ಭಾರತದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ವಿಧಿವಶ, ದೆಹಲಿ ಏಮ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಹಿರಿಯ ಕಾಂಗ್ರೆಸ್ಸಿಗ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಭಾರತದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ವಿಧಿವಶ, ದೆಹಲಿ ಏಮ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಹಿರಿಯ ಕಾಂಗ್ರೆಸ್ಸಿಗ

ಭಾರತದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ವಿಧಿವಶ, ದೆಹಲಿ ಏಮ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಹಿರಿಯ ಕಾಂಗ್ರೆಸ್ಸಿಗ

Dr Manmohan Singh Death: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ನಿಧನರಾದರು. ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ತುರ್ತು ನಿಗಾ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಅವರ ಶರೀರ ಸ್ಪಂದಿಸಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಭಾರತದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ವಿಧಿವಶ, ದೆಹಲಿ ಏಮ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಹಿರಿಯ ಕಾಂಗ್ರೆಸ್ಸಿಗ
ಭಾರತದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ವಿಧಿವಶ, ದೆಹಲಿ ಏಮ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಹಿರಿಯ ಕಾಂಗ್ರೆಸ್ಸಿಗ

Dr Manmohan Singh Death: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ನಿಧನರಾದರು. ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ತುರ್ತು ನಿಗಾ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ರಾತ್ರಿ 9.50ರ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆಯುಸಿರೆಳದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಸಿಂಗ್ ಅವರು ಪತ್ನಿ ಗುರುಚರಣ್ ಸಿಂಗ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ರಾತ್ರಿ ಅವರು ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿಯುತ್ತಲೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಏಮ್ಸ್‌ಗೆ ಭೇಟಿ ನೀಡಿದ್ದರು. ಅದಾದ ಕೂಡಲೇ, ಬೆಳಗಾವಿಯಲ್ಲಿದ್ದ ಕಾಂಗ್ರೆಸ್ ನಾಯಕರು ಕೂಡ ವಿಶೇಷ ವಿಮಾನದ ಮೂಲಕ ದೆಹಲಿಗೆ ಹೊರಡಲು ಅನುವಾಗಿದ್ದರು. ಇನ್ನೊಂದೆಡೆ, "ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯದ ಬಗ್ಗೆ ಅಪಾರ ಕಾಳಜಿ ಇದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಮತ್ತು ಉತ್ತಮ ಆರೋಗ್ಯ ಹೊಂದಲಿ." ಎಂದು ಹಾರೈಸಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರು ಟ್ವೀಟ್ ಮಾಡಿ ಪರಿಸ್ಥಿತಿಯ ಗಾಂಭೀರ್ಯವನ್ನು ತಿಳಿಸಿದ್ದರು.

ಜಾಗತೀಕರಣಕ್ಕೆ ಭಾರತದ ಅರ್ಥ ವ್ಯವಸ್ಥೆಯನ್ನು ತೆರೆದು ಬಿಟ್ಟ ಧೀಮಂತ ನಾಯಕ

ಡಾ ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಸುದೀರ್ಘ 33 ವರ್ಷಗಳ ಕಾಲ ರಾಜ್ಯಸಭೆ ಸದಸ್ಯರಾಗಿ ರಾಜಕಾರಣ ನಡೆಸಿದ ಅರ್ಥಶಾಸ್ತ್ರಜ್ಞ. ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 1991ರಲ್ಲಿ ಡಾ ಮನಮೋಹನ್ ಸಿಂಗ್ ಅವರು ರಾಜ್ಯಸಭೆ ಪ್ರವೇಶಿಸಿದರು. ಅದೇ ವರ್ಷ ಜೂನ್‌ನಲ್ಲಿ ಹಣಕಾಸು ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಅವರು ಆ ಸಂದರ್ಭದಲ್ಲಿ ಭಾರತದ ಅರ್ಥ ವ್ಯವಸ್ಥೆಯನ್ನು ಜಾಗತೀಕರಣಕ್ಕೆ ತೆರೆದು ಸಾಕಷ್ಟು ಸುಧಾರಣೆಗೆ ಮುನ್ನುಡಿ ಬರೆದವರು. ಅವರು ಮೇಲ್ಮನೆಯಲ್ಲಿದ್ದ ಐದು ಅವಧಿಯಲ್ಲಿ ಅಸ್ಸಾಂ ಅನ್ನು ಪ್ರತಿನಿಧಿಸಿದ್ದರು. ಅದಾಗಿ, 2019 ರಿಂದ ರಾಜಸ್ಥಾನವನ್ನು ಪ್ರತಿನಿಧಿಸಿದ್ದರು.

ಸಂಸತ್‌ನಲ್ಲಿ ಅವರು ಕೊನೆಯದಾಗಿ ಮಾತನಾಡಿದ್ದು ನೋಟು ಅಮಾನ್ಯೀಕರಣದ ವಿರುದ್ಧ. ಅದು ಸಂಘಟಿತ ಲೂಟಿ ಮತ್ತು ಕಾನೂನು ಬದ್ಧ ಲೂಟಿ ಎಂದು ಅವರು ವ್ಯಾಖ್ಯಾನಿಸಿದ್ದರು.

ನಿರುದ್ಯೋಗ ಹೆಚ್ಚಿದೆ ಮತ್ತು ಅನೌಪಚಾರಿಕ ವಲಯವು ಶಿಥಿಲವಾಗಿದೆ. 2016 ರಲ್ಲಿ ತೆಗೆದುಕೊಂಡ ಅನಪೇಕ್ಷಿತ ನೋಟು ಅಮಾನ್ಯೀಕರಣದ ನಿರ್ಧಾರದಿಂದ ಬಿಕ್ಕಟ್ಟು ಉಂಟಾಗಿದೆ" ಎಂದು ಡಾ. ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದರು. ಹೇಳಿದರು. ಅವರು 2021ರಲ್ಲಿ ನಡೆದ "ಪ್ರತೀಕ್ಷಾ 2030,” ಎಂಬ ಕಾರ್ಯಕ್ರಮದಲ್ಲಿ ಡಾ. ಸಿಂಗ್ ಈ ರೀತಿ ಹೇಳಿದ್ದಾಗಿ ಪಿಟಿಐ ಉಲ್ಲೇಖಿಸಿದೆ.

ಡಾ. ಮನಮೋಹನ್ ಸಿಂಗ್ ಅವರ ಜೀವನ ಪಥ

ಡಾ. ಮನಮೋಹನ್ ಸಿಂಗ್ ಅವರು 1932ರ ಸೆಪ್ಟೆಂಬರ್ 26 ರಂದು ಪಂಜಾಬ್‌ನಲ್ಲಿ ಜನಿಸಿದರು. 1952 ಮತ್ತು 1954 ರಲ್ಲಿ ಕ್ರಮವಾಗಿ ಪಂಜಾಬ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದರು. ಡಾ. ಮನಮೋಹನ್ ಸಿಂಗ್ ಅವರು 1957 ರಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಿಂದ ತಮ್ಮ ಆರ್ಥಿಕ ಟ್ರಿಪೋಸ್ ವ್ಯಾಸಂಗವನ್ನು ಪೂರ್ಣಗೊಳಿಸಿದರು. ಅವರು 1962 ರಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಪಡೆದರು.

ಪಂಜಾಬ್ ವಿಶ್ವವಿದ್ಯಾನಿಲಯ ಮತ್ತು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಬೋಧನೆ ಮಾಡಿದ ನಂತರ, ಸಿಂಗ್ ಅವರು 1971 ರಲ್ಲಿ ವಾಣಿಜ್ಯ ಸಚಿವಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿ ಭಾರತ ಸರ್ಕಾರದ ಸೇವೆಗೆ ಸೇರ್ಪಡೆಯಾದರು. ಡಾ ಮನಮೋಹನ್ ಸಿಂಗ್ ಅವರು ಶೀಘ್ರದಲ್ಲೇ ಹಣಕಾಸು ಸಚಿವಾಲಯದಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ಬಡ್ತಿ ಪಡೆದರು.

ಸ್ವಲ್ಪ ಸಮಯದ ನಂತರ, ಯುಎನ್‌ಸಿಟಿಎಡಿ ಸೆಕ್ರೆಟರಿಯೇಟ್‌ನಲ್ಲಿ ಅವರನ್ನು 1987-1990 ರಿಂದ ಜಿನೀವಾದಲ್ಲಿ ದಕ್ಷಿಣ ಆಯೋಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಡಾ ಮನಮೋಹನ್‌ ಸಿಂಗ್ ಅವರು ಹಣಕಾಸು ಸಚಿವಾಲಯದಲ್ಲಿ ಕಾರ್ಯದರ್ಶಿ, ಯೋಜನಾ ಆಯೋಗದ ಉಪಾಧ್ಯಕ್ಷ, ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್, ಪ್ರಧಾನ ಮಂತ್ರಿ ಸಲಹೆಗಾರ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷ ಸ್ಥಾನಗಳ ಹೊಣೆಗಾರಿಕೆ ನಿರ್ವಹಿಸಿದ್ದರು.

Whats_app_banner

ವಿಭಾಗ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.