ಕನ್ನಡ ಸುದ್ದಿ  /  Nation And-world  /  Kerala Man Gets 107 Years Jail Term For Raping Mentally Challenged Daughter

107 Years Jail Term: ಮಾನಸಿಕ ಅಸ್ವಸ್ಥ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆಗೆ 107 ವರ್ಷಗಳ ಕಠಿಣ ಜೈಲು ಶಿಕ್ಷೆ

ತನ್ನ ಮಾನಸಿಕ ಅಸ್ವಸ್ಥ ಮಗಳ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಕೇರಳದ ಪತ್ತನಂತಿಟ್ಟ ಪೋಕ್ಸೊ ನ್ಯಾಯಾಲಯವು 107 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪತ್ತನಂತಿಟ್ಟ (ಕೇರಳ): ತನ್ನ ಮಾನಸಿಕ ಅಸ್ವಸ್ಥ ಮಗಳ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಕೇರಳದ ಪತ್ತನಂತಿಟ್ಟ ಪೋಕ್ಸೊ ನ್ಯಾಯಾಲಯವು 107 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂಪಾಯಿ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಮತ್ತೆ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಸ್ತರಣೆ ಆಗಲಿದೆ ಎಂದು ಕೋರ್ಟ್​ ಹೇಳಿದೆ. ದಂಡದ ಮೊತ್ತವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಸೂಚಿಸಿದೆ.

ಪತ್ನಿಯಿಂದ ದೂರವಾಗಿದ್ದ ಆರೋಪಿ, ಪತ್ತನಂತಿಟ್ಟ ಜಿಲ್ಲೆಯ ಗ್ರಾಮವೊಂದರಲ್ಲಿ ಮಗಳೊಂದಿಗೆ ವಾಸವಾಗಿದ್ದನು. ಆದರೆ 2020ರಲ್ಲಿ ಮಾನಸಿಕ ಅಸ್ವಸ್ಥ ಮಗಳ ಮೇಲೆಯೇ ನಿರಂತವಾಗಿ ಅತ್ಯಾಚಾರ ಎಸಗಿದ್ದನು. ಶಾಲೆಯಲ್ಲಿ ಅಳುತ್ತಾ ಕುಳಿತಿದ್ದ ಬಾಲಕಿಯನ್ನು ಶಿಕ್ಷಕರು ವಿಚಾರಿಸಿದಾಗ ಆಕೆ ನಡೆದ ಘಟನೆಯನ್ನು ಹೇಳಿಕೊಂಡಿದ್ದಾಳೆ.

ಬಳಿಕ ಶಿಕ್ಷಕರು ಚೈಲ್ಡ್ ಲೈನ್​ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು. ಚೈಲ್ಡ್ ಲೈನ್​ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಆರೋಪಿ ತಂದೆಯನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಆತ ದೋಷಿ ಎಂದು ಸಾಬೀತಾಗಿದ್ದು, ನ್ಯಾಯಾಲಯವು 107 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಪಶ್ಚಿಮ ಬಂಗಾಳ ಮೂಲದ 42 ವರ್ಷದ ಕಾರ್ಮಿಕನೊಬ್ಬ ಇನ್ನೂ ಅಂಬೆಗಾಲಿಡುವ ಮಗುವಿನ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರಾಖಂಡದ ಹಲ್ದ್ವಾನಿಯ ಕೋಟಾಬಾಗ್‌ನಲ್ಲಿ ಮೊನ್ನೆಯಷ್ಟೇ ನಡೆದಿದೆ. ಆರೋಪಿಯು ಸಂತ್ರಸ್ತ ಮಗುವಿನ ಕುಟುಂಬದೊಂದಿಗೆ ಕೂಲಿ ಕೆಲಸ ಮಾಡುತ್ತಿದ್ದ. ಮಗುವಿನ ಪೋಷಕರು ಬಿಹಾರದ ಕತಿಹಾರ್ ಜಿಲ್ಲೆಯವರಾಗಿದ್ದು, ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕೆಲಸ ಮಾಡಿಕೊಂಡಿದ್ದರು.

ಕೋಟಬಾಗ್‌ನ ಚಂದ್‌ಪುರ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ರೆಸಾರ್ಟ್‌ ಬಳಿ ಗುಡಿಸಲಿನಲ್ಲಿ ಮಗುವಿನ ಪೋಷಕರು ವಾಸವಾಗಿದ್ದರು. ಶುಕ್ರವಾರ ಮಧ್ಯಾಹ್ನ ದಂಪತಿ ಗುಡಿಸಲಿನಲ್ಲಿ ಇಲ್ಲದೇ ಇದ್ದಾಗ ನುಗ್ಗಿದ ಆರೋಪಿ ಕೃತ್ಯ ಎಸಗಿದ್ದಾನೆ.

ಗಮನಿಸಬಹುದಾದ ಇತರೆ ಸುದ್ದಿಗಳು

ಮಾಜಿ ಸಚಿವ, ಕಾಂಗ್ರೆಸ್ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

38 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಉಮಂಗ್ ಸಿಂಘಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿವರ ಓದಿಗೆ ಇಲ್ಲಿ ಕ್ಲಿಕ್​ ಮಾಡಿ

ಐಎಎಸ್ ಅಧಿಕಾರಿಯಾಗಬೇಕೆಂದಿದ್ದ ವಿದ್ಯಾರ್ಥಿನಿ ಅತ್ಯಾಚಾರಕ್ಕೊಳಗಾಗಿ ಸಾವು

ಐಎಎಸ್ ಅಧಿಕಾರಿಯಾಗಬೇಕೆಂದು ಕನಸು ಕಂಡಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ನಡೆದಿದೆ. ಹೆಚ್ಚಿನ ಓದಿಗೆ ಇಲ್ಲಿ ಕ್ಲಿಕ್ಕಿಸಿ

IPL_Entry_Point

ವಿಭಾಗ