ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  3ನೇ ಬಾರಿ ಮೋದಿ ಸರ್ಕಾರಕ್ಕೆ ಅಧಿಕಾರ ಸಿಗುವ ಸಾಧ್ಯತೆ: ಹೊತ್ತೇರಿದಂತೆ 300 ದಾಟುವ ಸೂಚನೆ ಕೊಟ್ಟ ಎನ್‌ಡಿಎ, 200 ದಾಟುತ್ತಿದೆ ಇಂಡಿಯಾ

3ನೇ ಬಾರಿ ಮೋದಿ ಸರ್ಕಾರಕ್ಕೆ ಅಧಿಕಾರ ಸಿಗುವ ಸಾಧ್ಯತೆ: ಹೊತ್ತೇರಿದಂತೆ 300 ದಾಟುವ ಸೂಚನೆ ಕೊಟ್ಟ ಎನ್‌ಡಿಎ, 200 ದಾಟುತ್ತಿದೆ ಇಂಡಿಯಾ

ಲೋಕಸಭಾ ಚುನಾವಣೆಯ ಮತಎಣಿಕೆ ಸಾಗುತ್ತಿದ್ದು, ದೇಶದಾದ್ಯಂತ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಾರೆ. ನರೇಂದ್ರ ಮೋದಿ ಸತತ ಮೂರನೇ ಅವಧಿಕೆ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚುತ್ತಿದೆ.

ಹೊತ್ತೇರಿದಂತೆ 300 ದಾಟುವ ಸೂಚನೆ ಕೊಟ್ಟ ಎನ್‌ಡಿಎ, 200 ದಾಟುತ್ತಿದೆ ಇಂಡಿಯಾ
ಹೊತ್ತೇರಿದಂತೆ 300 ದಾಟುವ ಸೂಚನೆ ಕೊಟ್ಟ ಎನ್‌ಡಿಎ, 200 ದಾಟುತ್ತಿದೆ ಇಂಡಿಯಾ (AP)

ಲೋಕಸಭಾ ಚುನಾವಣೆ 2024ರ ಆರಂಭಿಕ ಟ್ರೆಂಡ್‌ ಆಡಳಿತಾರೂಡ ಬಿಜೆಪಿಗೆ ಸಿಹಿಸುದ್ದಿ ಕೊಟ್ಟಿದೆ. ಭಾರತದೆಲ್ಲೆಡೆ ಎನ್‌ಡಿಎ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಭಾರತೀಯ ಜನತಾ ಪಕ್ಷ ನೇತೃತ್ವದ ಎನ್‌ಡಿಎ ಬಹುಮತಕ್ಕೆ ಬೇಕಾದ ಮ್ಯಾಜಿಕ್‌ ನಂಬರ್‌ 272 ಅನ್ನು ದಾಟಿದೆ. ಸಮಯ ಕಳೆಯುತ್ತಿದ್ದಂತೆಯೇ ಎನ್‌ಡಿಎ 300 ಕ್ಷೇತ್ರಗಳಲ್ಲಿ ಮುನ್ನಡೆಯ ಸೂಚನೆ ಕೊಟ್ಟಿದೆ. ಇದೇ ವೇಳೆ, ಇಂಡಿಯಾ ಮೈತ್ರಿಕೂಟವು 200 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತರರು ಇದುವರೆಗೆ 26 ಕ್ಷೇತ್ರಗಳಲ್ಲಿ ಮೇಲುಗೈ ಸಾಧಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಆರಂಭಿಕ ಟ್ರೆಂಡ್‌ ಪ್ರಕಾರ, ಪಶ್ಚಿಮ ಬಂಗಾಳ, ಬಿಹಾರ, ಮಧ್ಯಪ್ರದೇಶ, ಕರ್ನಾಟಕ, ಗುಜರಾತ್, ಆಂಧ್ರಪ್ರದೇಶ, ರಾಜಸ್ಥಾನ, ಒಡಿಶಾ, ಜಾರ್ಖಂಡ್, ಛತ್ತೀಸ್‌ಗಢ, ಹರಿಯಾಣ, ದೆಹಲಿ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಣಿಪುರ, ಸಿಕ್ಕಿಂ, ನಾಗಾಲ್ಯಾಂಡ್‌ನಲ್ಲಿ ಮುನ್ನಡೆ ಸಾಧಿಸಿದೆ. ಇದೇ ವೇಳೆ ತಮಿಳುನಾಡು, ಕೇರಳ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಚಂಡೀಗಢ ಮತ್ತು ಪುದುಚೇರಿಯಲ್ಲಿ ವಿರೋಧ ಪಕ್ಷದ ಇಂಡಿಯಾ ಮೈತ್ರಿ ಮುನ್ನಡೆ ಸಾಧಿಸಿದೆ. ಉತ್ತರ ಪ್ರದೇಶದಲ್ಲಿ ಹಾವು-ಏಣಿಯಾಟ ನಡೆಯುತ್ತಿದೆ.

ನರೇಂದ್ರ ಮೋದಿಗೆ ಅಲ್ಪ ಮುನ್ನಡೆ

ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಆಯೋಗ ನೀಡಿರುವ ಮಾಹಿತಿ (10 ಗಂಟೆ) ಪ್ರಕಾರ, ಮೋದಿ 36424 ಮತಗಳನ್ನು ಪಡೆದು 619 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್‌ನಿಂದ ಇಲ್ಲಿ ಅಜಯ್‌ ರಾಯ್‌ ಕಣದಲ್ಲಿದ್ದಾರೆ. ಇಲ್ಲಿ ಆರಂಭಿಕ ಟ್ರೆಂಡ್‌ ಪ್ರಕಾರ ಮೋದಿ ಹಿನ್ನಡೆ ಅನುಭವಿಸಿದ್ದರು.

ಟೈಮ್ಸ್ ನೌ ಪ್ರಕಾರ, ಬಿಜೆಪಿ ನೇತೃತ್ವದ ಎನ್ನ್‌ಡಿ 300ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ನ್ಯೂಸ್ 18 ವರದಿ ಪ್ರಕಾರ ಎನ್‌ಡಿಎ 293 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಇಂಡಿಯಾ ಮೈತ್ರಿಕೂಟ 192 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಲೋಕಸಭೆಯಲ್ಲಿ ಒಟ್ಟು 543 ಸದಸ್ಯ ಬಲವಿದೆ. ಈಗಾಗಲೇ ಸೂರತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾದ ನಂತರ 542 ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದೆ. ಲೋಕಸಭೆ ಚುನಾವಣೆಯೊಂದಿಗೆ ಏಕಕಾಲದಲ್ಲಿ ನಡೆದ ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭಾ ಚುನಾವಣೆಯ ಮತ ಎಣಿಕೆಯೂ ನಡೆಯುತ್ತಿದೆ.

ಲೋಕಸಭಾ ಚುನಾವಣೆಯ ಇನ್ನಿತರ ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

ಟಿ20 ವರ್ಲ್ಡ್‌ಕಪ್ 2024