ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಕ್ಷೇತ್ರಗಳನ್ನು ಗೆಲ್ಲುತ್ತೆ; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನುಡಿದ ಭವಿಷ್ಯವಿದು

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಕ್ಷೇತ್ರಗಳನ್ನು ಗೆಲ್ಲುತ್ತೆ; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನುಡಿದ ಭವಿಷ್ಯವಿದು

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯನ್ನು ಮತ್ತೊಂದು ಗೆಲುವಿನತ್ತ ಮುನ್ನಡೆಸಲಿದ್ದಾರೆ ಎಂದು ಲೋಕಸಭಾ ಚುನಾವಣಾ ಫಲಿತಾಂಶ ಕುರಿತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಕ್ಷೇತ್ರಗಳನ್ನು ಗೆಲ್ಲುತ್ತೆ ಎಂಬುದರ ಬಗ್ಗೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಮಾತನಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಕ್ಷೇತ್ರಗಳನ್ನು ಗೆಲ್ಲುತ್ತೆ ಎಂಬುದರ ಬಗ್ಗೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಮಾತನಾಡಿದ್ದಾರೆ. (PTI)

ದೆಹಲಿ: 2024 ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) 5 ಹಂತಗಳ ಮತದಾನ ಯಶಸ್ವಿಯಾಗಿ ಮುಗಿದಿದ್ದು, ಇನ್ನ ಮೇ 25 ರಂದು 6ನೇ ಹಂತ ಹಾಗೂ ಜೂನ್ 1ರ 7ನೇ ಹಂತ ಸೇರಿ ಇನ್ನ ಎರಡು ಹಂತದ ಮತದಾನ ಮಾತ್ರ ಬಾಕಿ ಉಳಿದಿದ್ದು, ಜೂನ್ 4 ರಂದು ಫಲಿತಾಂಶ (Lok Sabha Result On June 4) ಹೊರಬೀಳಲಿದೆ. ಬಿಜೆಪಿ ನಾಯಕರು (BJP Leaders) ಈಗಾಗಲೇ ನಾವು ಬಹುಮತಕ್ಕೆ ಬೇಕಿರುವುದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆದ್ದಾಗಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಇದರ ನಡುವೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಎಷ್ಟು ಸ್ಥಾನಗಳ ಬರುತ್ತವೆ ಎಂಬುದರ ಬಗ್ಗೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಭವಿಷ್ಯ ನುಡಿದಿದ್ದಾರೆ.

ಟ್ರೆಂಡಿಂಗ್​ ಸುದ್ದಿ

2024 ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಸರ್ಕಾರದ ಬಗ್ಗೆ ಗಮನಾರ್ಹ ಅಸಮಾಧಾನವಿಲ್ಲ ಅಥವಾ ಪರ್ಯಾಯದ ಬಲವಾದ ಬೇಡಿಕೆಯಿಲ್ಲ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಮಂಗಳವಾರ (ಮೇ 21) ಹೇಳಿದ್ದಾರೆ. ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಪ್ರಶಾಂತ್, 2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯನ್ನು ಮತ್ತೊಂದು ಗೆಲುವಿನತ್ತ ಮುನ್ನಡೆಸುವ ಸಾಧ್ಯತೆಯಿದೆ ಎಂದು ಹೇಳಿದರು, ಕೇಸರಿ ಪಕ್ಷದ ಸ್ಥಾನಗಳ ಸಂಖ್ಯೆ 2019 ರ 303 ರ ಸಂಖ್ಯೆಗೆ ಹತ್ತಿರವಾಗಬಹುದು ಅಥವಾ ಮೀರಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ಮೋದಿಜಿ ವಿರುದ್ಧ ಸಾರ್ವಜನಿಕ ಆಕ್ರೋಶ ಇರುವುದರ ಬಗ್ಗೆ ಕೇಳಿಲ್ಲ-ಪ್ರಶಾಂತ್

"ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತಿದೆ ಎಂದು ನಾನು ಭಾವಿಸುತ್ತೇನೆ. ಅವರು ಕಳೆದ ಚುನಾವಣೆಯಂತೆಯೇ ಸಂಖ್ಯೆಗಳನ್ನು ಪಡೆಯಬಹುದು ಅಥವಾ ಸ್ವಲ್ಪ ಉತ್ತಮವಾಗಿ ಕಾರ್ಯನಿರ್ವಹಿಸಬಹುದು" ಎಂದು ಪ್ರಶಾಂತ್ ಕಿಶೋರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. "ನಾವು ಮೂಲಭೂತ ಅಂಶಗಳನ್ನು ನೋಡಬೇಕು. ಪ್ರಸ್ತುತ ಸರ್ಕಾರ ಮತ್ತು ಅದರ ನಾಯಕನ ವಿರುದ್ಧ ಕೋಪವಿದ್ದರೆ, ಪರ್ಯಾಯವಿದೆಯೇ ಎಂಬುದನ್ನು ಲೆಕ್ಕಿಸದೆ, ಜನರು ಅವರಿಗೆ ಮತ ಚಲಾಯಿಸಲು ನಿರ್ಧರಿಸುವ ಸಾಧ್ಯತೆಯಿದೆ. ಇಲ್ಲಿಯವರೆಗೆ, ಮೋದಿಜಿ ವಿರುದ್ಧ ವ್ಯಾಪಕವಾದ ಸಾರ್ವಜನಿಕ ಆಕ್ರೋಶವಿದೆ ಎಂದು ನಾವು ಎಲ್ಲೂ ಕೇಳಿಲ್ಲ. ನಿರಾಶೆ, ಈಡೇರದ ಆಕಾಂಕ್ಷೆಗಳು ಇರಬಹುದು, ಆದರೆ ವ್ಯಾಪಕ ಕೋಪದ ಬಗ್ಗೆ ನಾವು ಕೇಳಿಲ್ಲ" ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಬಿಜೆಪಿಯ 370 ಸ್ಥಾನಗಳು ಮತ್ತು ಎನ್‌ಡಿಎ 400 ಕ್ಕೂ ಹೆಚ್ಚು ಗುರಿಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಶಾಂತ್ ಕಿಶೋರ್, "ಬಿಜೆಪಿ 275 ಸ್ಥಾನಗಳನ್ನು ಗೆದ್ದರೆ ನಾವು ಸರ್ಕಾರ ರಚಿಸಲು ಹೋಗುವುದಿಲ್ಲ. ಯಾಕೆಂದರೆ ನಾವು 370 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಆ ಪಕ್ಷದ ನಾಯಕರು ಹೇಳುತ್ತಿದ್ದಾರೆ. ಆದ್ದರಿಂದ, ಅವರು ಬಹುಮತದ 272 ಸ್ಥಾನಗಳನ್ನು ಪಡೆಯುತ್ತಿದ್ದಾರೆಯೇ ಎಂಬುದನ್ನ ನೋಡಬೇಕಾಗುತ್ತದೆ. ಆದರೆ ನನಗೆ ಬಿಜೆಪಿಯ ಯಾವುದೇ ಅಪಾಯ ಕಾಣುತ್ತಿಲ್ಲ. ಎನ್‌ಡಿಎ ಅಧಿಕಾರಕ್ಕೆ ಮರಳುವಂತೆ ಕಾಣುತ್ತಿದೆ. ಜೂನ್ 4 ರ ಲೋಕಸಭಾ ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಎಂಬುದು ಸ್ಪಷ್ಟವಾಗುತ್ತಿದೆ ಎಂದಿದ್ದಾರೆ.

ಇಂಡಿಯಾ ಮೈತ್ರಿ ಕೂಟವು ದೇಶದಲ್ಲಿ ಸ್ಥಿರ ಸರ್ಕಾರವನ್ನು ನೀಡಲಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭವಿಷ್ಯ ನುಡಿನದ ಕೆಲವೇ ನಿಮಿಷಗಳಲ್ಲಿ ಪ್ರಶಾಂತ್ ಕಿಶೋರ್ ಅವರು ಬಿಜೆಪಿಯ ಗೆಲುವಿನ ಬಗ್ಗೆ ಮಾತನಾಡಿದ್ದಾರೆ.

ವರ್ಚುವಲ್ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಇಡಿಯಾ ಕೂಟವು ದೇಶಕ್ಕೆ ಸ್ಥಿರ ಸರ್ಕಾರವನ್ನು ನೀಡುತ್ತದೆ ಎಂದು ಹೇಳಿದರು. "ಪ್ರತಿ ಹಂತದ ಮತದಾನದ ಹಂತದೊಂದಿಗೆ, ಮೋದಿ ಸರ್ಕಾರವು ಹೊರಬರುವ ಹಾದಿಯಲ್ಲಿದೆ. ಜೂನ್ 4 ರಂದು ಇಂಡಿಯಾ ಕೂಟ ಅಧಿಕಾರಕ್ಕೆ ಬರಲಿದೆ ಎಂಬುದು ಸ್ಪಷ್ಟವಾಗುತ್ತಿದೆ" ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ. ಅಂತಿಮವಾಗಿ ಯಾರು 2024ರ ಲೋಕಸಭಾ ಚುನಾವಣೆಯಲ್ಲಿ ವಿಜಯ ಪತಾಕೆ ಹಾರಿಸಲಿದ್ದಾರೆ ಅನ್ನೋದು ಜೂನ್ 4ರ ಫಲಿತಾಂಶದಲ್ಲಿ ಸ್ಪಷ್ಟವಾಗಲಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024