ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Lok Sabha Election: 4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಆರಂಭ; ಆಂಧ್ರ ಪ್ರದೇಶ ವಿಧಾನಸಭೆಗೂ ಇಂದೇ ವೋಟಿಂಗ್

Lok Sabha Election: 4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಆರಂಭ; ಆಂಧ್ರ ಪ್ರದೇಶ ವಿಧಾನಸಭೆಗೂ ಇಂದೇ ವೋಟಿಂಗ್

Lok Sabha Election 2024: ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನ ಆರಂಭವಾಗಿದೆ. 9 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದ 96 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಜೊತೆಗೆ ಆಂಧ್ರ ಪ್ರದೇಶ, ಒಡಿಶಾ ವಿಧಾನಸಭೆಗಳಿಗೂ ಮತದಾನ ಆರಂಭವಾಗಿದೆ.

ಲೋಕಸಭೆ ಚುನಾವಣೆಯ 4ನೇ ಹಂತದ ಮತಾದನ ಆರಂಭವಾಗಿದ್ದು, ಜನರು ರತಿ ಸಾಲಿನಲ್ಲಿ ನಿಂತರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಲೋಕಸಭೆ ಚುನಾವಣೆಯ 4ನೇ ಹಂತದ ಮತಾದನ ಆರಂಭವಾಗಿದ್ದು, ಜನರು ರತಿ ಸಾಲಿನಲ್ಲಿ ನಿಂತರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. (REUTERS)

ದೆಹಲಿ: ಲೋಕಸಭಾ ಚುನಾವಣೆ 2024 (Lok Sabha Election 2024) ರ ನಾಲ್ಕನೇ ಹಂತದ ಮತದಾನ (4th Phase Voting) ಇಂದು (ಮೇ 13, ಸೋಮವಾರ) ಬೆಳಗ್ಗೆಯಿಂದಲೇ ಆರಂಭವಾಗಿದೆ. ಮತದಾರರು ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಆಂಧ್ರ ಪ್ರದೇಶ (Andhra Pradesh Assembly Election 2024) ಹಾಗೂ ಒಡಿಶಾ ವಿಧಾನಸಭೆಗಳಿಗೂ (Odisha Pradesh Assembly Election 2024) ಇಂದೇ ಮತದಾನ ನಡೆಯುತ್ತಿದೆ. ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ನಟ ಜೂನಿಯರ್ ಎನ್‌ಟಿಆರ್, ಅಲ್ಲೂ ಅರ್ಜುನ್, ಮಾಜಿ ಸಿಎಂ, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಬೆಳಗ್ಗೆಯೇ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದಾರೆ. 9 ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದ 96 ಕ್ಷೇತ್ರಗಳಲ್ಲಿ ಮತದಾನ ನಡಯುತ್ತಿದೆ.

ಟ್ರೆಂಡಿಂಗ್​ ಸುದ್ದಿ

ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 96 ಲೋಕಸಭಾ ಸ್ಥಾನಗಳಿಗೆ ವೋಟಿಂಗ್ ಆರಂಭಗೊಂಡಿದೆ.

ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿತ್ತು. ಏಪ್ರಿಲ್ 26ರಂದು ನಾಮಪತ್ರಗಳ ಪರಿಶೀಲನೆ ನಡೆದಿದ್ದು. ನಾಮಪತ್ರ ಹಿಂಪಡೆಯಲು ಏಪ್ರಿಲ್ 29 ಕೊನೆಯ ದಿನವಾಗಿತ್ತು. ಆಂಧ್ರಪ್ರದೇಶದ ಎಲ್ಲಾ 25 ಲೋಕಸಭಾ ಸ್ಥಾನಗಳಿಗೆ ಇಂದು (ಮೇ 13, ಸೋಮವಾರ) ಮತದಾನ ನಡೆಯುತ್ತಿದ್ದು, ಆಡಳಿತ ಪಕ್ಷ ವೈಎಸ್‌ಆರ್‌ಸಿಪಿ ಹಾಗೂ ಟಿಡಿಪಿ ನಡುವೆ ನೇರ ಹಣಾಹಣಿ ನಡೆಯುತ್ತಿದೆ. ನೆರೆಯ ತೆಲಂಗಾಣದ 17 ಲೋಕಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ವೋಟಿಂಗ್ ನಡೆಯುತ್ತಿದೆ.

ಜಾರ್ಖಂಡ್‌ನಲ್ಲಿ ಮೇ 13, ಮೇ 20, ಮೇ 25 ಹಾಗೂ ಜೂನ್ 1 ರಂದು ಮತದಾನ ನಡೆಯಲಿದೆ. ಒಡಿಶಾದಲ್ಲಿ ಮೇ 13, ಮೇ 20, ಮೇ 25 ಮತ್ತು ಜೂನ್ 01 ರಂದು ನಾಲ್ಕು ಹಂತಗಳಲ್ಲಿ ಮತದಾನ ನಡೆಯಲಿದೆ.

4ನೇ ಹಂತದ ಚುನಾವಣೆಯೊಂದಿಗೆ 543 ಲೋಕಸಭಾ ಕ್ಷೇತ್ರಗಳ ಪೈಕಿ 283 ಕ್ಷೇತ್ರಗಳ ಮತದಾನ ಪೂರ್ಣಗೊಂಡಂತಾಗುತ್ತದೆ. ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್, ನಿತ್ಯಾನಂದ ರಾಯ್, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ, ಮಾಜಿ ಕ್ರಿಕೆಟಿಗರಾದ ಕೀರ್ತಿ ಅಜಾದ್, ಯೂಸುಫ್ ಪಠಾಣ್, ನಟ ಶತ್ರುಘ್ನ ಸಿಹ್ನಾ, ಕಾಂಗ್ರೆಸ್ ಅಧೀರ್ ರಂಜನ್ ಚೌಧರಿ, ಎಂಐಎಂನ ಅಸಾದುದ್ದಿನ್ ಒವೈಸಿ ಅವರ ರಾಜಯಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಹೈದರಾದಾಬಾದ್‌ ನಗರದ ಮತಗಟ್ಟೆಯಲ್ಲಿ ಅಸಾದುದ್ದಿನ್ ಒವೈಸಿ ಮತದಾನ ಮಾಡಿದ್ದಾರೆ. ಒವೈಸಿ ಪ್ರತಿಸ್ಪರ್ಧಿ ಬಿಜೆಪಿಯ ಮಾಧವಿ ಲತಾ ಕೂಡ ಬೆೆಳಗ್ಗೆಯೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಒವೈಸಿ ವಿರುದ್ಧ ಬಿಆರ್‌ಎಸ್‌ನಿಂದ ಗಡ್ಡಂ ಶ್ರೀನಿವಾಸ್ ಯಾದವ್ ಸ್ಪರ್ಧಿಸಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆ ಒಟ್ಟು ಏಳು ಹಂತಗಳಲ್ಲಿ ನಡೆಯುತ್ತಿದೆ. ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಹಾಗೂ ಜೂನ್ 1. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

IPL_Entry_Point