ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿ ಇಲ್ಲದೆ ರಾಜಕೀಯ ಪ್ರಜಾಪ್ರಭುತ್ವ ಉಳಿಯದು- ಸ್ವಾತಂತ್ರ್ಯ ದಿನಾಚರಣೆ ಮುನ್ನಾದಿನ ರಾಷ್ಟ್ರಪತಿ ಭಾಷಣ-indian independence day president droupadi murmu quotes br ambedkar in her speech check imp points uks ,ರಾಷ್ಟ್ರ-ಜಗತ್ತು ಸುದ್ದಿ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿ ಇಲ್ಲದೆ ರಾಜಕೀಯ ಪ್ರಜಾಪ್ರಭುತ್ವ ಉಳಿಯದು- ಸ್ವಾತಂತ್ರ್ಯ ದಿನಾಚರಣೆ ಮುನ್ನಾದಿನ ರಾಷ್ಟ್ರಪತಿ ಭಾಷಣ

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿ ಇಲ್ಲದೆ ರಾಜಕೀಯ ಪ್ರಜಾಪ್ರಭುತ್ವ ಉಳಿಯದು- ಸ್ವಾತಂತ್ರ್ಯ ದಿನಾಚರಣೆ ಮುನ್ನಾದಿನ ರಾಷ್ಟ್ರಪತಿ ಭಾಷಣ

Indian Independence Day President Speech; 78ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿದ್ದು, ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿ ಇಲ್ಲದೆ ರಾಜಕೀಯ ಪ್ರಜಾಪ್ರಭುತ್ವ ಉಳಿಯದು ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಮಾತುಗಳನ್ನು ಉಲ್ಲೇಖಿಸಿದರು. ಅವರ ಭಾಷಣದ ಸಂಕ್ಷಿಪ್ತ ವರದಿ ಇಲ್ಲಿದೆ.

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿ ಇಲ್ಲದೆ ರಾಜಕೀಯ ಪ್ರಜಾಪ್ರಭುತ್ವ ಉಳಿಯದು ಎಂದು ಸ್ವಾತಂತ್ರ್ಯ ದಿನಾಚರಣೆ ಮುನ್ನಾದಿನ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು.
ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿ ಇಲ್ಲದೆ ರಾಜಕೀಯ ಪ್ರಜಾಪ್ರಭುತ್ವ ಉಳಿಯದು ಎಂದು ಸ್ವಾತಂತ್ರ್ಯ ದಿನಾಚರಣೆ ಮುನ್ನಾದಿನ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು.

ನವದೆಹಲಿ: ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವಾಸಿಗಳನ್ನು ಉದ್ದೇಶಿಸಿ ಮಾತನಾಡಿದ್ದು, ಸಂವಿಧಾನ ಶಿಲ್ಪಿ ಬಿಆರ್ ಅಂಬೇಡ್ಕರ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಗಮನಸೆಳೆದರು. ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾಜಿಕ ಪ್ರಜಾಪ್ರಭುತ್ವವನ್ನಾಗಿ ಮಾಡಬೇಕು. ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯಲ್ಲಿ ಇಲ್ಲದ ಹೊರತು ರಾಜಕೀಯ ಪ್ರಜಾಪ್ರಭುತ್ವ ಹೆಚ್ಚು ಕಾಲ ಉಳಿಯದು ಎಂದು ಅವರು ಹೇಳಿದರು.

ಈ ಸಲದ ಅಂದರೆ 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಸಾಧನೆ ಮತ್ತು T20 ವಿಶ್ವಕಪ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡದ ಐತಿಹಾಸಿಕ ಜಯವನ್ನು ರಾಷ್ಟ್ರಪತಿ ಮುರ್ಮು ಅವರು ಶ್ಲಾಘಿಸಿದರು. ಮುಂದಿನ ವರ್ಷ ಗಗನ್‌ಯಾನ್ ಮಿಷನ್‌ನ ಉಡಾವಣೆಗಾಗಿ ತಾನು ಕುತೂಹಲದಿಂದ ಕಾಯುತ್ತಿದ್ದೇನೆ ಎಂದು ಅವರು ಹೇಳಿದರು.

ಇತಿಹಾಸ ಸ್ಮರಿಸಿ ಸಾಮಾಜಿಕ ಪ್ರಜಾಪ್ರಭುತ್ವದ ಮಹತ್ವ ತಿಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

1) “ನಾವು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು "ಜನಜಾತೀಯ ಗೌರವ ದಿವಸ್‌" ಎಂದು ಆಚರಿಸಲಾರಂಭಿಸಿದ್ದೇವೆ. ಮುಂದಿನ ವರ್ಷ ಅವರ 150 ನೇ ಜಯಂತಿ ಆಚರಣೆ ನಡೆಯಲಿದ್ದು, ರಾಷ್ಟ್ರೀಯ ಪುನರುಜ್ಜೀವನಕ್ಕೆ ಅವರ ಕೊಡುಗೆಯನ್ನು ಇನ್ನಷ್ಟು ಗೌರವಿಸುವ ಅವಕಾಶ ಇದು.

2) “ಇಂದು (ಆಗಸ್ಟ್ 14), ದೇಶವು ವಿಭಜನೆಯ ಭೀಕರತೆಯನ್ನು ನೆನಪಿಸುವ ದಿನವಾದ “ವಿಭಜನ್ ವಿಭಿಷಿಕಾ ಸ್ಮೃತಿ ದಿವಸ್” ಅನ್ನು ಆಚರಿಸಲಾಗುತ್ತಿದೆ. ನಮ್ಮ ದೇಶ ವಿಭಜನೆಯಾಗಿ, ಲಕ್ಷಾಂತರ ಜನರು ಬಲವಂತದ ವಲಸೆಯನ್ನು ಅನುಭವಿಸಬೇಕಾಯಿತು. ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡರು. ನಾವು ಸ್ವಾತಂತ್ರ್ಯ ದಿನವನ್ನು ಆಚರಿಸುವ ಒಂದು ದಿನದ ಮೊದಲು, ನಾವು ಆ ಮಾನವ ದುರಂತವನ್ನು ನೆನಪಿಸಿಕೊಳ್ಳುತ್ತೇವೆ. ಸಂತ್ರಸ್ತ ಕುಟುಂಬದವರೊಂದಿಗೆ ಇರುತ್ತೇವೆ.

3) "ನಾವು ಸಂವಿಧಾನವನ್ನು ಅಂಗೀಕರಿಸಿದ 75 ನೇ ವರ್ಷವನ್ನು ಆಚರಿಸುತ್ತಿದ್ದೇವೆ. ಹೊಸದಾಗಿ ಸ್ವತಂತ್ರ ರಾಷ್ಟ್ರದ ಪ್ರಯಾಣಕ್ಕೆ ಅಡೆತಡೆಗಳಿಲ್ಲ. ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಸಾಂವಿಧಾನಿಕ ಆದರ್ಶಗಳಲ್ಲಿ ದೃಢವಾಗಿ ಉಳಿದಿರುವ ನಾವು, ಜಾಗತಿಕ ವೇದಿಕೆಯಲ್ಲಿ ಸ್ಥಾನ ಭಾರತವು ತನ್ನ ಹಕ್ಕುಗಳನ್ನು ಮರುಪಡೆಯಲು ಅನುವು ಮಾಡಿಕೊಡುವ ಉದ್ದೇಶವನ್ನು ಹೊಂದಿದ್ದೇವೆ."

4) "ನಮ್ಮ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್‌ ಅವರ ಮಾತುಗಳನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. 'ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾಜಿಕ ಪ್ರಜಾಪ್ರಭುತ್ವವನ್ನಾಗಿ ಮಾಡಬೇಕು. ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯಲ್ಲಿ ಇರದ ಹೊರತು ಅದು ಉಳಿಯುವುದಿಲ್ಲ ಎಂಬುದನ್ನು ಅವರು ಸರಿಯಾಗಿಯೇ ಹೇಳಿದ್ದಾರೆ. ರಾಜಕೀಯ ಪ್ರಜಾಪ್ರಭುತ್ವದ ಸ್ಥಿರ ಪ್ರಗತಿಯು ಸಾಮಾಜಿಕ ಪ್ರಜಾಪ್ರಭುತ್ವದ ಬಲವರ್ಧನೆಯ ಕಡೆಗೆ ಮಾಡಿದ ಪ್ರಗತಿಗೆ ಸಾಕ್ಷಿಯಾಗಿದೆ ಎಂದು ರಾಷ್ಟ್ರಪತಿಯವರು ಹೇಳಿದರು.

5) “ಈ ವರ್ಷ ನಮ್ಮ ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದಾಗ ಅರ್ಹ ಮತದಾರರ ಸಂಖ್ಯೆ ಸುಮಾರು 97 ಕೋಟಿಯಷ್ಟಿತ್ತು. ಇದೊಂದು ಐತಿಹಾಸಿಕ ದಾಖಲೆ. ಮನುಕುಲ ಇದುವರೆಗೆ ಕಂಡಿರುವ ಅತಿದೊಡ್ಡ ಚುನಾವಣಾ ಪ್ರಕ್ರಿಯೆ ಇದಾಗಿದೆ. ಇಂತಹ ದೊಡ್ಡ ಪ್ರಮಾಣದ ಪ್ರಕ್ರಿಯೆಯನ್ನು ಸುಗಮವಾಗಿ ಮತ್ತು ದೋಷರಹಿತವಾಗಿ ನಡೆಸಿದ್ದಕ್ಕಾಗಿ ಭಾರತದ ಚುನಾವಣಾ ಆಯೋಗವನ್ನು ಅಭಿನಂದಿಸಬೇಕು.

ಅರ್ಥ ವ್ಯವಸ್ಥೆ ಸುಧಾರಣೆ, ಕಾನೂನು ಸುಧಾರಣೆಗಳ ಉಲ್ಲೇಖ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಭಾಷಣದಲ್ಲಿ, 2021 ರಿಂದ 2024 ರವರೆಗೆ, ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ. ವಾರ್ಷಿಕ ಸರಾಸರಿ ಬೆಳವಣಿಗೆ ದರ 8 ಪ್ರತಿಶತ ಇದೆ. ಇದರಿಂದ ಜನರ ಕೈಗೆ ಹೆಚ್ಚು ಹಣ ಸೇರುವುದಲ್ಲದೆ, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆಯೂ ತೀವ್ರವಾಗಿ ಕಡಿಮೆಯಾಗಿದೆ ಎಂದು ಹೇಳಿದರು. ಇದೇ ವೇಳೆ, ಅರ್ಥ ವ್ಯವಸ್ಥೆ ಸುಧಾರಣೆಯಿಂದ ಹಿಡಿದು ಕಾನೂನು ಸುಧಾರಣೆಗಳವರೆಗೆ ಮತ್ತು ಇತರೆ ವಿಷಯಗಳ ಕುರಿತು ಪ್ರಸ್ತಾಪ ಮಾಡಿದರು. ಒಟ್ಟಾರೆಯಾಗಿ ದೇಶ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವುದನ್ನು ಶ್ಲಾಘಿಸಿದರು.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.