ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Muslim Reservation: ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದು ವಿಚಾರ, ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌

Muslim Reservation: ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದು ವಿಚಾರ, ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌

ಕರ್ನಾಟಕದ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು (Karnataka Muslim Reservation) ರದ್ದುಗೊಳಿಸಿರುವ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮೇ 9ರವರೆಗೆ (Supreme Court Adjourns Hearing) ಮುಂದೂಡಿದೆ.

Muslim Reservation: ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದು ವಿಚಾರ, ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌
Muslim Reservation: ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದು ವಿಚಾರ, ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌ (HT_PRINT)

ಬೆಂಗಳೂರು: ಕರ್ನಾಟಕದ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು (Karnataka Muslim Reservation) ರದ್ದುಗೊಳಿಸಿರುವ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮೇ 9ರವರೆಗೆ (Supreme Court Adjourns Hearing) ಮುಂದೂಡಿದೆ. ಇಂದು ಈ ವಿಷಯದ ಕುರಿತು ಸುಪ್ರೀಂ ಕೋರ್ಟ್‌ ವಿಚಾರಣೆ ಮುಂದುವರೆಸಿ ಬಳಿಕ ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಬಹುದೇ ಎಂದು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ದ್ವಿಸದಸ್ಯ ಪೀಠಕ್ಕೆ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮನವಿ ಮಾಡಿದ್ದಾರೆ. ಅಲ್ಲಿಯವರೆಗೆ ಈ ಮೀಸಲಾತಿಯಡಿ ಯಾವುದೇ ನೇಮಕ, ಪ್ರವೇಶಾತಿ ನಡೆಸುವುದಿಲ್ಲ ಎಂದು ಕೋರ್ಟ್‌ಗೆ ತಿಳಿಸಿದ್ದಾರೆ. ಇದಕ್ಕೆ ಅರ್ಜಿದಾರರ ಪರ ಹಿರಿಯ ವಕೀಲ ದುಷ್ಯಂತ್ ದವೆ ವಿರೋಧ ವ್ಯಕ್ತಪಡಿಸಿದರು. ಈಗಾಗಲೇ ಅನೇಕ ಬಾರಿ ವಿಚಾರಣೆ ಮುಂದೂಡಿಕೆಯಾಗಿದೆ ಎಂದು ಹೇಳಿದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಅರ್ಜಿದಾರರ ಪರ ಹಿರಿಯ ವಕೀಲ ದುಷ್ಯಂತ್ ದವೆ, ಈಗಾಗಲೇ ಸಾಕಷ್ಟು ಬಾರಿ ವಿಚಾರಣೆ ಮುಂದೂಡಿಕೆಯಾಗಿದೆ. ಅವರ ಭರವಸೆಗಳು ನಮಗೆ ಯಾವ ರೀತಿಯಲ್ಲಿಯೂ ಸಹಾಯ ಮಾಡುತ್ತಿಲ್ಲ ಎಂದು ವಾದಿಸಿದರು. "ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮುದಾಯ ಸುಪ್ರೀಂಕೋರ್ಟ್‌ಗೆ ಬಂದಿದ್ದು, ಪ್ರತಿವಾದಕ್ಕಿಂತ ಪ್ರತಿಕ್ರಿಯೆಯೇ ಸಾಕು" ಎಂದು ದವೆ ಹೇಳಿದರು.

ಮುಂದಿನ ವಾರ ಅಥವಾ ಮೇ 9ಕ್ಕೆ ವಿಚಾರಣೆ ಮುಂದೂಡುವ ಕುರಿತು ಚರ್ಚಿಸಲಾಯಿತು. ಮುಂದೂಡಿದರೆ ಮತ್ತೆ ಕೋರ್ಟ್‌ ರಜಾ ಅವಧಿ ಆರಂಭವಾಗುತ್ತದೆ ಎಂದು ದವೆ ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಒಂದಿಷ್ಟು ಚರ್ಚೆಗಳು ನಡೆದು ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಲಾಯಿತು.

ರಾಜ್ಯ ಚುನಾವಣೆ ಹಿನ್ನಲೆಯಲ್ಲಿ ಲಿಂಗಾಯತ, ಒಕ್ಕಲಿಗರನ್ನು ಸೆಳೆಯುವ ಉದ್ದೇಶದಿಂದ ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ರದ್ದುಗೊಳಿಸಿತ್ತು. ರಾಜ್ಯದಲ್ಲಿ ಮುಸ್ಲಿಮರಿಗೆ ಶೇಕಡ 4 ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ.

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಲು ನಿರ್ಧರಿಸಿತ್ತು.

ನಾಲ್ಕು ಪ್ರತಿಶತ ಒಬಿಸಿ ಮುಸ್ಲಿಂ ಕೋಟಾವನ್ನು ಒಕ್ಕಲಿಗರು ಮತ್ತು ಲಿಂಗಾಯತರ ನಡುವೆ ವಿಂಗಡಿಸಿ ಹಂಚಲಾಗಿದೆ. ಈ ಕೋಟಾಕ್ಕೆ ಅರ್ಹರಾಗಿರುವ ಮುಸ್ಲಿಮರನ್ನು ಈಗ ಆರ್ಥಿಕವಾಗಿ ದುರ್ಬಲ ವರ್ಗ(EWS)ಗಳ ಅಡಿಯಲ್ಲಿ ವರ್ಗೀಕರಿಸಲಾಗಿದೆ.

IPL_Entry_Point