ಜಮ್ಮು- ಕಾಶ್ಮೀರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ, ಮೃತರ ಸಂಖ್ಯೆ 28ಕ್ಕೆ ಏರಿಕೆ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಜಮ್ಮು- ಕಾಶ್ಮೀರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ, ಮೃತರ ಸಂಖ್ಯೆ 28ಕ್ಕೆ ಏರಿಕೆ

ಜಮ್ಮು- ಕಾಶ್ಮೀರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ, ಮೃತರ ಸಂಖ್ಯೆ 28ಕ್ಕೆ ಏರಿಕೆ

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿದೆ. ಇದು ಪುಲ್ವಾಮಾ ದಾಳಿ ಬಳಿಕದ ಭೀಕರ ಉಗ್ರರ ದಾಳಿಯಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಪ್ರವಾಸಿಗರು ಮೃತಪಟ್ಟಿದ್ದಾರೆ. ಇಬ್ಬರು ವಿದೇಶಿಯರು ಕೂಡ ಉಗ್ರರ ದಾಳಿಯಿಂದ ಮೃತಪಟ್ಟಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಜನರು ಮೊಂಬತ್ತಿ ಹಿಡಿದು ಮೆರವಣಿಗೆ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಜನರು ಮೊಂಬತ್ತಿ ಹಿಡಿದು ಮೆರವಣಿಗೆ ನಡೆಸಿದ್ದಾರೆ. (PTI)

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿದೆ. ಇದು ಪುಲ್ವಾಮಾ ದಾಳಿ ಬಳಿಕದ ಭೀಕರ ಉಗ್ರರ ದಾಳಿಯಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಪ್ರವಾಸಿಗರು ಮೃತಪಟ್ಟಿದ್ದಾರೆ. ಇಬ್ಬರು ವಿದೇಶಿಯರು ಕೂಡ ಉಗ್ರರ ದಾಳಿಯಿಂದ ಮೃತಪಟ್ಟಿದ್ದಾರೆ. ಕರ್ನಾಟಕದ ಶಿವಮೊಗ್ಗದ ಉದ್ಯಮಿ ಮಂಜುನಾಥ್‌ ಕೂಡ ಉಗ್ರರ ದಳಯಿಂದ ಮೃತಪಟ್ಟಿದ್ದಾರೆ.

ಇಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸದ್ಯ ದೊರಕಿರುವ ಮಾಹಿತಿಯನ್ವಯ 26 ಜನರು ಮೃತಪಟ್ಟಿದ್ದಾರೆ. ಈ ಸಂಖ್ಯೆ ಏರಿಕೆ ಕಾಣುವ ಆತಂಕವೂ ಇದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ದಾಳಿಯಲ್ಲಿ ಗಾಯಗೊಂಡವರನ್ನು ಸ್ಥಳಾಂತರಿಸಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ಸೇವೆಗೆ ನಿಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿದ್ದು, ದಾಳಿ ಸ್ಥಳಕ್ಕೆ ಭೇಟಿ ನೀಡಿ ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಎಲ್ಲಾ ಏಜೆನ್ಸಿಗಳೊಂದಿಗೆ ತುರ್ತು ಭದ್ರತಾ ಪರಿಶೀಲನಾ ಸಭೆ ನಡೆಸಲು ಶಾ ಶೀಘ್ರದಲ್ಲೇ ಶ್ರೀನಗರಕ್ಕೆ ತೆರಳಲಿದ್ದಾರೆ.

Praveen Chandra B

TwittereMail
ಪ್ರವೀಣ್ ಚಂದ್ರ ಪುತ್ತೂರು: 'ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ'ದಲ್ಲಿ ಸಹಾಯಕ ಸುದ್ದಿ ಸಂಪಾದಕ. ಒನ್‌ ಇಂಡಿಯಾ, ವಿಜಯ ಕರ್ನಾಟಕದಲ್ಲಿ ಒಟ್ಟು 16 ವರ್ಷಗಳ ಅನುಭವ. ಆನ್‌ಲೈನ್‌ ಪತ್ರಿಕೋದ್ಯಮದಲ್ಲಿ ಎತ್ತರದ ಸಾಧನೆ ಮಾಡುವ ಕನಸು. ಡಿಜಿಟಲ್‌ ಜಗತ್ತಿನಲ್ಲಿ ಹೊಸತನ್ನು ಕಲಿಯುವ ಆಸಕ್ತಿ. ಮನರಂಜನೆ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ವಾಣಿಜ್ಯ, ಕರ್ನಾಟಕ, ದೇಶ- ವಿದೇಶ, ಸಿನಿಮಾ, ಷೇರುಪೇಟೆ, ಜೀವನಶೈಲಿ... ಹಲವು ವಿಚಾರಗಳ ಬಗ್ಗೆ ತಳಸ್ಪರ್ಶಿಯಾಗಿ ಬರೆಯಬಲ್ಲರು. ಎಸ್‌ಇಒ ತಂತ್ರಗಳನ್ನು ಪತ್ರಿಕೋದ್ಯಮದ ಹದಕ್ಕೆ ಪಳಗಿಸುವ ಸಾಮರ್ಥ್ಯ ರೂಢಿಸಿಕೊಂಡವರು. ಇಮೇಲ್: praveen.chandra@htdigital.in
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.