ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Nia Raid: ಕರ್ನಾಟಕ, ಕೇರಳ ಸೇರಿದಂತೆ 5 ರಾಜ್ಯಗಳಲ್ಲಿ ಏಕಕಾಲಕ್ಕೆ ಎನ್​ಐಎ ದಾಳಿ

NIA Raid: ಕರ್ನಾಟಕ, ಕೇರಳ ಸೇರಿದಂತೆ 5 ರಾಜ್ಯಗಳಲ್ಲಿ ಏಕಕಾಲಕ್ಕೆ ಎನ್​ಐಎ ದಾಳಿ

Karnataka NIA Raid: ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 5 ರಾಜ್ಯಗಳ 14 ಕಡೆ ಎನ್​​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎನ್​​ಐಎ ದಾಳಿ  (ಸಂಗ್ರಹ ಚಿತ್ರ)
ಎನ್​​ಐಎ ದಾಳಿ (ಸಂಗ್ರಹ ಚಿತ್ರ)

ನವದೆಹಲಿ: ಕರ್ನಾಟಕ ಸೇರಿದಂತೆ ಭಾರತದ 5 ರಾಜ್ಯಗಳ 14 ಸ್ಥಳಗಳಲ್ಲಿ ಎನ್​ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ-NIA) ಅಧಿಕಾರಿಗಳು ಇಂದು (ಆಗಸ್ಟ್ 13, ಭಾನುವಾರ) ದಾಳಿ ನಡೆಸಿದ್ದಾರೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಳಿ ನಡೆಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಜನರಲ್ಲಿ ಕೋಮುವಾದ ಕೆರಳಿಸುವ ಮತ್ತು ದೇಶವನ್ನು ಅಸ್ಥಿರಗೊಳಿಸುವ ಮೂಲಕ ಶಾಂತಿ ಕದಡುವ ಪಿಎಫ್​ಐ (ಪಾಪ್ಯುಲರ್​ ಫ್ರಂಟ್​ ಆಫ್ ಇಂಡಿಯಾ -PFI) ಮತ್ತು ಇತರ ಸಂಘಟನೆಗಳ ಪಿತೂರಿಯನ್ನು ವಿಫಲಗೊಳಿಸುವ ನಿರಂತರ ಪ್ರಯತ್ನಗಳ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಐದು ರಾಜ್ಯಗಳಲ್ಲಿ ಸರಣಿ ದಾಳಿ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇರಳ, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಬಿಹಾರ ರಾಜ್ಯಗಳ 14 ಸ್ಥಳಗಳಲ್ಲಿ ದಾಳಿ ನಡೆಸಿರುವ ಎನ್​ಐಎ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಹಲವಾರು ಡಿಜಿಟಲ್ ಸಾಧನಗಳು ಮತ್ತು ದೋಷಾರೋಪಣೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಕೇರಳದ ಕಣ್ಣೂರು ಮತ್ತು ಮಲಪ್ಪುರಂ ಜಿಲ್ಲೆ, ಕರ್ನಾಟಕದ ದಕ್ಷಿಣ ಕನ್ನಡ, ಮಹಾರಾಷ್ಟ್ರದ ನಾಸಿಕ್ ಮತ್ತು ಕೊಲ್ಹಾಪುರ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಬಿಹಾರದ ಕತಿಹಾರ್‌ನಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಯೋತ್ಪಾದನೆ, ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಗಳ ಮೂಲಕ 2047 ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡಲು ಪಿಎಫ್​ಐ ಪಿತೂರಿ ನಡೆಸಿದೆ ಎಂದು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಕೆಲ ತಿಂಗಳ ಹಿಂದೆ ಆರೋಪಿಸಿತ್ತು. ಅಂದಿನಿಂದ ಪಿಎಫ್‌ಐ ಪಿತೂರಿಯನ್ನು ವಿಫಲಗೊಳಿಸಲು ಎನ್‌ಐಎ ಕೆಲಸ ಮಾಡುತ್ತಿದೆ.

ಸಮಾಜದ ಕೆಲವು ವರ್ಗಗಳ ವಿರುದ್ಧ ಹೋರಾಡಲು ಭಾರತ-ವಿರೋಧಿ ಅಜೆಂಡಾವನ್ನು ಮುಂದಿಟ್ಟುಕೊಂಡು ತೀವ್ರಗಾಮಿ ಕಾರ್ಯಕರ್ತರನ್ನು ಹುಟ್ಟುಹಾಕಲು ವಿವಿಧ ರಾಜ್ಯಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಯುವಕರಿಗೆ ಪಿಎಫ್​ಐ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದೆ ಎಂಬ ಆರೋಪವಿದೆ.

IPL_Entry_Point