ಲೋಕಸಭೆ ಚುನಾವಣೆ ದಿನಾಂಕ ಮತ್ತು ಇತರೆ ವಿವರ ಇಂದು ಪ್ರಕಟಿಸುವುದಾಗಿ ಘೋಷಿಸಿದ ಭಾರತದ ಚುನಾವಣಾ ಆಯೋಗ-lok sabha election 2024 dates to be announced tomorrow election commission of india says india news uks ,ರಾಷ್ಟ್ರ-ಜಗತ್ತು ಸುದ್ದಿ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಲೋಕಸಭೆ ಚುನಾವಣೆ ದಿನಾಂಕ ಮತ್ತು ಇತರೆ ವಿವರ ಇಂದು ಪ್ರಕಟಿಸುವುದಾಗಿ ಘೋಷಿಸಿದ ಭಾರತದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ದಿನಾಂಕ ಮತ್ತು ಇತರೆ ವಿವರ ಇಂದು ಪ್ರಕಟಿಸುವುದಾಗಿ ಘೋಷಿಸಿದ ಭಾರತದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ 2024ರ ದಿನಾಂಕ, ವೇಳಾಪಟ್ಟಿ ಮತ್ತು ಇತರೆ ವಿವರಗಳು ಇಂದು (ಮಾರ್ಚ್ 16) ಪ್ರಕಟವಾಗಲಿದೆ. ಇಂದು ಚುನಾವಣಾ ಆಯುಕ್ತರಾಗಿ ಸುಖ್‌ಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ಬಳಿಕ ಆಯೋಗ ಈ ವಿಚಾರ ಪ್ರಕಟಿಸಿದೆ.

ಚುನಾವಣಾ ಆಯುಕ್ತ ಸುಖ್‌ಬೀರ್ ಸಿಂಗ್ ಸಂಧು, ಮುಖ್ಯಚುನಾವಣಾ ಆಯುಕ್ತ ರಾಜೀವ್ ಕುಮಾರ್‌, ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ (ಎಡ ಚಿತ್ರ); ಮತದಾನ ಜಾಗೃತಿಯ ಮರಳು ಶಿಲ್ಪ (ಬಲ ಚಿತ್ರ). ಲೋಕಸಭೆ ಚುನಾವಣೆ 2024ರ ದಿನಾಂಕ, ವೇಳಾಪಟ್ಟಿ ಮತ್ತು ಇತರೆ ವಿವರಗಳು ನಾಳೆ (ಮಾರ್ಚ್ 16) ಪ್ರಕಟವಾಗಲಿದೆ.
ಚುನಾವಣಾ ಆಯುಕ್ತ ಸುಖ್‌ಬೀರ್ ಸಿಂಗ್ ಸಂಧು, ಮುಖ್ಯಚುನಾವಣಾ ಆಯುಕ್ತ ರಾಜೀವ್ ಕುಮಾರ್‌, ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ (ಎಡ ಚಿತ್ರ); ಮತದಾನ ಜಾಗೃತಿಯ ಮರಳು ಶಿಲ್ಪ (ಬಲ ಚಿತ್ರ). ಲೋಕಸಭೆ ಚುನಾವಣೆ 2024ರ ದಿನಾಂಕ, ವೇಳಾಪಟ್ಟಿ ಮತ್ತು ಇತರೆ ವಿವರಗಳು ನಾಳೆ (ಮಾರ್ಚ್ 16) ಪ್ರಕಟವಾಗಲಿದೆ.

ನವದೆಹಲಿ: ಬಹುನಿರೀಕ್ಷಿತ ಲೋಕಸಭೆ ಚುನಾವಣೆಯ ದಿನಾಂಕ, ವೇಳಾಪಟ್ಟಿ ಮತ್ತು ಇತರೆ ವಿವರಗಳನ್ನು ಇಂದು (ಮಾರ್ಚ್ 16) ಘೋಷಿಸುವುದಾಗಿ ಭಾರತದ ಚುನಾವಣಾ ಆಯೋಗ ಶುಕ್ರವಾರ (ಮಾರ್ಚ್ 15) ಪ್ರಕಟಿಸಿದೆ.

ಚುನಾವಣಾ ಆಯುಕ್ತರಾಗಿ ಸುಖ್‌ಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ಬಳಿಕ ಆಯೋಗ ಈ ವಿಚಾರ ಬಹಿರಂಗಗೊಳಿಸಿದೆ.

ಲೋಕಸಭೆ ಮತ್ತು ಕೆಲವು ರಾಜ್ಯಗಳ ವಿಧಾನಸಭೆಗಳ ವೇಳಾಪಟ್ಟಿಯನ್ನು ಮಾರ್ಚ್ 16 ರಂದು ಮಧ್ಯಾಹ್ನ ನಂತರ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸುವುದಾಗಿ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ.

ಘೋಷಣೆ ಮಾಡಿದ ತಕ್ಷಣ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಪತ್ರಿಕಾಗೋಷ್ಠಿಯನ್ನು ಚುನಾವಣಾ ಆಯೋಗದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುವುದು ಎಂದು ಅದು ಹೇಳಿದೆ.

ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಸಂಬಂಧ ಕೇಂದ್ರ ಚುನಾವಣಾ ಆಯೋಗದ ಟ್ವೀಟ್‌

ಲೋಕಸಭೆ ಚುನಾವಣೆ ದಿನಾಂಕ, ವೇಳಾಪಟ್ಟಿ ಘೋಷಣೆಯಾದ ತಕ್ಷಣ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಇದು ಚುನಾವಣಾ ಆಯೋಗವು ಚುನಾವಣಾ ಸಮಯದ ಭಾಷಣಗಳು, ಘೋಷಣೆಗಳು, ಚುನಾವಣಾ ಪ್ರಣಾಳಿಕೆಗಳು ಮತ್ತು ಸಾಮಾನ್ಯ ನಡವಳಿಕೆಗೆ ಸಂಬಂಧಿಸಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಸರ್ಕಾರ ಮತ್ತು ಅಧಿಕಾರದಲ್ಲಿರುವ ಪಕ್ಷಕ್ಕೆ ನೀಡಿದ ಮಾರ್ಗಸೂಚಿಯಾಗಿದೆ. ಪ್ರಸ್ತುತ ಲೋಕಸಭೆಯ ಅವಧಿಯು ಜೂನ್ 16 ರಂದು ಕೊನೆಗೊಳ್ಳುತ್ತದೆ ಮತ್ತು ಅದಕ್ಕೂ ಮುನ್ನ ಹೊಸ ಲೋಕಸಭೆ ರಚನೆಯಾಗಬೇಕು.

ಕಳೆದ ಬಾರಿ ಲೋಕಸಭೆ ಚುನಾವಣೆ ಯಾವಾಗ ಆಗಿತ್ತು

ಕಳೆದ ಬಾರಿ ಲೋಕಸಭೆ ಚುನಾವಣೆಯ ದಿನಾಂಕ ಮತ್ತು ವೇಳಾಪಟ್ಟಿಯನ್ನು ಭಾರತದ ಚುನಾವಣಾ ಆಯೋಗವು 2019ರ ಮಾರ್ಚ್ 10 ರಂದು ಪ್ರಕಟಿಸಿತ್ತು. ಅಂದು ಏಳು ಹಂತಗಳಲ್ಲಿ ಚುನಾವಣೆ ನಡೆಯಿತು. ಏಪ್ರಿಲ್ 11 ರಿಂದ ಮೇ19 ತನಕ ಮತದಾನ ನಡೆಯಿತು. ಮೇ 23 ರಂದು ಫಲಿತಾಂಶ ಪ್ರಕಟವಾಯಿತು.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. 2019ರ ಏಪ್ರಿಲ್ 18 ಮತ್ತು 23 ರಂದು ತಲಾ 14 ಕ್ಷೇತ್ರಗಳ ಮತದಾನ ನಡೆಯಿತು. ಕರ್ನಾಟಕದ 28 ಕ್ಷೇತ್ರಗಳ ಪೈಕಿ 25 ಬಿಜೆಪಿ ಗೆದ್ದರೆ, ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್‌, 1ರಲ್ಲಿ ಜೆಡಿಎಸ್ ಗೆಲುವು ಕಂಡಿತ್ತು.

ಲೋಕಸಭೆ ಚುನಾವಣೆ 2024; ಮತದಾರರ ಸಂಖ್ಯೆ 97 ಕೋಟಿ

ಹೊಸದಾಗಿ ನೇಮಕಗೊಂಡ ಇಬ್ಬರು ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖ್‌ಬೀರ್ ಸಿಂಗ್ ಸಂಧು ಅವರು ಚುನಾವಣಾ ಸಮಿತಿಗೆ ಸೇರ್ಪಡೆಯಾದ ದಿನವೇ ಚುನಾವಣಾ ವೇಳಾಪಟ್ಟಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಪ್ರಕಟಣೆ ಹೊರಬಿದ್ದಿದೆ.

ಈ ತಿಂಗಳ ಆರಂಭದಲ್ಲಿ ಸುಮಾರು 97 ಕೋಟಿ ಜನರು ಮತದಾನಕ್ಕೆ ನೋಂದಾಯಿಸಿಕೊಂಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ 96.88 ಕೋಟಿ ಜನರು ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ ಎಂದು ಚುನಾವಣಾ ಆಯೋಗವು ಹೇಳಿತ್ತು. 18 ರಿಂದ 29 ವರ್ಷಗಳ ನಡುವಿನ ಎರಡು ಕೋಟಿ ಯುವ ಮತದಾರರು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

(This copy first appeared in Hindustan Times Kannada website. To read more on Lok Sabha Elections, Political developments, Lok Sabha Constituency profiles, Political Analysis in Kannada please visit kannada.hindustantimes.com)

mysore-dasara_Entry_Point
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.