ರೈಲ್ವೆ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶ; ಬರೋಬ್ಬರಿ 4096 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಉತ್ತರ ರೈಲ್ವೆ
ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶ ಇಲ್ಲಿದೆ. ಬರೋಬ್ಬರಿ 4096 ಅಪ್ರೆಂಟಿಸ್ ಹುದ್ದೆಗಳಿಗೆ ಉತ್ತರ ರೈಲ್ವೆ ಅರ್ಜಿ ಆಹ್ವಾನಿಸುತ್ತಿದೆ. ಈ ಹುದ್ದೆಗಳಿಗೆ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಅರ್ಜಿ ಸಲ್ಲಿಸಬಹುದು.
ರೈಲ್ವೆ ನೇಮಕಾತಿ ಕೋಶವು (Railway Recruitment Cell) ಉತ್ತರ ರೈಲ್ವೆ ವಿವಿಧ ಕ್ಲಸ್ಟರ್‌ಗಳಲ್ಲಿ ಅಪ್ರೆಂಟಿಸ್‌ಶಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ರೈಲ್ವೆ ಇಲಾಖೆಯಲ್ಲಿ ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೂ ಅರ್ಜಿ ಸಲ್ಲಿಸಬಹುದಾಗಿದೆ. ವಿವಿಧ ವಿಭಾಗಗಳಲ್ಲಿ ಒಟ್ಟು 4,096 ಖಾಲಿ ಹುದ್ದೆಗಳನ್ನು ಈ ನೇಮಕಾತಿ ಮೂಲಕ ಭರ್ತಿ ಮಾಡುವ ಗುರಿಯನ್ನು ರೈಲ್ವೆ ಹೊಂದಿದೆ. ಅಭ್ಯರ್ಥಿಗಳ ಆಯ್ಕೆಗೆ ವೈವಾ ಅಥವಾ ಲಿಖಿತ ಪರೀಕ್ಷೆ ಇರುವುದಿಲ್ಲ. ಅರ್ಜಿಯ ಸ್ಕ್ರೀನಿಂಗ್ ಮತ್ತು ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕ್ಲಸ್ಟರ್‌ವಾರು ಹುದ್ದೆಯ ವಿವರಗಳು
- ಲಕ್ನೋ - 1607 ಪೋಸ್ಟ್‌ಗಳು
- ಅಂಬಾಲಾ - 494 ಪೋಸ್ಟ್‌ಗಳು
- ದೆಹಲಿ - 919 ಪೋಸ್ಟ್‌ಗಳು
- ಫಿರೋಜ್‌ಪುರ- 459 ಹುದ್ದೆಗಳು
- ಮೊರಾದಾಬಾದ್ - 16 ಪೋಸ್ಟ್‌ಗಳು
- C&W POH W/S ಜಗಧಾರಿ ಯಮುನಾ ನಗರ- 420 ಪೋಸ್ಟ್‌ಗಳು
- CWM/ASR- 125 ಪೋಸ್ಟ್‌ಗಳು
- NHRQ/NDLS P ಶಾಖೆ- 134 ಪೋಸ್ಟ್‌ಗಳು
ವಯಸ್ಸಿನ ಮಿತಿ
ಅಭ್ಯರ್ಥಿಗಳು 15 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. 16 ಸೆಪ್ಟೆಂಬರ್ 2024ಕ್ಕೆ 24 ವರ್ಷ ದಾಟಿರಬಾರದು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 05 ವರ್ಷಗಳ ಹೆಚ್ಚುವರಿ ವಿನಾಯಿತಿ ಇದೆ. ಇದೇ ವೇಳೆ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇದೆ. ವಿಕಲ ಚೇತನರು 10 ವರ್ಷಗಳವರೆಗೆ ಹೆಚ್ಚಿದ್ದರೂ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ ಏನು?
ITI ಅಥವಾ NCVT ಪ್ರಮಾಣಪತ್ರದೊಂದಿಗೆ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಆಯ್ಕೆ ಮಾನದಂಡ
ಅಭ್ಯರ್ಥಿಗಳ ಆಯ್ಕೆಯನ್ನು ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ಪರೀಕ್ಷೆ ಎರಡರಲ್ಲೂ ಅಭ್ಯರ್ಥಿಯು ಪಡೆದ ಶೇಕಡಾವಾರು ಅಂಕಗಳ ಸರಾಸರಿಯ ಆಧಾರದ ಮೇಲೆ ಮಾಡಲಾಗುತ್ತದೆ. ಮೆರಿಟ್ ಪಟ್ಟಿಯು ನವೆಂಬರ್ 2024ರಲ್ಲಿ ಬಿಡುಗಡೆಯಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRC ಉತ್ತರ ರೈಲ್ವೆಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಅರ್ಜಿ ನಮೂನೆಗಳನ್ನು ಸಲ್ಲಿಸಬಹುದು. ಈ ಹಂತಗಳನ್ನು ಅನುಸರಿಸಿ ಅರ್ಜಿ ಸಬ್ಮಿಟ್ ಮಾಡಿ.
- 'ಎಂಗೇಜ್‌ಮೆಂಟ್ ಆಫ್ ಆಕ್ಟ್ ಅಪ್ರೆಂಟಿಸ್' ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಇಲ್ಲಿ ಕ್ಯಾಂಡಿಡೇಟ್ ರಿಜಿಸ್ಟ್ರೇಷನ್ ಮೇಲೆ ಕ್ಲಿಕ್ ಮಾಡಿ.
- ಎಲ್ಲಾ ಮೂಲಭೂತ ವಿವರಗಳನ್ನು ಭರ್ತಿ ಮಾಡಿ.
- ನಿಮ್ಮ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಅರ್ಜಿ ಶುಲ್ಕವನ್ನು ಪಾವತಿಸಿದ ಬಳಿಕ ಸಬ್ಮಿಟ್ ಮಾಡಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದುಕೊಳ್ಳಿ..
ಇನ್ನಷ್ಟು ಉದ್ಯೋಗ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ | ರೈಲ್ವೆ ನೇಮಕಾತಿ ಮಂಡಳಿಯಿಂದ ಪ್ಯಾರಾಮೆಡಿಕಲ್ ಸಿಬ್ಬಂದಿ ನೇಮಕಾತಿ; 1376 ಹುದ್ದೆಗಳಿಗೆ ಅರ್ಜಿ ಆಹ್ವಾನ