ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Narendra Modi: ಲೋಕಸಭೆ ಚುನಾವಣೆ ಫಲಿತಾಂಶ; 3ನೇ ಬಾರಿಗೆ ಜನರ ಆಶೀರ್ವಾದ, ಇದು ಪ್ರಜಾಪ್ರಭುತ್ವದ ಜಯ; ಪ್ರಧಾನಿ ಮೋದಿ

Narendra Modi: ಲೋಕಸಭೆ ಚುನಾವಣೆ ಫಲಿತಾಂಶ; 3ನೇ ಬಾರಿಗೆ ಜನರ ಆಶೀರ್ವಾದ, ಇದು ಪ್ರಜಾಪ್ರಭುತ್ವದ ಜಯ; ಪ್ರಧಾನಿ ಮೋದಿ

ಲೋಕಸಭೆ ಚುನಾವಣೆಯಲ್ಲಿನ ಗೆಲುವು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ಜಯವಾಗಿದೆ. ದೇಶದ ಜನರಿಗೆ ನಾನು ಆಭಾರಿಯಾಗಿದ್ದೇನೆ. ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್‌ನ ಜಯವಾಗಿದೆ. ಮೂರನೇ ಬಾರಿಗೆ ಜನರು ಆಶೀರ್ವಾದ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶ; ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್‌ನ ಜಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶ; ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್‌ನ ಜಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೆಹಲಿ: ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ಫಲಿತಾಂಶ (Lok Sabha Election Results 2024) ಹೊರಬಿದ್ದಿದ್ದು, ಬಿಜೆಪಿ (BJP) 272 ಸ್ಥಾನಗಳ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದರೂ, ಎನ್‌ಡಿಎ (NDA) 292 ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೇರಲು ಸಿದ್ಧತೆಗಳನ್ನು ನಡೆಸಿದೆ. ಅತ್ತ ಕಾಂಗ್ರೆಸ್ (Congress) ನೇತೃತ್ವದ ಇಂಡಿಯಾ (INDIA) 233 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಎನ್‌ಡಿಎ ಮ್ಯಾಜಿಕ್ ಸಂಖ್ಯೆ 272 ಅನ್ನು ದಾಟಿರುವ ಹಿನ್ನೆಲೆಯಲ್ಲಿ ಇಂದು (ಜೂನ್ 4, ಮಂಗಳವಾರ) ದೆಹಲಿಯ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಾಗವಹಿಸಿ ಮಾತನಾಡಿದರು.

ಟ್ರೆಂಡಿಂಗ್​ ಸುದ್ದಿ

ಇದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ಜಯವಾಗಿದೆ. ದೇಶದ ಜನರಿಗೆ ನಾನು ಆಭಾರಿಯಾಗಿದ್ದೇನೆ. ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್‌ನ ಜಯವಾಗಿದೆ. ಮೂರನೇ ಬಾರಿಗೆ ಜನರು ಆಶೀರ್ವಾದ ನೀಡಿದ್ದಾರೆ. ಕೇಂದ್ರದಲ್ಲಿ ಸರ್ಕಾರ ರಚಿಸುತ್ತೇವೆ ಎಂದು ಹೇಳಿದ್ದಾರೆ.

ತೆಲಂಗಾಣದಲ್ಲಿ ನಮ್ಮ ಸಂಖ್ಯೆ ದ್ವಿಗುಣವಾಗಿದೆ. ಹಲವೆಡೆ ಕ್ವೀನ್ ಸ್ವೀಪ್ ಮಾಡಿದ್ದೇವೆ, ಕೇಳರದಲ್ಲೂ ಜಯಿಸಿದ್ದೇವೆ. ದೇಶದಲ್ಲಿ ಬದಲಾವಣೆಗೆ ಜನರು ಆಶೀರ್ವದಿಸಿದ್ದು, ಭಾರತದ ಅಭಿವೃದ್ಧಿ ಎನ್‌ಡಿಎ ಬದ್ಧವಾಗಿದೆ ಎಂದು ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜನರು ಮೂರನೇ ಬಾರಿಗೆ ಭಾರತೀಯ ಜನತಾ ಪಕ್ಷ ನೇತೃತ್ವದ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಜನರ ಆಕಾಂಕ್ಷೆಗಳನ್ನು ಪೂರೈಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸಗಳನ್ನು ಮುಂದುವರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪ್ರಧಾನಿ ಮೋದಿ, "ಈ ಪ್ರೀತಿಗಾಗಿ ನಾನು ಜನತಾ ಜನಾರ್ಧನ್ ಅವರಿಗೆ ನಮಿಸುತ್ತೇನೆ. ಜನರ ಆಕಾಂಕ್ಷೆಗಳನ್ನು ಪೂರೈಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸಗಳನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ". "ನಮ್ಮ ಎಲ್ಲಾ ಕಾರ್ಯಕರ್ತರ ಕಠಿಣ ಪರಿಶ್ರಮಕ್ಕೆ ನಾನು ನಮಸ್ಕರಿಸುತ್ತೇನೆ. ಅವರ ಅಸಾಧಾರಣ ಪ್ರಯತ್ನಗಳಿಗೆ ಪದಗಳು ಎಂದಿಗೂ ನ್ಯಾಯ ಒದಗಿಸುವುದಿಲ್ಲ" ಎಂದಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳು ಕೇಸರಿ ಪಕ್ಷವು ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದರೂ, ಬಿಜೆಪಿ ಸರಳ ಬಹುಮತ ಪಡೆಯಲು ಸಾಧ್ಯವಾಗಿಲ್ಲ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಮೋದಿ ಇನ್ನೂ ಮೂರನೇ ಐದು ವರ್ಷಗಳ ಅವಧಿಗೆ ಆಯ್ಕೆಯಾಗುವ ನಿರೀಕ್ಷೆಯಿದೆ.

543 ಸಂಸದೀಯ ಸ್ಥಾನಗಳಲ್ಲಿ ಬಹುಮತಕ್ಕೆ 272 ಸ್ಥಾನಗಳ ಅಗತ್ಯವಿದೆ. 2019 ರಲ್ಲಿ ಬಿಜೆಪಿ 303 ಸ್ಥಾನಗಳನ್ನು ಗೆದ್ದರೆ, 2014 ರಲ್ಲಿ ಮೋದಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗ 282 ಸ್ಥಾನಗಳನ್ನು ಗಳಿಸಿತ್ತು.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024