ಕನ್ನಡ ಸುದ್ದಿ  /  Nation And-world  /  Man Rapes, Kills Girl To Avenge Affair Of His Wife With Childs Father

MP Rape & Murder: ತನ್ನ ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಪುಟ್ಟ ಮಗಳ ಮೇಲೆ ಅತ್ಯಾಚಾರ ಎಸಗಿ, ಕೊಲೆಗೈದು ಪ್ರತೀಕಾರ

ತನ್ನ ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದು ಪ್ರತೀಕಾರ ತೀರಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸತ್ನಾ (ಮಧ್ಯಪ್ರದೇಶ): ತನ್ನ ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದು ಪ್ರತೀಕಾರ ತೀರಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿದೆ.

ಸೋಮವಾರ ಅರಣ್ಯ ಪ್ರದೇಶದಲ್ಲಿ ಬಾಲಕಿಯ ಶವ ಪತ್ತೆಯಾದ ಬಳಿಕ ವಿಷಯ ಬೆಳಕಿಗೆ ಬಂದಿದೆ. ನವೆಂಬರ್ 17 ರಂದು 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಇದನ್ನು ಅರಿಯದ ಬಾಲಕಿ ಪೋಷಕರು ಮಗಳು ನಾಪತ್ತೆಯಾಗಿದ್ದಾಳೆ ಎಂದು ಪ್ರಕರಣ ದಾಖಲಿಸಿದ್ದರು.

ತನಿಖೆಯ ವೇಳೆ ನೆರೆಮನೆಯ ರಾಜೇಶ್ ರಜಾಕ್ (31) ಎಂಬಾತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ತಿಳಿದು ಬಂದಿದೆ. ತನಿಖೆ ಚುರುಕುಗೊಳಿಸಿದ ಪೊಲೀಸರು ಆತನ ಕೃತ್ಯಕ್ಕೆ ಕಾರಣ ಬಹಿರಂಗಪಡಿಸಿದ್ದಾರೆ. ಕೊಲೆಯಾದ ಬಾಲಕಿಯ ತಂದೆ ಜೊತೆ ರಾಜೇಶ್​ನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದರಂತೆ. ಇದನ್ನು ಎಷ್ಟೇ ತಡೆಯಲು ಪ್ರಯತ್ನಿಸಿದರೂ ರಾಜೇಶ್​ನಿಂದ ಸಾಧ್ಯವಾಗಲಿಲ್ಲ.

ಹೆಂಡತಿ ಜೊತೆ ಅನೈತಿಕ ಸಂಬಂಧ ಹೊಂದಿದ ವ್ಯಕ್ತಿಯ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ರಾಜೇಶ್, ಆತನ ಮಗಳನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯನ್ನು ಕೊಂದು ಶವವನ್ನು ಕಾಡಿನಲ್ಲಿ ಬಿಟ್ಟು ಹೋಗಿದ್ದಾನೆ.

ರಾಜೇಶ್​​ನನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 302 (ಕೊಲೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ, ತನ್ನ ಮಾನಸಿಕ ಅಸ್ವಸ್ಥ ಮಗಳ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಕೇರಳದ ಪತ್ತನಂತಿಟ್ಟ ಪೋಕ್ಸೊ ನ್ಯಾಯಾಲಯವು 107 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂಪಾಯಿ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಮತ್ತೆ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಸ್ತರಣೆ ಆಗಲಿದೆ ಎಂದು ಕೋರ್ಟ್​ ಹೇಳಿದೆ. ದಂಡದ ಮೊತ್ತವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಸೂಚಿಸಿದೆ.

ಪತ್ನಿಯಿಂದ ದೂರವಾಗಿದ್ದ ಆರೋಪಿ, ಪತ್ತನಂತಿಟ್ಟ ಜಿಲ್ಲೆಯ ಗ್ರಾಮವೊಂದರಲ್ಲಿ ಮಗಳೊಂದಿಗೆ ವಾಸವಾಗಿದ್ದನು. ಆದರೆ 2020ರಲ್ಲಿ ಮಾನಸಿಕ ಅಸ್ವಸ್ಥ ಮಗಳ ಮೇಲೆಯೇ ನಿರಂತವಾಗಿ ಅತ್ಯಾಚಾರ ಎಸಗಿದ್ದನು. ಶಾಲೆಯಲ್ಲಿ ಅಳುತ್ತಾ ಕುಳಿತಿದ್ದ ಬಾಲಕಿಯನ್ನು ಶಿಕ್ಷಕರು ವಿಚಾರಿಸಿದಾಗ ಆಕೆ ನಡೆದ ಘಟನೆಯನ್ನು ಹೇಳಿಕೊಂಡಿದ್ದಾಳೆ.

ಬಳಿಕ ಶಿಕ್ಷಕರು ಚೈಲ್ಡ್ ಲೈನ್​ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು. ಚೈಲ್ಡ್ ಲೈನ್​ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಆರೋಪಿ ತಂದೆಯನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಆತ ದೋಷಿ ಎಂದು ಸಾಬೀತಾಗಿದ್ದು, ನ್ಯಾಯಾಲಯವು 107 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

IPL_Entry_Point