಷಣದ ಮುಖ್ಯಾಂಶಗಳು ಇಲ್ಲಿವೆ.

Budget 2024: ಜಾಗತಿಕ ಸಂಬಂಧ ಹೆಚ್ಚು ಸಂಕೀರ್ಣ, ಯುದ್ಧಕ್ಕೆ ಪಂಥಾಹ್ವಾನ; ನಿರ್ಮಲಾ ಸೀತಾರಾಮನ್
Budget 2024: ಜಾಗತಿಕ ಸಂಬಂಧ ಹೆಚ್ಚು ಸಂಕೀರ್ಣ, ಯುದ್ಧಕ್ಕೆ ಪಂಥಾಹ್ವಾನ; ನಿರ್ಮಲಾ ಸೀತಾರಾಮನ್

ಬೆಂಗಳೂರು: ಜಗತ್ತಿನ ವಿವಿಧ ಭಾಗಗಳಲ್ಲಿ ಯುದ್ಧಗಳು ಮತ್ತು ಬಿಕ್ಕಟ್ಟುಗಳ ಸವಾಲು ಹೆಚ್ಚುತ್ತಿದ್ದು, ಜಾಗತಿಕ ಪರಿಸ್ಥಿತಿ ಹೆಚ್ಚು ಸಂಕೀರ್ಣ ಮತ್ತು ಸವಾಲಿನಿಂದ ಕೂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಕೇಂದ್ರ ಬಜೆಟ್‌ ಭಾಷಣದಲ್ಲಿ ಅವರು ಅಂತಾರಾಷ್ಟ್ರೀಯ ಸಂಬಂಧ ಮತ್ತು ಪರಿಸ್ಥಿತಿಗಳ ಕುರಿತು ಬೆಳಕು ಚೆಲ್ಲಿದ್ದಾರೆ. ಇಂತಹ ಜಾಗತಿಕ ಅಂಶಗಳು ಅಭಿವೃದ್ಧಿಗೆ ಹೇಗೆ ತಡೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ರಷ್ಯಾ-ಉಕ್ರೇನ್ ಸಂಘರ್ಷ ಮತ್ತು ಇಸ್ರೇಲ್-ಹಮಾಸ್ ಯುದ್ಧವು ಜಾಗತಿಕ ಪೂರೈಕೆ ಸರಪಳಿಯನ್ನು ಅಡ್ಡಿಪಡಿಸಿದೆ, ವ್ಯಾಪಾರದ ಮೇಲೆ ಪರಿಣಾಮ ಬೀರಿದೆ ಎಂದು ಅವರು ಹೇಳಿದ್ದಾರೆ. ಭಾರತವು ವಿಶ್ವ ಕ್ರಮಾಂಕದಲ್ಲಿ ಪ್ರಮುಖ ದೇಶವಾಗಿ ಹೊರಹೊಮ್ಮುತ್ತಿದೆ. ಇಂಧನ ಮತ್ತು ರಸಗೊಬ್ಬರ ಬೆಲೆ ಏರಿಕೆಯಲ್ಲಿನ ಜಾಗತಿಕ ಸವಾಲುಗಳನ್ನು ಭಾರತ ಯಶಸ್ವಿಯಾಗಿ ನ್ಯಾವಿಗೇಟ್ ಮಾಡಿದೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಹಣಕಾಸು ವಲಯವನ್ನು ಬಲಪಡಿಸುತ್ತಿರುವುದು ಉಳಿತಾಯ, ಸಾಲ ಮತ್ತು ಹೂಡಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಸಹಾಯ ಮಾಡಿದೆ ಎಂದು ಅವರು ಹೇಳಿದರು. ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ದಾಖಲೆ ಸಮಯದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರವು ಪಾರದರ್ಶಕ, ಜವಾಬ್ದಾರಿಯುತ, ವಿಶ್ವಾಸ ಆಧಾರಿತ ಆಡಳಿತವನ್ನು ದೇಶದ ನಾಗರಿಕರಿಗೆ ನೀಡಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಕೇಂದ್ರ ಸರಕಾರವು ದೇಶದ ಅಭಿವೃದ್ಧಿಗೆ ಅನುಕೂಲವಾಗುವಂತೆ ಮತ್ತು ಮುಂದಿನ ತಲೆಮಾರಿಗೆ ಅನುಕೂಲವಾಗುವಂತೆ ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮುಂದಿನ ಐದು ವರ್ಷಗಳು ಅಭೂತಪೂರ್ವ ಅಭಿವೃದ್ಧಿ ಮತ್ತು 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ಇದು ಸುವರ್ಣ ಅವಧಿಯಾಗಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಇದಕ್ಕಾಗಿ ದೇಶದ ಅಮೃತ್‌ ಕಾಲ ಕಾರ್ಯತಂತ್ರ ನೆರವಾಗುತ್ತಿದೆ ಎಂದರು.

ಇತ್ತೀಚೆಗೆ ಘೋಷಿಸಲಾದ ಭಾರತ ಮಧ್ಯಪ್ರಾಚ್ಯ ಯುರೋಪ್ ಆರ್ಥಿಕ ಕಾರಿಡಾರ್ ಭಾರತಕ್ಕೆ ಗೇಮ್ ಚೇಂಜರ್ ಆಗಲಿದೆ ಎಂದು ಹಣಕಾಸು ಸಚಿವರು ಹೇಳಿದರು. ಅಂತರರಾಷ್ಟ್ರೀಯ ಹಣಕಾಸು ಸೇವಾ ಕೇಂದ್ರಗಳ ಪ್ರಾಧಿಕಾರ (ಐಎಫ್‌ಎಸ್‌ಸಿಎ) ಸಾಗರೋತ್ತರ ಬಂಡವಾಳದ ಹರಿವಿಗೆ ದೃಢವಾದ ಗೇಟ್‌ವೇ ಅನ್ನು ರಚಿಸಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಪ್ರಧಾನಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಸರ್ಕಾರವು 43 ಕೋಟಿ ಸಾಲವನ್ನು ಒಟ್ಟು 22.5 ಲಕ್ಷ ಕೋಟಿ ರೂಪಾಯಿಗಳಿಗೆ ವಿಸ್ತರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ. ಕಳೆದ 10 ವರ್ಷಗಳಲ್ಲಿ ಮಹಿಳೆಯರಿಗೆ 30 ಕೋಟಿ ಮುದ್ರಾ ಯೋಜನೆ ಸಾಲ ನೀಡಲಾಗಿದೆ ಎಂದು ಹಣಕಾಸು ಸಚಿವರು ಹೇಳಿದರು. 2010 ರಲ್ಲಿ 20 ಚೆಸ್ ಗ್ರ್ಯಾಂಡ್‌ಮಾಸ್ಟರ್‌ಗಳಿಗೆ ಹೋಲಿಸಿದರೆ ಇಂದು ಭಾರತವು 80 ಚೆಸ್ ಗ್ರ್ಯಾಂಡ್‌ಮಾಸ್ಟರ್‌ಗಳನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.