NIACL Recruitment: ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ 500 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಜನವರಿ 1 ಕಡೆ ದಿನ
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪೆನಿ ಲಿಮಿಟೆಡ್, ಎನ್ಐಎಸಿಎಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು newindia.co.in ಎನ್ಐಎಸಿಎಲ್‌ನ ಅಧಿಕೃತ ವೆಬ್ಸೈಟ್ ಮೂಲಕ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿಯಿರುವ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಕಂಪೆನಿಯಲ್ಲಿ 500 ಹುದ್ದೆಗಳು ಖಾಲಿಯಿದ್ದು, ಪದವಿ ಪಾಸಾಗಿದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ವಿವಿಧ ಉದ್ಯೋಗಗಳ ಹುಡುಕಾಟದಲ್ಲಿರುವ ಅರ್ಹ ಅಭ್ಯರ್ಥಿಗಳು ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿ ತಿಳಿದುಕೊಂಡು ಜನವರಿ 01, 2025 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮುಂದಿನ ವರ್ಷದಲ್ಲಿಯೇ ಈ ಹುದ್ದೆಗಳ ಆಯ್ಕೆಗೆ ಪ್ರವೇಶ ಪರೀಕ್ಷೆಗಳು ನಡೆಯಲಿವೆ. ಆನಂತರ ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
ಉದ್ಯೋಗ ವಿವರಗಳು
* ಸಂಸ್ಥೆಯ ಹೆಸರು : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್.
* ಹುದ್ದೆಗಳ ಹೆಸರು : ಸಹಾಯಕ ಹುದ್ದೆ.
* ಒಟ್ಟು ಹುದ್ದೆಗಳು : 500.
* ಉದ್ಯೋಗ ಸ್ಥಳ : ಭಾರತಾದ್ಯಂತ.
ವಿದ್ಯಾರ್ಹತೆ, ವಯೋಮಿತಿ
* ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಸಿ/ ಎಚ್ಎಸ್ಸಿ/ ಇಂಟರ್ಮೀಡಿಯೇಟ್/ ಪದವಿ ಮಟ್ಟದಲ್ಲಿ ಇಂಗ್ಲಿಷ್ನಲ್ಲಿ ಒಂದು ವಿಷಯವಾಗಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು 01/12/2024 ರಂತೆ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯಾಗಿ ಪ್ರಮಾಣಪತ್ರವನ್ನು ಹೊಂದಿರಬೇಕು.
ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಬಯಸುವ ಖಾಲಿ ಹುದ್ದೆಗಳಿಗೆ ರಾಜ್ಯ / ಕೇಂದ್ರಾಡಳಿತ ಪ್ರದೇಶದ ಪ್ರಾದೇಶಿಕ ಭಾಷೆಯನ್ನು ಓದುವುದು, ಬರೆಯುವುದು ಮತ್ತು ಮಾತನಾಡುವುದು ಅತ್ಯಗತ್ಯ.
01/12/2024ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ವಯೋಮಿತಿ 21 ರಿಂದ 30 ವರ್ಷಗಳ ನಡುವೆ ಇರಬೇಕು, ಅಂದರೆ ಅಭ್ಯರ್ಥಿಗಳು 02/12/1994 ಕ್ಕಿಂತ ಮೊದಲು ಮತ್ತು 01/12/2003 ರ ನಂತರ ಜನಿಸಿರಬೇಕು (ಎರಡೂ ದಿನಗಳನ್ನು ಒಳಗೊಂಡಂತೆ).
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು.
* ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ ಎಷ್ಟಿದೆ
ಎಸ್ಸಿ/ಎಸ್ಟಿ/ಅಂಗವಿಕಲ/ಇಎಕ್ಸ್ಎಸ್ ಅಭ್ಯರ್ಥಿಗಳಿಗೆ 100 ರೂ., ಇತರೆ ಅಭ್ಯರ್ಥಿಗಳಿಗೆ 850 ರೂ. ಡೆಬಿಟ್ ಕಾರ್ಡ್ಗಳು (ರುಪೇ / ವೀಸಾ / ಮಾಸ್ಟರ್ ಕಾರ್ಡ್ / ಮೆಸ್ಟ್ರೋ), ಕ್ರೆಡಿಟ್ ಕಾರ್ಡ್ಗಳು, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್ಗಳು / ಮೊಬೈಲ್ ವ್ಯಾಲೆಟ್ಗಳನ್ನು ಬಳಸಿ ಮಾತ್ರ ಪಾವತಿ ಮಾಡಬಹುದು.
ಆಯ್ಕೆ ವಿಧಾನ
ಆನ್ ಲೈನ್ ಪರೀಕ್ಷೆ (ಪ್ರಿಲಿಮಿನರಿ ಮತ್ತು ಮುಖ್ಯ ಪರೀಕ್ಷೆ) ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಅಂತಿಮ ಆಯ್ಕೆಗೆ ಮೊದಲು ಪ್ರಾದೇಶಿಕ ಭಾಷಾ ಪರೀಕ್ಷೆಗೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಡಿಸೆಂಬರ್ 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01 ಜನವರಿ 2025.
ಪರೀಕ್ಷೆಗಳು
ಟೈರ್ 1 (ಪ್ರಿಲಿಮಿನರಿ) ಆನ್ಲೈನ್ ಪರೀಕ್ಷೆ: ಜನವರಿ 27, 2025
ಟೈರ್ 2 (ಮುಖ್ಯ) ಆನ್ಲೈನ್ ಪರೀಕ್ಷೆ: ಮಾರ್ಚ್ 2, 2025
ವಿವರವಾದ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸಲು ನೇರ ಲಿಂಕ್ ಇಲ್ಲಿದೆ
https://www.newindia.co.in/recruitment/list