ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Odisha Train Accident: ಕೋರಮಂಡಲ ಬೋಗಿಗಳಿಗೆ ಯಶವಂತಪುರ ಹೌರಾ ಎಕ್ಸ್‌ಪ್ರೆಸ್‌ ಡಿಕ್ಕಿ; 300ರ ಗಡಿ ದಾಟಿದ ಸಾವಿನ ಸಂಖ್ಯೆ ಶಂಕೆ

Odisha Train Accident: ಕೋರಮಂಡಲ ಬೋಗಿಗಳಿಗೆ ಯಶವಂತಪುರ ಹೌರಾ ಎಕ್ಸ್‌ಪ್ರೆಸ್‌ ಡಿಕ್ಕಿ; 300ರ ಗಡಿ ದಾಟಿದ ಸಾವಿನ ಸಂಖ್ಯೆ ಶಂಕೆ

Odisha Train Accident: ಅತ್ಯಂತ ಭೀಕರ ರೈಲ್ವೆ ಅಪಘಾತದಲ್ಲಿ ಒಂದು ಗೂಡ್ಸ್‌ ಮತ್ತು ಎರಡು ಎಕ್ಸ್‌ಪ್ರೆಸ್‌ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಅನೇಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ.

ಒಡಿಶಾದಲ್ಲಿ ನಡೆದ ರೈಲು ದುರಂತದ ದೃಶ್ಯ
ಒಡಿಶಾದಲ್ಲಿ ನಡೆದ ರೈಲು ದುರಂತದ ದೃಶ್ಯ (ANI)

ಒಡಿಶಾದಲ್ಲಿ ಗೂಡ್ಸ್​ ರೈಲಿಗೆ ಯುಪಿ ಶಾಲಿಮಾರ್- ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿದ್ದು, ಹಲವು ಬೋಗಿಗಳು ಹಳಿ ತಪ್ಪಿದ್ದವು. ಈ ಬೋಗಿಗಳಿಗೆ ಯಶವಂತಪುರ ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದು, ಇನ್ನಷ್ಟು ಬೋಗಿಗಳು ಹಳಿ ತಪ್ಪಿವೆ. ಈ ಭೀಕರ ದುರಂತದಲ್ಲಿ ಸಾವಿನ ಸಂಖ್ಯೆ 300ರ ಗಡಿ ದಾಟುವ ಆತಂಕ ವ್ಯಕ್ತವಾಗಿದೆ.

ಟ್ರೆಂಡಿಂಗ್​ ಸುದ್ದಿ

ಅತ್ಯಂತ ಭೀಕರ ರೈಲ್ವೆ ಅಪಘಾತದಲ್ಲಿ ಒಂದು ಗೂಡ್ಸ್‌ ಮತ್ತು ಎರಡು ಎಕ್ಸ್‌ಪ್ರೆಸ್‌ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಅನೇಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ.

ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹದಿನೈದು ಬೋಗಿಗಳು ಹಳಿ ತಪ್ಪಿವೆ. ಇದಲ್ಲದೆ, ಇತರ ಎರಡು ರೈಲುಗಳು ಹಳಿತಪ್ಪಿವೆ.

ಇಂದು (ಜೂ.2) ಸಂಜೆ 7 ಗಂಟೆಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ನ 10-12 ಬೋಗಿಗಳು ಬಾಲೇಶ್ವರ ಬಳಿ ಹಳಿತಪ್ಪಿ ಎದುರಿನ ಹಳಿಯಲ್ಲಿ ಬಿದ್ದಿವೆ. ಸ್ವಲ್ಪ ಸಮಯದ ನಂತರ, ಯಶವಂತಪುರದಿಂದ ಹೌರಾಕ್ಕೆ ಹೋಗುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಅದರ 3-4 ಬೋಗಿಗಳು ಹಳಿತಪ್ಪಿದವು ಎಂದು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಹೇಳಿದರು.

ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಹೊರಡುವ ಈ ಎಕ್ಸ್​ಪ್ರೆಸ್​ ರೈಲು ಚೆನ್ನೈನ ಪುರಟ್ಚಿ ತಲೈವರ್ ಡಾ. ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲು ನಿಲ್ದಾಣವನ್ನು ತಲುಪಬೇಕಾಗಿತ್ತು. ಅಪರಾಹ್ನ 3.30 ಕ್ಕೆ ಹೊರಡುವ ರೈಲು ಮುಸ್ಸಂಜೆ 6.30 ಕ್ಕೆ ಬಾಲಸೋರ್ ನಿಲ್ದಾಣವನ್ನು ತಲುಪಿತ್ತು. ನಾಳೆ ( ಜೂನ್ 3) ಸಂಜೆ 4.50ಕ್ಕೆ ಚೆನ್ನೈ ತಲುಪಬೇಕಿತ್ತು. ಆದರೆ ಬಾಲಸೋರ್‌ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಬಹನಾಗಾ ರೈಲು ನಿಲ್ದಾಣದ ಬಳಿ ಈ ರೈಲು ಭೀಕರ ಅಪಘಾತಕ್ಕೀಡಾಗಿದೆ.

ಒಡಿಶಾ ರೈಲು ಅಪಘಾತದಲ್ಲಿ ಈವರೆಗೆ 50 ಮಂದಿ ಸಾವನ್ನಪ್ಪಿದ್ದು, 132 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆ, ಮೆಡಿಕಲ್​ ಕಾಲೇಜುಗಳಲ್ಲಿ ದಾಖಲಿಸಲಾಗುತ್ತಿದೆ. ಸುಮಾರು 50 ಆ್ಯಂಬುಲೆನ್ಸ್​ಗಳು ಸ್ಥಳಕ್ಕೆ ದೌಡಾಯಿಸಿದೆ. ಗಾಯಾಳುಗಳ ಹಾಗೂ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ.

IPL_Entry_Point