Maharashtra Politics: ಮಹಾರಾಷ್ಟ್ರದಲ್ಲಿ ಮಹತ್ವದ ಬೆಳವಣಿಗೆ; ಶಿಂಧೆ ಸರ್ಕಾರ ಸೇರಿದ ಎನ್​ಸಿಪಿಯ ಅಜಿತ್ ಪವಾರ್​ಗೆ ಡಿಸಿಎಂ ಪಟ್ಟ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Maharashtra Politics: ಮಹಾರಾಷ್ಟ್ರದಲ್ಲಿ ಮಹತ್ವದ ಬೆಳವಣಿಗೆ; ಶಿಂಧೆ ಸರ್ಕಾರ ಸೇರಿದ ಎನ್​ಸಿಪಿಯ ಅಜಿತ್ ಪವಾರ್​ಗೆ ಡಿಸಿಎಂ ಪಟ್ಟ

Maharashtra Politics: ಮಹಾರಾಷ್ಟ್ರದಲ್ಲಿ ಮಹತ್ವದ ಬೆಳವಣಿಗೆ; ಶಿಂಧೆ ಸರ್ಕಾರ ಸೇರಿದ ಎನ್​ಸಿಪಿಯ ಅಜಿತ್ ಪವಾರ್​ಗೆ ಡಿಸಿಎಂ ಪಟ್ಟ

NCP Leader Ajit Pawar: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್​ಸಿಪಿ)ದ ಹಿರಿಯ ನಾಯಕ, ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ಏಕನಾಥ್​ ಶಿಂಧೆ ಸರ್ಕಾರಕ್ಕೆ ಸೇರ್ಪಡೆಯಾಗಿದ್ದು, ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ
ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ

ಮುಂಬೈ (ಮಹಾರಾಷ್ಟ್ರ): ಸಚಿವ ಸಂಪುಟ ವಿಸ್ತರಣೆ ಮುನ್ನ ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (NCP)ದ ಹಿರಿಯ ನಾಯಕ, ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ (Ajit Pawar) ಅವರು ಏಕನಾಥ್​ ಶಿಂಧೆ ಸರ್ಕಾರಕ್ಕೆ ಸೇರ್ಪಡೆಯಾಗಿದ್ದು, ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಜಿತ್ ಪವಾರ್​ಗೆ ಎನ್​ಸಿಪಿಯ 30 ಶಾಸಕರ ಬೆಂಬಲವಿದ್ದು, 8 ಶಾಸಕರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇಂದು (ಜುಲೈ 2, ಭಾನುವಾರ) ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸ ‘ದೇವಗಿರಿ’ಯಲ್ಲಿ ಎನ್‌ಸಿಪಿ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಲೆ ಸೇರಿದಂತೆ ಪಕ್ಷದ ಕೆಲವು ನಾಯಕರು ಮತ್ತು ಶಾಸಕರ ಜೊತೆ ಸಭೆ ನಡೆಸಿದ ಅಜಿತ್ ಪವಾರ್, ನಂತರ ಪಕ್ಷದ ಕೆಲ ನಾಯಕರೊಂದಿಗೆ ರಾಜಭವನಕ್ಕೆ ತೆರಳಿದ್ದರು.

ಪುಣೆಯಲ್ಲಿದ್ದ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಸಭೆಯ ಬಗ್ಗೆ ತಮಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ. ಇತ್ತ ಪಕ್ಷದ ರಾಜ್ಯಾಧ್ಯಕ್ಷ ಜಯಂತ್‌ ಪಾಟೀಲ್‌ ಅವರು ಸಭೆಗೆ ಹಾಜರಾಗಿರಲಿಲ್ಲ.

ಇತ್ತೀಚೆಗೆ ಅಜಿತ್ ಪವಾರ್ ಅವರು ವಿರೋಧ ಪಕ್ಷದ ನಾಯಕರಾಗಿ ಮುಂದುವರಿಯಲು ಉತ್ಸುಕರಾಗಿಲ್ಲ ಮತ್ತು ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡಲು ಬಯಸುವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿತ್ತು. ಸಭೆಯಲ್ಲಿ ಪ್ರಫುಲ್ ಪಟೇಲ್, ಛಗನ್‌ ಭುಜಬಲ್‌ ಸೇರಿದಂತೆ ಪ್ರಮುಖರಿದ್ದರು.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎನ್​ಸಿಪಿ ಶಾಸಕರು

ಛಗನ್ ಭುಜಬಲ್

ಹಸನ್ ಮುಶ್ರೀಫ್

ಧನಂಜಯ್ ಮುಂಡೆ

ದಿಲೀಪ್ ವಾಲ್ಸೆ ಪಾಟೀಲ್

ಧರ್ಮರಾವ್ ಬಾಬಾ ಅತ್ರಂ

ಅದಿತಿ ತತ್ಕರೆ

ಅನಿಲ್ ಪಾಟೀಲ್

ಸಂಜಯ್ ಬನ್ಸೋಡೆ

Whats_app_banner

ವಿಭಾಗ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.