Koti Kanta Gayana: "ಕೋಟಿ ಕಂಠ ಗಾಯನ"ದಲ್ಲಿ ಕತಾರ್ಲ್ಲಿ ನೆಲೆಸಿರುವ ಆದಿವಾಸಿ ಕನ್ನಡಿಗರು ಭಾಗಿ.. ವಿಡಿಯೋ ನೋಡಿ
ಕತಾರ್ಲ್ಲಿ ನೆಲೆಸಿರುವ ಆದಿವಾಸಿ ಕನ್ನಡಿಗರು ಹಾಗೂ ಕರ್ನಾಟಕ ಸಂಘದವರು 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರದ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಆಯೋಜಿಸಿದ "ಕೋಟಿ ಕಂಠ ಗಾಯನ"ದ ಅಡಿಯಲ್ಲಿ "ನನ್ನ ನಾಡು ನನ್ನ ಹಾಡು" ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕತಾರ್ಲ್ಲಿ ನೆಲೆಸಿರುವ ಆದಿವಾಸಿ ಕನ್ನಡಿಗರು ಹಾಗೂ ಕರ್ನಾಟಕ ಸಂಘದವರು 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರದ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಆಯೋಜಿಸಿದ "ಕೋಟಿ ಕಂಠ ಗಾಯನ"ದ ಅಡಿಯಲ್ಲಿ "ನನ್ನ ನಾಡು ನನ್ನ ಹಾಡು" ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಕೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳನ್ನು, ಕರ್ನಾಟಕ ಸಂಘ ಕತಾರ್ನ ಆಡಳಿತ ಮಂಡಳಿ ಸದಸ್ಯರು ಹಾಗೂ ಕರ್ನಾಟಕ ಸಂಘದ ಸದಸ್ಯರು ಕತಾರ್ ನ ಕಾಲಮಾನ 11 ಗಂಟೆಗೆ ಹಾಡಿದರು.
ಗಾಯನ ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರು ಹಾಗೂ ಕರ್ನಾಟಕ ಸಂಘದ ಮಾಜಿ ಉಪಾಧ್ಯಕ್ಷರು ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು, ಕರ್ನಾಟಕ ಸಂಘ ಅಧ್ಯಕ್ಷರು ಶ್ರೀ ಮಹೇಶ್ ಗೌಡ ಅವರು ಭಾಗವಹಿಸಿದರು. ಗಾಯನದಲ್ಲಿ ಭಾಗವಹಿಸಿದ ಎಲ್ಲ ಗಾಯಕರು ಹಾಗೂ ಸಂಘದ ಸದಸ್ಯರಿಗೆ ಮಹೇಶ್ ಗೌಡ ಅವರು ಧನ್ಯವಾದಗಳನ್ನು ತಿಳಿಸಿದರು. ಪ್ರಪಂಚದ ಎಲ್ಲಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಈ ಅಭಿಯಾನವನ್ನು " ಗಿನೆಸ್ ವರ್ಲ್ಡ್ ರೆಕಾರ್ಡ್"ಗೆ ಸೇರಿಸಲಾಗುವುದು.
ಏನಿದು ಕೋಟಿ ಕಂಠ ಗಾಯನ?
ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಅದರಂತೆ ಇಂದು ನಾಡಿನಾದ್ಯಂತ ಏಕಕಾಲದಲ್ಲಿ ಕನ್ನಡದ ಕವಿಗಳ ಆರು ಜನಪ್ರಿಯ ಗೀತೆಗಳನ್ನು ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗಿದ್ದು, ದಾಖಲೆ ನಿರ್ಮಾಣವಾಗಿದೆ.
ಇಂದು ಜರುಗಿದ ಕೋಟಿ ಕಂಠ ಗಾಯನದಲ್ಲಿ 'ನನ್ನ ನಾಡು - ನನ್ನ ಹಾಡು' ಸಮೂಹ ಗೀತಗಾಯನದಲ್ಲಿ ಕುವೆಂಪು ವಿರಚಿತ ನಾಡಗೀತೆ, ಹುಯಿಲಗೋಳ ನಾರಾಯಣರಾಯರ ಉದವಾಗಲಿ ನಮ್ಮ ಚೆಲುವ ಕನ್ನಡನಾಡು, ರಾಷ್ಟ್ರ ಕವಿ ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ, ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ, ನಾಡೋಜ ಡಾ.ಚೆನ್ನವೀರ ಕಣವಿಯವರ ವಿಶ್ವವಿನೂತ ವಿದ್ಯಾಚೇತನ ಹಾಗೂ ಡಾ.ಹಂಸಲೇಖರವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ದೇಶ-ವಿದೇಶಗಳಲ್ಲಿ ಕನ್ನಡಿಗರು ಹಾಡಿದ್ದಾರೆ.