ಕನ್ನಡ ಸುದ್ದಿ  /  Nation And-world  /  Karnataka Bharat Gaurav Kashi Darshan Pilgrims Welcomed At Kashi By Minister Shashikala Jolle

Kashi Darshan Train: ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ಯಾತ್ರಾರ್ಥಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆಯಿಂದ ಸ್ವಾಗತ

ಮೊನ್ನೆಯಷ್ಟೆ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಈ ವಿಶೇಷ ರೈಲಿನ ಮೊದಲ ಟ್ರಿಪ್ ನ ಯಾತ್ರಾರ್ಥಿಗಳನ್ನು ಹೊತ್ತಂತಹ ರೈಲು ಇಂದು ವಾರಣಾಸಿಗೆ ಬಂದು ತಲುಪಿತು.

ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ಯಾತ್ರಾರ್ಥಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆಯಿಂದ ಸ್ವಾಗತ
ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ಯಾತ್ರಾರ್ಥಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆಯಿಂದ ಸ್ವಾಗತ

ವಾರಣಾಸಿ: ಮೊನ್ನೆಯಷ್ಟೆ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಈ ವಿಶೇಷ ರೈಲಿನ ಮೊದಲ ಟ್ರಿಪ್ ನ ಯಾತ್ರಾರ್ಥಿಗಳನ್ನು ಹೊತ್ತಂತಹ ರೈಲು ಇಂದು ವಾರಣಾಸಿಗೆ ಬಂದು ತಲುಪಿತು.

ಬನಾರಸ್ ರೈಲು ನಿಲ್ದಾಣದಲ್ಲಿ ಯಾತ್ರಾರ್ಥಿಗಳಿಗೆ ಆತ್ಮೀಯ ಸ್ವಾಗತವನ್ನು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಶ್ರೀಮತಿ ಶಶಿಕಲಾ ಜೊಲ್ಲೆ ಕೋರಿದರು. ಪ್ರಥಮ ಟ್ರಿಪ್ ನ ಯಾತ್ರಾರ್ಥಿಗಳು ತಮ್ಮನ್ನು ಸ್ವಾಗತಿಸಲು ಆಗಮಿಸಿದ್ದ ಸಚಿವರನ್ನು ಕಂಡು ಸಂತಸಗೊಂಡರು. ರೈಲು ಪ್ರಯಾಣದಲ್ಲಿ ಅವರಿಗೆ ಸಿಕ್ಕಂತಹ ಆತಿಥ್ಯದ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.

ಎರಡು ದಿನಗಳ ಕಾಲ ವಾರಣಾಸಿಯಲ್ಲಿ ವಾಸ್ತವ್ಯ ಹೂಡಲಿರುವ ಯಾತ್ರಾರ್ಥಿಗಳು ನಂತರ ಪ್ರಯಾಗರಾಜ್ ಮತ್ತು ಅಯೋಧ್ಯೆಗೆ ಭೇಟಿ ನೀಡಿ ನಂತರ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.

ನ. 23 ರಂದು ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ಟ್ರೈನ್‌ನ 2ನೇ ಟ್ರಿಪ್‌

ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ರೈಲ್ವೇ ಪ್ಯಾಕೇಜ್‌ನ ಎರಡನೇ ಟ್ರಿಪ್‌ ಗೆ ನವೆಂಬರ್‌ 23 ಕ್ಕೆ ಸಿದ್ದತೆ ನಡೆಸಿಕೊಳ್ಳುವಂತೆ ಅಧಿಕಾರಿಗಳಿಗೆ ಕೆಲ ದಿನಗಳ ಹಿಂದಷ್ಟೇ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದರು.

ರಾಜ್ಯದ ಜನರನ್ನ ಕಾಶಿ ದರ್ಶನಕ್ಕೆ ಕಳುಹಿಸಬೇಕು ಎನ್ನುವುದು ನನ್ನ ಆಶಯವಾಗಿತ್ತು. ಇದಕ್ಕೆ ಬೆನ್ನುಲಾಗಿ ನಿಂತಿದ್ದು ಸನ್ಮಾನ್ಯ ಮುಖ್ಯಮಂತ್ರಿಗಳು. ಮೊದಲ ಟ್ರಿಪ್‌ ನವೆಂಬರ್‌ 13 ರಂದು ಹೊರಡಲಿದೆ. 8 ದಿನಗಳ ಈ ಯಾತ್ರೆಯಲ್ಲಿ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗರಾಜ್‌ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ಹಿಂದಿರುಗಲಿದೆ ಎಂದು ಹೇಳಿದರು.

ಎರಡನೇ ಟ್ರಿಪ್‌ಗೂ ಈಗಾಗಲೇ 100 ಕ್ಕೂ ಹೆಚ್ಚು ಜನ ಬುಕ್ಕಿಂಗ್‌ ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ನವೆಂಬರ್‌ 23 ರಂದು ಎರಡನೇ ಟ್ರಿಪ್‌ ಗೆ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಬಾರಿಗೆ ಭಾರತ್‌ ಗೌರ್‌ ರೈಲನ್ನ ಪ್ರಾರಂಭಿಸುತ್ತಿರುವ ಹೆಗ್ಗಳಿಕೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಪಾತ್ರವಾಗಲಿದೆ ಎಂದು ಹೇಳಿದ್ದರು.

ಪ್ರಯಾಣೀಕರ ಅನುಕೂಲಕ್ಕಾಗಿ 3 ಟಯರ್‌ ಎಸಿಯ ವ್ಯವಸ್ಥೆಯನ್ನು ಮಾಡಲಾಗಿದ್ದು, 14 ಬೋಗಿಗಳ ಮೇಲೂ ರಾಜ್ಯದ 28 ದೇವಸ್ಥಾನಗಳ ಛಾಯಾಚಿತ್ರಗಳ ಬ್ರಾಂಡಿಂಗ್‌ ಮಾಡಲಾಗಿದೆ. ನಮ್ಮ ರಾಜ್ಯದ ದೇವಸ್ಥಾನಗಳನ್ನು ಭಾರತದ ಉದ್ದಗಲಕ್ಕೂ ಸಂಚರಿಸಲಿರುವ ಟ್ರೈನ್‌ ಮೂಲಕ ಪ್ರಚಾರ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದರು.

IPL_Entry_Point