ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಲೋಕಸಭಾ ಚುನಾವಣೆ: ಬಿಜೆಪಿಗೆ ಈ ಬಾರಿ ಕರ್ನಾಟಕದಲ್ಲೇ ಸರಿಯಾದ ಹೊಡೆತ; ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಲೋಕಸಭಾ ಚುನಾವಣೆ: ಬಿಜೆಪಿಗೆ ಈ ಬಾರಿ ಕರ್ನಾಟಕದಲ್ಲೇ ಸರಿಯಾದ ಹೊಡೆತ; ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಅನೇಕ ರಾಜಕೀಯ ತಜ್ಞರು, ವಿಶ್ಲೇಷಕರೊಂದಿಗೆ ಮಾತನಾಡಿದ್ದೇನೆ. ಅವರು ಕೂಡ ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕರ್ನಾಟಕದಲ್ಲಿ ಹೆಚ್ಚಿನ ಸೀಟುಗಳು ಬರುವುದಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭವಿಷ್ಯ ನುಡಿದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕರ್ನಾಟಕದಲ್ಲಿ ಹೆಚ್ಚಿನ ಸೀಟುಗಳು ಬರುವುದಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭವಿಷ್ಯ ನುಡಿದಿದ್ದಾರೆ. (Hindustan Times)

ದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕರ್ನಾಟಕ, ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸ್ಥಾನಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ಭವಿಷ್ಯ ನುಡಿದಿದ್ದಾರೆ. ದೆಹಲಿಯಲ್ಲಿ ಶನಿವಾರ (ಮೇ 11) ಹಮ್ಮಿಕೊಂಡಿದ್ದ ರೋಡ್ ಶೋ ವೇಳೆ ಮಾತನಾಡಿರುವ ಅವರು, ಇದು ತಮ್ಮ ಭವಿಷ್ಯವಾಣಿಯಲ್ಲ, ಆದರೆ ಕಳೆದ 20 ಗಂಟೆಗಳಲ್ಲಿ ಜೈಲಿನ ಹೊರಗೆ ಸಂಪರ್ಕಕ್ಕೆ ಬಂದ ತಜ್ಞರು, ಸೆಫಾಲಜಿಸ್ಟ್‌ಗಳು ಹಾಗೂ ವಿಶ್ಲೇಷಕರ ಅಭಿಪ್ರಾಯವಾಗಿದೆ ಎಂದು ಕೇಜ್ರಿವಾಲ್ ಎಂದಿದ್ದಾರೆ.

ಟ್ರೆಂಡಿಂಗ್​ ಸುದ್ದಿ

"ನಾನು ಜೈಲಿನಿಂದ ಹೊರಬಂದ ಕಳೆದ 20 ಗಂಟೆಗಳಲ್ಲಿ ಅನೇಕ ತಜ್ಞರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಬಿಜೆಪಿಗೆ ಬಹುಮತ ಸಿಗುವುದಿಲ್ಲ ಎಂದು ಎಲ್ಲರೂ ಹೇಳುತ್ತಿದ್ದಾರೆ" ಎಂದು ಕೇಜ್ರಿವಾಲ್ ಹೇಳಿದರು. ಪಂಜಾಬ್‌ನಲ್ಲೂ ಬಿಜೆಪಿಗೆ ಇದೇ ಗತಿ ಕಾದಿದೆ. ಜೂನ್ 4ರಂದು ಮೋದಿ ಅಧಿಕಾರಕ್ಕೆ ಬರುವುದಿಲ್ಲ. ಇಂಡಿಯಾ ಸರ್ಕಾರವನ್ನು ರಚಿಸುತ್ತದೆ. ಎಎಪಿ ಅದರ ಭಾಗವಾಗಲಿದೆ. ದೆಹಲಿ ಸಂಪೂರ್ಣ ರಾಜ್ಯವಾಗಲಿದೆ ಎಂದು ಕೇಜ್ರಿವಾಲ್ ಭವಿಷ್ಯ ನುಡಿದಿದ್ದಾರೆ.

ಬಿಜೆಪಿಗೆ ಮತ ಹಾಕಿದರೆ ಅಮಿತ್ ಶಾ ಪ್ರಧಾನಿಯಾಗ್ತಾರೆ- ಕೇಜ್ರಿವಾಲ್

ನರೇಂದ್ರ ಮೋದಿ ಅವರು ಮುಂದಿನ ವರ್ಷ 75 ವರ್ಷ ತುಂಬಿದ ನಂತರ ನಿವೃತ್ತರಾಗುವುದರಿಂದ ನರೇಂದ್ರ ಮೋದಿ ಅವರಿಗೆ ಬಿಜೆಪಿಗೆ ಮತ ಹಾಕಿದರೆ ಅಮಿತ್ ಶಾ ಪ್ರಧಾನಿಯಾಗುತ್ತಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಎಎಪಿ ನಾಯಕರ ಈ ಹೇಳಿಕೆಯು ರಾಜಕೀಯ ವಲಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಅರವಿಂದ್ ಕೇಜ್ರಿವಾಲ್ ಈ ಹೇಳಿಕೆ ನೀಡುತ್ತಿದ್ದಂತೆ ಎಚ್ಚೆತ್ತ ಬಿಜೆಪಿ, ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರಿಯುತ್ತಾರೆ ಎಂದು ಪ್ರತಿಪಾದಿಸಿದೆ.ಕೇಜ್ರಿವಾಲ್ ಗೊಂದಲವನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದೆ. ಪ್ರಧಾನಿ ಮೋದಿ ಅವರು ಪಕ್ಷಕ್ಕೆ ತಂದ ವಯಸ್ಸಿನ ನಿಯಮವನ್ನು ಸ್ವತಃ ಮುರಿಯುತ್ತಾರೆಯೇ ಎಂದು ಎಎಪಿ ಪ್ರಶ್ನಿಸಿದೆ.

"ನನ್ನನ್ನು ಬಂಧಿಸಿದಾಗ, ನನ್ನ ಅಪರಾಧ ಏನು ಎಂದು ನಾನು ಆಶ್ಚರ್ಯಪಟ್ಟೆ. ನಾನು ದೆಹಲಿಯಲ್ಲಿ ಶಾಲೆಗಳು, ಮೊಹಲ್ಲಾ ಕ್ಲಿನಿಕ್‌ಗಳನ್ನು ನಿರ್ಮಿಸಿದ್ದು ನನ್ನ ಅಪರಾಧ. ನಾನು ಒಂದು ಸಣ್ಣ ಪಕ್ಷವನ್ನು ಹೊಂದಿದ್ದೇನೆ, ಅದು ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ ಇದೆ. ಅವರು ಅಂತಹ ದೊಡ್ಡ ಪಕ್ಷವನ್ನು ಹೊಂದಿದ್ದಾರೆ. ನಾನು ನಿಮಗೆ ಚಿಕಿತ್ಸೆಯನ್ನು ಉಚಿತವಾಗಿ ಮಾಡಿದ್ದೇನೆ ಆದರೆ ತಿಹಾರ್‌ ಜೈಲಿನಲ್ಲಿ ನನಗೆ 15 ದಿನಗಳವರೆಗೆ ಔಷಧಿ ನೀಡಲಿಲ್ಲ. ಬಿಜೆಪಿಯವರು ದೆಹಲಿ ಸರ್ಕಾರವನ್ನು ಕೆಳಗಿಳಿಸಲು ಬಯಸುತ್ತಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಅಬಕಾರಿ ನೀತಿ ಹಗರಣ ಆರೋಪ ಪ್ರಕರಣದಲ್ಲಿ ಎಎಪಿ ನಾಯಕ ಹಾಗೂ ದೆಹಲಿ ಅರಿವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ನ್ಯಾಯಾಂಗ ಬಂಧನದಲ್ಲಿರುವ ಅವರನ್ನು ತಿಹಾರ್ ಜೈಲಿನಲ್ಲಿ ಇರಿಲಾಗಿತ್ತು. ಸುಪ್ರೀಂ ಕೋರ್ಟ್ ಇತ್ತೀಚೆಗಷ್ಟೇ ಅವರಿಗೆ ಜೂನ್ 1ರ ವರೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ. ಜೂನ್ 2 ರಂದು ಮತ್ತೆ ಶರಣಾಗಬೇಕೆಂದು ಹೇಳಿದೆ. ಜಾಮೀನಿನ ಮೇಲೆ ಹೊರಗಡೆ ಬಂದರು ಅವರು ಮುಖ್ಯಮಂತ್ರಿ ಹುದ್ದೆಯ ಅಧಿಕಾರವನ್ನು ಚಲಾಯಿಸುವಂತಿಲ್ಲ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮಾತ್ರ ಸಮೀತಗೊಳಿಸಿ ಜಾಮೀನು ನೀಡಲಾಗಿದೆ. ತಮ್ಮ ವಿರುದ್ಧದ ಪ್ರಕರಣ, ಬಂಧನ ರಾಜಕೀಯ ಪ್ರೇರಿತ. ಸರ್ಕಾರದ ಏಜೆನ್ಸಿಗಳನ್ನು ಬಳಿಸಿಕೊಂಡು ಉದ್ದೇಶಪೂರಕವಾಗಿ ತಮ್ಮನ್ನು ಬಂಧಿಸಲಾಗಿದೆ ಎಂದು ಕೇಂದ್ರದ ಎನ್‌ಡಿಎ ನಾಯಕರ ವಿರುದ್ಧ ದೆಹಲಿ ಸಿಎಂ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದರು.

IPL_Entry_Point