PM Vidyanidhi: ನಿಮ್ಮ ಶಿಕ್ಷಣಕ್ಕಾಗಿ ಪಿಎಂ ವಿದ್ಯಾಲಕ್ಷ್ಮಿ ಯೋಜನೆಯಡಿ ಎಷ್ಟು ಸಾಲವನ್ನು ಪಡೆಯಬಹುದು, ಅರ್ಜಿ ಹೀಗೆ ಸಲ್ಲಿಸಿ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Pm Vidyanidhi: ನಿಮ್ಮ ಶಿಕ್ಷಣಕ್ಕಾಗಿ ಪಿಎಂ ವಿದ್ಯಾಲಕ್ಷ್ಮಿ ಯೋಜನೆಯಡಿ ಎಷ್ಟು ಸಾಲವನ್ನು ಪಡೆಯಬಹುದು, ಅರ್ಜಿ ಹೀಗೆ ಸಲ್ಲಿಸಿ

PM Vidyanidhi: ನಿಮ್ಮ ಶಿಕ್ಷಣಕ್ಕಾಗಿ ಪಿಎಂ ವಿದ್ಯಾಲಕ್ಷ್ಮಿ ಯೋಜನೆಯಡಿ ಎಷ್ಟು ಸಾಲವನ್ನು ಪಡೆಯಬಹುದು, ಅರ್ಜಿ ಹೀಗೆ ಸಲ್ಲಿಸಿ

ಭಾರತ ಸರ್ಕಾರವು ಉನ್ನತ ಶಿಕ್ಷಣ ಪಡೆಯಲು ಬಯಸುವವರಿಗೆ ಪಿಎಂ ವಿದ್ಯಾಲಕ್ಷ್ಮಿ ಜಾರಿಗೊಳಿಸಿದೆ. ಈ ಯೋಜನೆಗೆ ಯಾರು ಅರ್ಹರು?; ಅರ್ಜಿ ಸಲ್ಲಿಸುವುದು ಹೇಗೆ? ಎನ್ನುವ ವಿವರಗಳು ಇಲ್ಲಿವೆ.

ಉನ್ನತ ಶಿಕ್ಷಣ ಬಯಸುವವರು ವಿದ್ಯಾನಿಧಿ ಯೋಜನೆಯಡಿ ಆರ್ಥಿಕ ನೆರವನ್ನು ಪಡೆದುಕೊಳ್ಳಬಹುದು.
ಉನ್ನತ ಶಿಕ್ಷಣ ಬಯಸುವವರು ವಿದ್ಯಾನಿಧಿ ಯೋಜನೆಯಡಿ ಆರ್ಥಿಕ ನೆರವನ್ನು ಪಡೆದುಕೊಳ್ಳಬಹುದು.

PM Vidya Nidhi Scheme: ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಕೈಗೊಳ್ಳಬಯಸುವವರಿಗೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದರೂ ಅದರಲ್ಲಿ ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಪ್ರಮುಖವಾದದ್ದು. ಇದರಡಿ ಸಾಲಸೌಲಭ್ಯವನ್ನು ಪಡೆದುಕೊಂಡು ನಿಮ್ಮ ಉನ್ನತ ಶಿಕ್ಷಣದ ಆಸೆಗಳನ್ನು ಪೂರೈಸಲು ಅವಕಾಶವಿದೆ. ಇದಕ್ಕಾಗಿ ಹಲವಾರು ನಿಯಮಗಳನ್ನು ರೂಪಿಸಲಾಗಿದೆ. ಅದರಡಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಜಾರಿಗೊಳಿಸಲಾದ ಕೇಂದ್ರ ಸರ್ಕಾರದ ಕಾರ್ಯಕ್ರಮವಾದ ಪಿಎಂ- ವಿದ್ಯಾಲಕ್ಷ್ಮಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಹಲವರಿಗೆ ಈ ಯೋಜನೆಯ ನೆರವು ಸಿಗಲಿದೆ.

ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣವನ್ನು ಮುಂದುವರಿಸಲಾಗದಿರುವವರಿಗೆ ಸಹಾಯವಾಗಲಿದೆ. ಪತ್ರಿಕಾ ಮಾಹಿತಿ ಬ್ಯೂರೋ (PIB) ಪಿಎಂ- ವಿದ್ಯಾಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸುವ ಕುರಿತು ಪತ್ರಿಕಾ ಪ್ರಕಟಣೆಯನ್ನು ನೀಡಿದೆ.

ಏನಿದು ಯೋಜನೆ

ಪಿಎಂ- ವಿದ್ಯಾಲಕ್ಷ್ಮಿ ಯೋಜನೆಯಡಿ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ (QHEIs) ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಕೋರ್ಸಿಗೆ ಸಂಬಂಧಿಸಿದ ಪೂರ್ಣ ಪ್ರಮಾಣದ ಬೋಧನಾ ಶುಲ್ಕ ಮತ್ತು ಇತರ ವೆಚ್ಚಗಳನ್ನು ಭರಿಸಲು ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಕೊಲ್ಯಾಟರಲ್ ಇಲ್ಲದೆ, ಗ್ಯಾರಂಟಿದಾರರಿಲ್ಲದೆ ಸಾಲವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಉನ್ನತ ಶಿಕ್ಷಣ ಇಲಾಖೆಯು “ಪಿಎಂ-ವಿದ್ಯಾಲಕ್ಷ್ಮಿ” ಎಂಬ ಏಕೀಕೃತ ಪೋರ್ಟಲ್ ಅನ್ನು ಹೊಂದಿದ್ದು, ಎಲ್ಲಾ ಬ್ಯಾಂಕ್‌ಗಳು ಬಳಸಲು ಸರಳೀಕೃತ ಅಪ್ಲಿಕೇಶನ್ ಪ್ರಕ್ರಿಯೆಯ ಮೂಲಕ ವಿದ್ಯಾರ್ಥಿಗಳು ಶಿಕ್ಷಣ ಸಾಲ ಮತ್ತು ಬಡ್ಡಿ ರಿಯಾಯಿತಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಇ-ವೋಚರ್ ಮತ್ತು ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (CBDC) ವ್ಯಾಲೆಟ್‌ಗಳ ಮೂಲಕ ಬಡ್ಡಿ ಉಪದಾನದ ಪಾವತಿಯನ್ನು ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಉನ್ನತ ಶಿಕ್ಷಣ ಇಲಾಖೆಯು ಏಕೀಕೃತ ಪೋರ್ಟಲ್ ಅನ್ನು ರಿಲೀಸ್ ಮಾಡುತ್ತದೆ. ಉನ್ನತ ಶಿಕ್ಷಣ ಇಲಾಖೆಯು “PM-Vidyalaxmi” ಎಂಬ ಕ್ರೋಢೀಕೃತ ಪೋರ್ಟಲ್ ಅನ್ನು ಪರಿಚಯಿಸುತ್ತಿದೆ. ಅಲ್ಲಿ ವಿದ್ಯಾರ್ಥಿಗಳು ವಿದ್ಯಾಲಕ್ಷ್ಮಿ ಯೋಜನೆಯಡಿ ಶಿಕ್ಷಣ ಸಾಲ ಮತ್ತು ಬಡ್ಡಿ ರಿಯಾಯಿತಿಗಾಗಿ ಅರ್ಜಿ ಸಲ್ಲಿಸಬಹುದು. ಸಬ್ವೆನ್ಶನ್ ಪಾವತಿಯನ್ನು ಇ-ವೋಚರ್ ಮತ್ತು ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (CBDC) ವ್ಯಾಲೆಟ್‌ಗಳ ಮೂಲಕ ಮಾಡಲಾಗುತ್ತದೆ.

ಯೋಜನೆಗೆ ಯಾರು ಅರ್ಹರು?

ಈ ಯೋಜನೆಯು ಎನ್‌ಐಆರ್‌ಎಫ್‌( NIRF) ಶ್ರೇಯಾಂಕದಲ್ಲಿ ಅಗ್ರ 100ರೊಳಗೆ ಸ್ಥಾನ ಪಡೆದಿರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುತ್ತದೆ. ಜೊತೆಗೆ ಎನ್‌ಐಆರ್‌ಎಫ್‌ ನಲ್ಲಿ 101-200ರಲ್ಲಿ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಎಲ್ಲಾ ಕೇಂದ್ರ ಸರ್ಕಾರದ ಆಡಳಿತದ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದೆ. ವರ್ಷಕ್ಕೆ 22 ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದು.

ವಾರ್ಷಿಕ ಕುಟುಂಬ ಆದಾಯದ 8 ಲಕ್ಷ ರೂ.ವರೆಗಿನ ವಿದ್ಯಾರ್ಥಿಗಳಿಗೆ ಈ ಯೋಜನೆಯು 10 ಲಕ್ಷ ರೂ.ವರೆಗಿನ ಸಾಲದ ಮೇಲೆ ಶೇ 3 ಬಡ್ಡಿ ರಿಯಾಯಿತಿಯನ್ನು ನೀಡುತ್ತದೆ. ಪ್ರತಿ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ಸಹಾಯಧನವೂ ಇದೇ ಯೋಜನೆಯಡಿ ಸಿಗಲಿದೆ.

ಆಯ್ಕೆ ಹೇಗೆ

ಈ ಯೋಜನೆಯು ಕೇಂದ್ರ ವಲಯದ ಬಡ್ಡಿ ಸಬ್ಸಿಡಿ ಮತ್ತು ಶಿಕ್ಷಣ ಸಾಲಗಳ ಕ್ರೆಡಿಟ್ ಗ್ಯಾರಂಟಿ ಫಂಡ್ ಯೋಜನೆ, ವಾರ್ಷಿಕ ಕುಟುಂಬ ಆದಾಯ 4.5 ಲಕ್ಷ ರೂ.ವರೆಗೆ ಮತ್ತು ಅನುಮೋದಿತ ಸಂಸ್ಥೆಗಳಿಂದ ತಾಂತ್ರಿಕ ಅಥವಾ ವೃತ್ತಿಪರ ಕೋರ್ಸ್ ಅನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ಪೂರಕವಾಗಿರುತ್ತದೆ. ಅಂತಹ ವಿದ್ಯಾರ್ಥಿಗಳು ಶಿಕ್ಷಣ ಸಾಲಗಳಿಗೆ ಮೊರಟೋರಿಯಂ ಅವಧಿಯಲ್ಲಿ ಸಂಪೂರ್ಣ ಬಡ್ಡಿ ರಿಯಾಯಿತಿಯನ್ನು ಪಡೆಯಲಿದ್ದಾರೆ.

7.5 ಲಕ್ಷ ರೂ.ವರೆಗಿನ ಸಾಲಕ್ಕಾಗಿ ವಿದ್ಯಾರ್ಥಿಗಳು ಶೇ. 75 ಬಾಕಿ ಉಳಿದಿರುವ ಡೀಫಾಲ್ಟ್‌ನ ಕ್ರೆಡಿಟ್ ಗ್ಯಾರಂಟಿಯನ್ನು ಸಹ ಪಡೆಯಬಹುದು. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲಗಳನ್ನು ಲಭ್ಯವಾಗುವಂತೆ ಮಾಡಲು ಬ್ಯಾಂಕ್‌ಗಳಿಗೆ ಕೇಂದ್ರ ಸರ್ಕಾರವೇ ಬೆಂಬಲವನ್ನು ಕೊಡಲಿದೆ.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.