4ನೇ ಹಂತದ ಲೋಕಸಭೆ ಚುನಾವಣೆ; ಬೆಳಗ್ಗೆ 11ರ ವರೆಗೆ ಶೇ 25 ರಷ್ಟು ಮತದಾನ, ಈವರೆಗೆ ತಿಳಿಯಬೇಕಾದ 10 ಅಂಗಳಿವು
ಲೋಕಸಭೆ ಚುನಾವಣೆಯ 4 ನೇ ಹಂತದ ಮತದಾನ ಪ್ರಗತಿಯಲ್ಲಿದ್ದು, ಬೆಳಗ್ಗೆ 11 ಗಂಟೆಯವರೆಗೆ ಶೇ 25 ರಷ್ಟು ಮತದಾನವಾಗಿದೆ. ಪ್ರಮುಖ ನಾಯಕರು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಸೆಲೆಬ್ರಿಟಿಗಳು ಹಕ್ಕು ಚಲಾಯಿಸಿದ್ದಾರೆ. ಪ್ರಮುಖ 10 ಅಂಶಗಳು ಇಲ್ಲಿವೆ.

ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನ ಹಿನ್ನೆಲೆಯಲ್ಲಿ ಭಾರತ-ನೇಪಾಳ ಗಡಿ ಪ್ರದೇಶದವಾದ ಬಹ್ರೈಚ್‌ನಲ್ಲಿ ಥರು ಬುಕಟ್ಟು ಮತದಾರರು ಸಾಂಪ್ರದಾಯಿಕ ದಿರಿಸಿನಲ್ಲಿ ಬಂದು ಹಕ್ಕು ಚಲಾಯಿಸಿದ್ದಾರೆ. (PTI)
ದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) 4ನೇ ಹಂತದ ಮತದಾನ (4th Phase Voting) ಬಿರುಸಿನಿಂದ ಸಾಗಿದ್ದು, 9 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದ 96 ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಕೆಲವೆಡೆ ಮತದಾರರು ತಮ್ಮ ಸಾಂಪ್ರದಾಯಿಕ ದಿರಿಸಿನಲ್ಲಿ ಬಂದು ಗಮನಸೆಳೆದಿದ್ದಾರೆ. ಆಂಧ್ರ ಪ್ರದೇಶದ ಮತ್ತು ಒಡಿಶಾದ ವಿಧಾನಸಭೆಗಳಿಗೂ ಇಂದೇ (ಮೇ 13, ಸೋಮವಾರ) ಮತದಾನ ನಡೆಯುತ್ತಿದ್ದು, ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಸೆಲೆಬ್ರಿಟಿಗಳು ಬೆಳಗ್ಗೆಯೇ ಮತಗಟ್ಟೆಗಳಿಗೆ ತೆರಳು ಹಕ್ಕು ಚಲಾಯಿಸಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ ತಪ್ಪದೇ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. ಬೆಳಗ್ಗೆ 11 ಗಂಟೆಯವರೆಗೆ ಒಟ್ಟಾರೆಯಾಗಿ ಶೇಕಡಾ 25 ರಷ್ಟು ಮತದಾನವಾಗಿದೆ. ಈವರೆಗಿನ ಬೆಳವಣಿಗೆಗಳ ಬಗ್ಗೆ ತಿಳಿಯಬೇಕಾದ 10 ಅಂಶಗಳು ಇಲ್ಲಿವೆ.
4ನೇ ಹಂತದ ಮತದಾನದ ಬಗ್ಗೆ ಈವರೆಗೆ ತಿಳಿಯಬೇಕಾದ 10 ಅಂಶಗಳು ಇಲ್ಲಿವೆ
- 9 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದ ಒಟ್ಟು 96 ಲೋಕ್ಷ ಸಭಾ ಕ್ಷೇತ್ರಗಳಿಗೆ ಮೇ 13ರ ಸೋಮವಾರ ಮತದಾನ ನಡೆಯುತ್ತಿದೆ.
- ಬೆಳಗ್ಗೆ 11 ಗಂಟೆಯವರಿಗೆ ಒಟ್ಟಾರೆಯಾಗಿ ಶೇಕಡಾ 25 ರಷ್ಟು ಮತದಾನವಾಗಿದೆ. ಮತದಾರರು ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ
- ಆಂಧ್ರ ಪ್ರದೇಶ ವಿಧಾನಸಭೆಯ ಒಟ್ಟು 175 ಹಾಗೂ ಒಡಿಶಾದ 28 ವಿಧಾನಸಭೆಗಳಿಗೂ ಇಂದು ಮತದಾನ ನಡೆಯುತ್ತಿದೆ.
- 96 ಲೋಕಸಭಾ ಕ್ಷೇತ್ರಗಳಿಂದ 1,717 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 96 ಲೋಕಸಭಾ ಕ್ಷೇತ್ರಗಳ ಪೈಕಿ 25 ಆಂಧ್ರ ಪ್ರದೇಶ, 17 ತೆಲಂಗಾಣ, 13 ಉತ್ತರ ಪ್ರದೇಶ, 11 ಮಹಾರಾಷ್ಟ್ರ ಲೋಕಸಭಾ ಕ್ಷೇತ್ರಗಳು ಸೇರಿವೆ.
- ಮಧ್ಯಪ್ರದೇಶ, ಪಶ್ಚಿಮ ಬಂಗಾಳದಿಂದ ತಲಾ 8 ಲೋಕಸಭಾ ಕ್ಷೇತ್ರಗಳು, ಬಿಹಾರದಿಂದ 5, ಜಾರ್ಖಂಡ್ ಮತ್ತು ಒಡಿಶಾದಿಂದ ತಲಾ 4, ಜಮ್ಮು-ಕಾಶ್ಮೀರದ 1 ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ
- ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ, ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ, ಎಐಎಂಐಎಂ ನಾಯಕ ಅಸಾದುದ್ದೀನ್ ಒವೈಸಿ, ಬಿಜೆಪಿ ನಾಯಕ ಗಿರಿರಾಜ್ ಸಿಂಗ್, ಟಿಎಂಸಿ ನಾಯಕ ಶತ್ರುಘ್ನ ಸಿನ್ಹಾ, ಯೂಸುಫ್ ಪಠಾಣ್ ಕಣದಲ್ಲಿರುವ ಪ್ರಮುಖರು
- 96 ಕ್ಷೇತ್ರಗಳಲ್ಲಿನ ಎಲ್ಲಾ ಅರ್ಹ ಮತದಾರರು ತಪ್ಪದೇ ತಮ್ಮ ಹಕ್ಕು ಚಲಾಯಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳು ನಾಯಕರು ಮತದಾರರಲ್ಲಿ ಮನವಿ ಮಾಡಿದ್ದಾರೆ.
- ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮಾಜಿ ಸಿಎಂ ಚಂದ್ರಬಾಬು ನಾಯ್ಡು, ತೆಲಂಗಾಣ ಬಿಜೆಪಿ ಅಧ್ಯಕ್ಷ ಕಿಶನ್ ರೆಡ್ಡಿ, ಎಐಎಂಐಎಂ ನಾಯಕ ಅಸಾದುದ್ದೀನ್ ಒವೈಸಿ, ಗಿರಿರಾಜ್ ಸಿಂಗ್, ನಟ ಪವನ್ ಕಲ್ಯಾಣ್ ಸೇರಿದಂತೆ ಪ್ರಮುಖ ಬೆಳಗ್ಗೆಯೇ ಮತದಾನ ಮಾಡಿದ್ದಾರೆ.
- ನಟ ಚಿರಂಜೀವಿ, ಜೂನಿಯರ್ ಎನ್‌ಟಿಆರ್, ಅಲ್ಲು ಅರ್ಜುನ್, ನಾಗ ಚೈತನ್ಯ, ಖ್ಯಾತ ನಿರ್ದೇಶಕ ಎಸ್‌ಎಸ್ ರಾಜಮೌಳಿ, ಭಾರತೀಯ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಅವರಿಂದ ಮತದಾನ
- ಹೈದರಾಬಾದ್‌ನಲ್ಲಿ ಮುಸ್ಲಿಂ ಮತದಾರರ ಗುರುತಿನ ಚೀಟಿಯನ್ನು ಪರಿಶೀಲಿಸಿದ ಆರೋಪದಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ವಿರುದ್ಧ ಮಾಧವಿ ಲತಾ ಸ್ಪರ್ಧಿಸಿದ್ದಾರೆ.
- ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಎನ್‌ಡಿಎ (NDA) ಮತ್ತು ಕಾಂಗ್ರೆಸ್ (Congress) ನೇತೃತ್ವದ ಇಂಡಿಯಾ (INDIA) ಮೈತ್ರಿಕೂಟದ ನಡುವಿನ ಸಮರವಾಗಿದೆ. ಇಂಡಿಯಾ ಮೈತ್ರಿಕೂಟದಲ್ಲಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.