Kasaragod News: ಬೇಕೂರು ಸರ್ಕಾರಿ ಶಾಲೆಯಲ್ಲಿ ದೊಡ್ಡ ಅನಾಹುತ ; ಪಂಡಾಲ್ ಕುಸಿದು ವಿದ್ಯಾರ್ಥಿಗಳಿಗೆ ಗಾಯ; ದುರಂತ ಸ್ಥಳದ PHOTOS ಇಲ್ಲಿವೆ
- Kasaragod News: ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಸ್ಕೂಲ್ ಆವರಣದಲ್ಲಿ ಇಂದು ಚಪ್ಪರ ಕುಸಿದುಬಿದ್ದು ದೊಡ್ಡ ಅನಾಹುತ ಸಂಭವಿಸಿದೆ. ಪ್ರಾಥಮಿಕ ವರದಿ ಪ್ರಕಾರ, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
- Kasaragod News: ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಸ್ಕೂಲ್ ಆವರಣದಲ್ಲಿ ಇಂದು ಚಪ್ಪರ ಕುಸಿದುಬಿದ್ದು ದೊಡ್ಡ ಅನಾಹುತ ಸಂಭವಿಸಿದೆ. ಪ್ರಾಥಮಿಕ ವರದಿ ಪ್ರಕಾರ, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
(1 / 8)
ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಶಾಲೆಯಲ್ಲಿ ಇಂದು ಅಂದರೆ ಶುಕ್ರವಾರ ಮಂಜೇಶ್ವರ ಉಪಜಿಲ್ಲಾ ವಿಜ್ಞಾನ ಮೇಳ ನಡೆಯುತ್ತಿತ್ತು. ಈ ಕಾರ್ಯಕ್ರಮಕ್ಕಾಗಿ ತಾತ್ಕಾಲಿಕವಾಗಿ ಶೀಟ್ ಹೊದಿಸಿ ಹಾಕಿದ್ದ ಪೆಂಡಾಲ್ ಮಧ್ಯಾಹ್ನ ಸಂಪೂರ್ಣವಾಗಿ ಕುಸಿದು ಬಿದ್ದು ದೊಡ್ಡ ಅನಾಹುತ ಸಂಭವಿಸಿತು.
(2 / 8)
ಮಂಜೇಶ್ವರ ಉಪಜಿಲ್ಲಾ ಮಟ್ಟದ ಕಾರ್ಯಕ್ರಮವಾದ ಕಾರಣ ವಿವಿಧ ಶಾಲೆಗಳಿಂದ ಆಯ್ದ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಎಲ್ಲರೂ ಈ ಚಪ್ಪರದ ಅಡಿಯಲ್ಲಿ ಇದ್ದರು. ಕೆಲವು ಕುಳಿತುಕೊಂಡಿದ್ದರು. ಅನಾಹುತವಾದಾಗ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
(3 / 8)
ಸಂಘಟಕರು ಕೂಡಲೇ ತುರ್ತು ರಕ್ಷಣಾ ಕಾರ್ಯ ಮತ್ತು ಪರಿಹಾರ ಕಾರ್ಯಾಚರಣೆಗೆ ತೊಡಗಿದ್ದರಲ್ಲದೆ, ಸ್ಥಳೀಯಾಡಳಿತದ ನೆರವನ್ನೂ ಪಡೆದಿದ್ದರು. ಅಲ್ಲಿದ್ದವರೇ ಶೀಟ್‌ಗಳನ್ನು ಸರಿಸಿ, ಅಡಿಯಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.
(4 / 8)
ಶೀಟ್‌ಗಳನ್ನು ಬದಿಗೆ ಸರಿಸಿ ಗಾಯಗೊಂಡ ವಿದ್ಯಾರ್ಥಿಗಳು ಮತ್ತು ಇತರರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಪ್ರಾಣ ಹಾನಿ ಸಂಭವಿಸಿದ ಬಗ್ಗೆ ವರದಿ ಇಲ್ಲ.
(5 / 8)
ಮಂಜೇಶ್ವರ ಉಪಜಿಲ್ಲಾ ವಿಜ್ಞಾನ ಮೇಳ ನಿನ್ನೆ ಮತ್ತು ಇಂದು ಆಯೋಜನೆ ಆಗಿತ್ತು. ಗಂಭೀರ ಗಾಯಗೊಂಡ ಕೆಲವು ವಿದ್ಯಾರ್ಥಿಗಳನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಏಷ್ಯಾನೆಟ್ ನ್ಯೂಸ್ ವರದಿ ಮಾಡಿದೆ.
(6 / 8)
ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಹೆಚ್ಚಿನ ಮಕ್ಕಳು ಚಪ್ಪರದ ಅಡಿ ಇರಲಿಲ್ಲ ಎಂದು ಶಾಲಾ ಪ್ರಮುಖರು, ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾಗಿ ಸ್ಥಳೀಯ ಮಾಧ್ಯಮಗಳುವ ವರದಿ ಮಾಡಿವೆ.
ಇತರ ಗ್ಯಾಲರಿಗಳು