ಲೋಕಸಭಾ ಚುನಾವಣೆ 2024; ಪ್ರಧಾನಿ ಮೋದಿ ಮತ್ತು ಬಿಜೆಪಿ ಪರವಾಗಿ ಕೆಲಸ ಮಾಡದ 5 ಚುನಾವಣಾ ತಂತ್ರಗಳು
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಲೋಕಸಭಾ ಚುನಾವಣೆ 2024; ಪ್ರಧಾನಿ ಮೋದಿ ಮತ್ತು ಬಿಜೆಪಿ ಪರವಾಗಿ ಕೆಲಸ ಮಾಡದ 5 ಚುನಾವಣಾ ತಂತ್ರಗಳು

ಲೋಕಸಭಾ ಚುನಾವಣೆ 2024; ಪ್ರಧಾನಿ ಮೋದಿ ಮತ್ತು ಬಿಜೆಪಿ ಪರವಾಗಿ ಕೆಲಸ ಮಾಡದ 5 ಚುನಾವಣಾ ತಂತ್ರಗಳು

ಲೋಕಸಭಾ ಚುನಾವಣಾ ಫಲಿತಾಂಶ 2024; ಈ ಸಲ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ಪರವಾಗಿ ಕೆಲವು ಚುನಾವಣಾ ತಂತ್ರಗಳು ಕೆಲಸ ಮಾಡಿಲ್ಲ. ಮೋದಿ ಹವಾ ಪ್ರಭಾವ ಕಡಿಮೆಯಾಗಿರುವುದು ಸ್ಪಷ್ಟವಾಗಿ ಗೋಚರವಾಗಿದೆ. ಪಕ್ಷ ಕಾರ್ಯಕರ್ತರಿಂದ ದೂರಾಗಿರುವುದು ನಿಚ್ಚಳವಾಗಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ಪರವಾಗಿ ಕೆಲಸ ಮಾಡದ 5 ಚುನಾವಣಾ ತಂತ್ರಗಳು ಹೀಗಿವೆ.

ಲೋಕಸಭಾ ಚುನಾವಣೆ 2024; ಪ್ರಧಾನಿ ಮೋದಿ ಮತ್ತು ಬಿಜೆಪಿ ಪರವಾಗಿ ಕೆಲಸ ಮಾಡದ 5 ಚುನಾವಣಾ ತಂತ್ರಗಳು (ಸಾಂಕೇತಿಕ ಚಿತ್ರ)
ಲೋಕಸಭಾ ಚುನಾವಣೆ 2024; ಪ್ರಧಾನಿ ಮೋದಿ ಮತ್ತು ಬಿಜೆಪಿ ಪರವಾಗಿ ಕೆಲಸ ಮಾಡದ 5 ಚುನಾವಣಾ ತಂತ್ರಗಳು (ಸಾಂಕೇತಿಕ ಚಿತ್ರ)

ನವದೆಹಲಿ: ಲೋಕಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದೆ. ಸದ್ಯದ ಟ್ರೆಂಡ್ ಗಮನಿಸಿದರೆ ಬಿಜೆಪಿಗೆ ಸ್ವತಃ ಬಹುಮತದ ಮ್ಯಾಜಿಕ್ ನಂಬರ್ ತಲುಪಲು ವಿಫಲವಾಗಿದೆ. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸವಾಲೊಡ್ಡಲು ರಚಿಸಲಾದ ವಿರೋಧ ಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್ 230ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಚುನಾವಣೋತ್ತರ ಸಮೀಕ್ಷೆಗಳು ಇಂಡಿಯಾ ಮೈತ್ರಿಕೂಟಕ್ಕೆ 200 ಕ್ಕಿಂತ ಕಡಿಮೆ ಸ್ಥಾನಗಳು ಬರಬಹುದು ಎಂದು ಹೇಳಿದ್ದವು.

ಲೋಕಸಭಾ ಚುನಾವಣೆ 2019 ರಲ್ಲಿ ಬಿಜೆಪಿ 303 ಸ್ಥಾನಗಳನ್ನು ಗೆದ್ದಿದ್ದರೆ, ಎನ್‌ಡಿಎ 353 ಸ್ಥಾನಗಳನ್ನು ಗಳಿಸಿತ್ತು. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಗೆ ಈ ಬಾರಿ ಕೆಲಸ ಮಾಡದ 5 ಅಂಶಗಳ ಪಟ್ಟಿ ಇಲ್ಲಿದೆ

ಲೋಕಸಭಾ ಚುನಾವಣೆ 2024; ಮೋದಿ ಪರವಾಗಿ ಕೆಲಸ ಮಾಡದ 5 ಪ್ರಚಾರ ತಂತ್ರಗಳು

1) ಉತ್ತರಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಆಘಾತವಾಗಿದ್ದು, 80 ಸ್ಥಾನಗಳಲ್ಲಿ 40ಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಗೆಲುವು ಸಿಕ್ಕಿದೆ. 2019 ರಲ್ಲಿ ಬಿಜೆಪಿ ಉತ್ತರ ಪ್ರದೇಶದಿಂದ 62 ಸ್ಥಾನಗಳನ್ನು ಗೆದ್ದಿತ್ತು. 2014ರಲ್ಲಿ ಬಿಜೆಪಿಗೆ 71 ಸ್ಥಾನಗಳು ಸಿಕ್ಕಿದ್ದವು. ಪ್ರಚಾರದ ವೇಳೆ ಅತಿಯಾದ ವಿಶ್ವಾಸದ ನಡೆ ಮತ್ತು ನುಡಿಗಳು ಮುಳುವಾದವು.

2) ಬಿಜೆಪಿ ತಳಮಟ್ಟದಲ್ಲಿ ಕಾರ್ಯಕರ್ತರ ಸಂಪರ್ಕ ಕಳೆದುಕೊಂಡಿದೆ. ಬಿಜೆಪಿ ತನ್ನ ಕಾರ್ಯಕರ್ತರಿಂದಲೇ ದೂರಾಗುತ್ತಿರುವಾಗ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಜನರ ನಡುವೆ ತಮ್ಮನ್ನು ಗುರುತಿಸಿಕೊಳ್ಳತೊಡಗಿವೆ. ದೊಡ್ಡ ದೊಡ್ಡ ಪ್ರಚಾರ ಅಭಿಯಾನ, ರೋಡ್ ಷೋಗಳನ್ನು ನಡೆಸುವುದರ ಕಡೆಗೆ ಹೆಚ್ಚಿನ ಗಮನವನ್ನು ಕೇಂದ್ರೀಕರಿಸಿತು. ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಷೋ ಮತ್ತು ರ‍್ಯಾಲಿಗಳು ಕಳೆದ ವರ್ಷಕ್ಕಿಂತ ಹೆಚ್ಚಾಗಿದ್ದವು. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಅವರ ಸಾರ್ವಜನಿಕ ರ‍್ಯಾಲಿ ತುಂಬಾ ಹೆಚ್ಚಿತ್ತು.

3) ಪಕ್ಷ ಸಂಘಟನೆಗಿಂತ ಹೆಚ್ಚು ವ್ಯಕ್ತಿ ಕೇಂದ್ರಿತವಾದ ಪ್ರಚಾರ ಮುಳುವಾಯಿತು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದೊಡ್ಡ ರ‍್ಯಾಲಿಗಳನ್ನು ಬಿಜೆಪಿ ಅವಲಂಬಿಸಿತ್ತು. ಇದಕ್ಕೆ ವ್ಯತಿರಿಕ್ತವಾಗಿ, ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಲ್ಲಿ ಅಕ್ಷರಶಃ ಕ್ಯಾಂಪ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೆಚ್ಚಿನ ದೊಡ್ಡ ರ್ಯಾಲಿಗಳನ್ನು ನಡೆಸಲಿಲ್ಲ. ಬದಲಾಗಿ, ಅವರು ಸಣ್ಣ ಗುಂಪುಗಳ ಜನರೊಂದಿಗೆ ನಿತ್ಯ ಸಭೆಗಳತ್ತ ಗಮನ ಹರಿಸಿದರು.

4) ಕ್ಷೇತ್ರದಲ್ಲಿ ವಿರೋಧ ಇದ್ದರೂ ಹಳೆಯ ಅಭ್ಯರ್ಥಿಗಳನ್ನೆ ಕಣಕ್ಕೆ ಇಳಿಸಿದ್ದು ಬಿಜೆಪಿಗೆ ಮುಳುವಾಯಿತು. ಉತ್ತರ ಪ್ರದೇಶ, ಗುಜರಾತ್, ಕರ್ನಾಟಕ ಸೇರಿ ಪ್ರಮುಖ ರಾಜ್ಯಗಳಲ್ಲಿ ಕಾರ್ಯಕರ್ತರಿಂದಲೇ ವಿರೋಧ ಇದ್ದ ಅಭ್ಯರ್ಥಿಗಳನ್ನು ಕಣದಲ್ಲಿ ಉಳಿಸಿದ್ದರ ಪರಿಣಾಮ ಫಲಿತಾಂಶದಲ್ಲಿ ಗೋಚರಿಸಿದೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿಚಾರವನ್ನು ಪ್ರಚಾರಕ್ಕೆ ಬಳಸದೇ ಇದ್ದರೂ, ಅದಕ್ಕೆ ನೀಡಿದ ಪ್ರಚಾರ ಮತದಾರರ ಮೇಲೆ ಪರಿಣಾಮ ಬೀರಿಲ್ಲ ಎಂಬುದು ಕಂಡುಬಂದಿದೆ. ಅಯೋಧ್ಯೆ ಇರುವ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷ ಗೆಲುವು ಸಾಧಿಸಿದೆ.

5) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೈನಿಕರ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ರಕ್ಷಣಾ ಮತ್ತು ಪ್ಯಾರಾ ಮಿಲಿಟರಿ ಪಡೆಗಳಿಗೆ ಹೆಚ್ಚಿನ ಸಂಖ್ಯೆಯ ಯುವಕರನ್ನು ಕಳುಹಿಸುವ ಎರಡು ರಾಜ್ಯಗಳಾದ ರಾಜಸ್ಥಾನ ಮತ್ತು ಹರಿಯಾಣದಲ್ಲಿ ಅದರ ಕಾರ್ಯಕ್ಷಮತೆಯ ಕುಸಿತದಿಂದ ಈ ಯೋಜನೆ ಬಿಜೆಪಿಗೆ ಕೆಲಸ ಮಾಡಲಿಲ್ಲ ಎಂದು ತೋರುತ್ತದೆ. ಈ ಎರಡೂ ರಾಜ್ಯಗಳಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ ಆಗಿದೆ. ಮಹಾರಾಷ್ಟ್ರದಲ್ಲಿ ಅಭ್ಯರ್ಥಿಗಳನ್ನು ಘೋಷಿಸುವಾಗ ತಡ ಮಾಡಿತು. ಇದೆಲ್ಲವೂ ಪರಿಣಾಮ ಬೀರಿದೆ.

👉🏻 ಲೋಕಸಭಾ ಚುನಾವಣೆ ಫಲಿತಾಂಶ: ಸ್ಪಷ್ಟ & ನಿಖರ ಮಾಹಿತಿಗೆ

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.