ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು; ಇಂದು ಶಿವಮೊಗ್ಗ, ಮೈಸೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
Karnataka Weather: ಮೇ 31, ಶುಕ್ರವಾರ ಕರ್ನಾಟಕದ ಹಲವೆಡೆ ಮಳೆ ಆದರೆ ಕೆಲವೆಡೆ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ. ಶನಿವಾರ ಶಿವಮೊಗ್ಗ, ಮೈಸೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮಳೆ ಆಗುತ್ತಿದೆ. ಇನ್ನು ಬೇಸಿಗೆ ಕಳೆಯಿತು ಎಂದುಕೊಂಡರೂ ಸೆಕೆ ಮಾತ್ರ ಹಲವೆಡೆ ಕಡಿಮೆ ಆಗಿಲ್ಲ. ಈ ತಿಂಗಳು ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಮೇ 31 ಶುಕ್ರವಾರ ರಾಜ್ಯದದಲ್ಲಿ ಹವಾಮಾನ ಹೇಗಿತ್ತು? ಇಂದು ಹಾಗೂ ಮುಂದಿನ 24 ಗಂಟೆಗಳಲ್ಲಿ ಎಲ್ಲಿ ಮಳೆಯಾಗಲಿದೆ ಎಂಬ ವಿವರವನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಶುಕ್ರವಾರ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 5 ಸೆ.ಮೀ, ಕೊಡಗು ಜಿಲ್ಲೆಯ ಗೋಣಿಕೊಪ್ಪದಲ್ಲಿ 3 ಸೆಮೀ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಉಡುಪಿಯ ಕೋಟ ಹಾಗೂ ಉತ್ತರ ಕನ್ನಡದ ಮಂಕಿಪುರದಲ್ಲಿ ತಲಾ 1 ಸೆಮೀ ಮಳೆ ಆಗಿದೆ. ಶುಕ್ರವಾರ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಅತಿ ಗಮನಾರ್ಹವಾಗಿ ಹೆಚ್ಚಳವಾಗಿದೆ. ಉತ್ತರ ಒಳನಾಡಿನ ಕೆಲವೊಂದು ಕಡೆಗಳಲ್ಲಿ ಕರಾವಳಿ , ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯವಾಗಿದೆ. ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ಇಂದು (ಶನಿವಾರ) ಎಲ್ಲೆಲ್ಲಿ ಮಳೆ ಆಗಲಿದೆ?
ಉಡುಪಿ, ದಕ್ಷಿಣ ಕನ್ನಡದ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph)
ಹಗುರದಿಂದ ಸಾಧಾರಣ ಮಳೆಯಾಗುವ ಸಾಧಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವೊಂದು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ
ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಯ ಒಂದೆರಡು
ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿಮೇ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು
ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೊರು ಜಿಲ್ಲೆಯ
ಒಂದೆರಡು ಕಡೆಗಳಲ್ಲಿ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೇಲೆೈ ಮಾರುತಗಳು (40-50 kmph)ವೆೇಗದಲ್ಲಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಸಾಧ್ಯತೆ.
ನಾಳೆ ( ಭಾನುವಾರ) ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ?
ದಕ್ಷಿಣ ಕನನಡ, ಉಡುಪಿ, ಉತುರ ಕನನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-
40 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗಾ, ಹಾಸನ, ಮಂಡ್ಯ, ಶಿವಮೊಗ್ಗ,
ತುಮಕರು, ಜಿಲ್ಲೆಯ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗುವ
ಸಾಧಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಸಾಧ್ಯತೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ವಾತಾವರಣ ಹೇಗಿರಲಿದೆ?
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶ: ಮೋಡ ಕವಿದ ವಾತಾವಾರಣ ಇದ್ದು ಹಗುರ ಮಳೆ ಆಗುವ ಸಾಧ್ಯತೆ ಇದೆ. ಮೇಲ್ಮೈ ಗಾಳಿಯು ಪ್ರಬಲವಾಗಿರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34 ಡಿಗ್ರಿ ಸೆಲ್ಸಿಯಸ್ ಹಾಗೂ 23 ಡಿಗ್ರಿ ಸೆಲ್ಸಿಯಸ್ ಇದೆ. ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ
ಸಾಧಯತೆಯಿದೆ. ಮೇಲ್ಮೈ ಗಾಳಿಯು ಪ್ರಬಲವಾಗಿರುತ್ತದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 34 ಡಿಗ್ರಿ ಸೆಲ್ಸಿಯಸ್ ಹಾಗೂ 23 ಡಿಗ್ರಿ ಸೆಲ್ಸಿಯಸ್ ಆಗಿರಬಹುದು.
