Karnataka Weather: ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ; ರಾಜ್ಯದ ಇತರೆಡೆ ಮುಂದಿನ 48 ಗಂಟೆಗಳಲ್ಲಿ ಹವಾಮಾನ ಹೀಗಿರಲಿದೆ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Karnataka Weather: ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ; ರಾಜ್ಯದ ಇತರೆಡೆ ಮುಂದಿನ 48 ಗಂಟೆಗಳಲ್ಲಿ ಹವಾಮಾನ ಹೀಗಿರಲಿದೆ

Karnataka Weather: ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ; ರಾಜ್ಯದ ಇತರೆಡೆ ಮುಂದಿನ 48 ಗಂಟೆಗಳಲ್ಲಿ ಹವಾಮಾನ ಹೀಗಿರಲಿದೆ

Karnataka Weather: ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ 48 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಶುಕ್ರವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅತಿ ಕಡಿಮೆ ಕನಿಷ್ಠ ಉಷ್ಣಾಂಶ 10.4 ಡಿ.ಸೆ. ದಾಖಲಾಗಿದೆ.

ರಾಜ್ಯದ ಇತರೆಡೆ ಮುಂದಿನ 48 ಗಂಟೆಗಳಲ್ಲಿ ಹವಾಮಾನ
ರಾಜ್ಯದ ಇತರೆಡೆ ಮುಂದಿನ 48 ಗಂಟೆಗಳಲ್ಲಿ ಹವಾಮಾನ (PC: Unsplash)

Karnataka weather: ಇಂದು ಶನಿವಾರ, ವೀಕೆಂಡ್‌ ಅಂದ್ರೆ ಕಚೇರಿ ಕೆಲಸಗಾರರಿಗೆ ಖುಷಿ. ಕೆಲವರಿಗಂತೂ ರಜೆಯ ಸಂಭ್ರಮ ಶುಕ್ರವಾರ ಸಂಜೆಯಿಂದಲೇ ಆರಂಭವಾಗುತ್ತದೆ. ಈ ಖುಷಿಯ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಕೆಲವೆಡೆ ಮಂಜು ಮುಸುಕಿದ ವಾತಾವರಣ ಕಂಡುಬಂದಿದೆ. ಫೆ 2 ಹಾಗೂ ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಹವಾಮಾನ ಹೇಗಿದೆ ನೋಡೋಣ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಶುಕ್ರವಾರದ ಹವಾಮಾನ ವರದಿ

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಶುಕ್ರವಾರ ರಾಜ್ಯಾದ್ಯಂತ ಒಣಹವೆ ಇತ್ತು. ಎಲ್ಲಿಯೂ ಮಳೆಯ ಪ್ರಮಾಣ ವರದಿಯಾಗಿಲ್ಲ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ 2.1 ಡಿ.ಸೆ.ನಿಂದ 4.0 ಡಿ.ಸೆವರೆಗೆ ಗಮನಾರ್ಹವಾಗಿ ಇಳಿಕೆಯಾಗಿದೆ. ಕರಾವಳಿ ಹಾಗು ದಕ್ಷಿಣ ಒಳನಾಡಿನಲ್ಲಿ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ 2.0 ಡಿ.ಸೆ. ನಿಂದ 2.0 ಡಿ.ಸೆವರೆಗೆ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೆೇಶಗಳಲ್ಲಿಅತಿ ಕಡಿಮೆ ಕನಿಷ್ಠ ಉಷ್ಣಾಂಶ 10.4 ಡಿ.ಸೆ. ಬೆಳಗಿನ ಜಾವ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ.

04 ಫೆಬ್ರವರಿ ಬೆಳಗಿನವರೆಗಿನ ರಾಜ್ಯದ ಹವಾಮಾನ ವರದಿ

ಮುಂದಿನ 48 ಗಂಟೆಗಳು, ಅಂದರೆ ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ಗುಡುಗು ಮುನ್ನೆಚರಿಕೆ ಅಥವಾ ಮಳೆಯ ಮುನ್ನೆಚರಿಕೆ ನೀಡಿಲ್ಲ. ಮೀನುಗಾರರಿಗೆ ಕೂಡಾ ಯಾವುದೇ ಮುನ್ಸೂಚನೆ ನೀಡಿಲ್ಲ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಹವಾಮಾನ ವರದಿ

ಶನಿವಾರ, ಭಾನುವಾರ ಸೇರಿದಂತೆ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ವರೆಗೂ ಇರುವ ಸಾಧ್ಯತೆಗಳಿದೆ.

Whats_app_banner

ವಿಭಾಗ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.