Kargil Vijay Diwas: ಭಾರತದ ಗೌರವಕ್ಕಾಗಿ ಗಡಿ ನಿಯಂತ್ರಣ ರೇಖೆ ದಾಟಲು ಸಿದ್ಧ;ಕಾರ್ಗಿಲ್ ವಿಜಯ ದಿನ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಗುಡುಗು
ಇದುವರೆಗೆ ಭಾರತೀಯ ನಾಗರಿಕರು ಸೈನಿಕರನ್ನು ಪರೋಕ್ಷವಾಗಿ ಬೆಂಬಲಿಸಿದ್ದಾರೆ. ಆದರೆ ಅಗತ್ಯವಿದ್ದರೆ ಯುದ್ಧಭೂಮಿಯಲ್ಲಿ ನೇರವಾಗಿ ಸೈನಿಕರನ್ನು ಬೆಂಬಲಿಸಲು ಸಿದ್ಧರಾಗಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ದೆಹಲಿ: ಇಂದು ಕಾರ್ಗಿಲ್ ವಿಜಯ ದಿನ (Kargil Vijay Diwas). ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿನವನ್ನು ಆಚರಿಸಲಾಗುತ್ತದೆ. ಪಾಕಿಸ್ತಾನ ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆಯಲು ಜಮ್ಮು-ಕಾಶ್ಮೀರದಲ್ಲಿ 1999ರ ಮೇನಲ್ಲಿ ಆರಂಭವಾಗಿದ್ದ ಯುದ್ಧ ಜುಲೈ 26 ರಂದು ಆಪರೇಷನ್ ವಿಜಯ್ ಮೂಲಕ ಪಾಕ್ ಸೈನಿಯಕರನ್ನು ಸದೆಬಡಿದು ಭಾರತೀಯ ಸೈನಿಯಕರು ವಿಜಯ ಪತಾಕೆ ಹಾರಿಸಿದ್ದರು.
ಯುದ್ಧದಲ್ಲಿ ಹುತಾತ್ಮರಾದ ಯೋಧರನ್ನು ಭಾರತ ಸ್ಮರಿಸಲು ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿನವನ್ನು ಆಚರಿಸಲಾಗುತ್ತಿದೆ. ಇಂದಿನಗೆ 24 ವರ್ಷಗಳಾಗಿದ್ದು, ಲಡಾಖ್‌ನ ಕಾರ್ಗಿಲ್ ವಾರ್ ಮೆಮೋರಿಯಲ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯ ದಿನ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh), ಸ್ಮಾರಕಕ್ಕೆ ಪುಷ್ಪ ನಮನ ಮೂಲಕ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಈ ವೇಳೆ ಹುತಾತ್ಮ ಯೋಧರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನದ ಮಾತುಗಳನ್ನು ಹೇಳಿದ್ದಾರೆ.
ಈ ವೇಳೆ ನೆರೆದಿದ್ದವರನ್ನು ಉದ್ದೇಶಿ ಮಾತನಾಡಿದ ರಾಜನಾಥ್ ಸಿಂಗ್, ಭಾರತವು ತನ್ನ ಗೌರವವನ್ನು ಕಾಪಾಡಿಕೊಳ್ಳಲು ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಒಸಿ) (Line of Control) ದಾಟಲು ಸಿದ್ಧವಾಗಿದೆ ಎಂದು ಗುಡುಗಿದ್ದಾರೆ.
ಯುದ್ಧದ ಪರಿಸ್ಥಿತಿಯಲ್ಲಿ ಭಾರತೀಯ ನಾಗರಿಕರು ಸೈನಿಕರನ್ನು ಪರೋಕ್ಷವಾಗಿ ಬೆಂಬಲಿಸಿದ್ದಾರೆ. ಆದರೆ ಅಗತ್ಯವಿದ್ದರೆ ಜನರು ಯುದ್ಧಭೂಮಿಯಲ್ಲಿ ನೇರವಾಗಿ ಸೈನಿಕರನ್ನು ಬೆಂಬಲಿಸಲು ಸಿದ್ಧರಾಗಿರಬೇಕು ಎಂದು ಹೇಳಿದ್ದಾರೆ. ಇದೇ ವೇಳೆ ರಷ್ಯಾ-ಉಕ್ರೇನ್ ಯುದ್ಧವನ್ನು ಪರೋಕ್ಷವಾಗಿ ಉಲ್ಲೇಖಿಸಿ, ದೇಶದ ನಾಗರಿಕರು ಯುದ್ಧದಲ್ಲಿ ಭಾಗವಹಿಸಿದ್ದರಿಂದ ರಷ್ಯಾ-ಉಕ್ರೇನ್ ಯುದ್ಧ ಒಂದು ವರ್ಷದಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನ ಭಾರತಕ್ಕೆ ಬೆನ್ನು ತಟ್ಟಿದೆ. ದೇಶಕ್ಕೆ ಮೊದಲ ಆದ್ಯತೆ ನೀಡಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ನಮನಗಳು. ಯುದ್ಧದ ಸಂದರ್ಭಗಳು ಬಂದಾಗಲೆಲ್ಲಾ ಭಾರತೀಯ ಜನರು ಸೈನಿಕರನ್ನು ಬೆಂಬಲಿಸಿದ್ದಾರೆ. ಆದರೆ ಆ ಬೆಂಬಲ ಪರೋಕ್ಷ ಎಂದಿದ್ದಾರೆ.
24ನೇ ವರ್ಷದ ಕಾರ್ಗಿಲ್ ವಿಜಯ ದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, 1999ರಲ್ಲಿ ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಭಾರತದ ವಿಜಯದಲ್ಲಿ ಅತ್ಯುತ್ತಮ ತ್ಯಾಗ ಮಾಡಿರುವ ಯೋಧರನ್ನು ಸ್ಮರಿಸುತ್ತಿದ್ದೇವೆ. ಕಾರ್ಗಿಲ್ ವಿಜಯ ದಿನ ಭಾರತದ ಯೋಧರ ಶೌರ್ಯವನ್ನು ನೆನಪಿಸುತ್ತದೆ. ಆ ಹುತಾತ್ಮರು ದೇಶದ ಜನತೆಗೆ ಸದಾ ಸ್ಪೂರ್ತಿಯಾಗಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ವಿಭಾಗ