ತಮಿಳುನಾಡಿನಲ್ಲಿ ಭಾರೀ ಮಳೆ: ಊಟಿಯ ಪ್ರವಾಸಿ ತಾಣಗಳು ಬಂದ್; ರೆಡ್ ಅಲರ್ಟ್ ಘೋಷಣೆ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ತಮಿಳುನಾಡಿನಲ್ಲಿ ಭಾರೀ ಮಳೆ: ಊಟಿಯ ಪ್ರವಾಸಿ ತಾಣಗಳು ಬಂದ್; ರೆಡ್ ಅಲರ್ಟ್ ಘೋಷಣೆ

ತಮಿಳುನಾಡಿನಲ್ಲಿ ಭಾರೀ ಮಳೆ: ಊಟಿಯ ಪ್ರವಾಸಿ ತಾಣಗಳು ಬಂದ್; ರೆಡ್ ಅಲರ್ಟ್ ಘೋಷಣೆ

ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಪ್ರಮುಖ ಪ್ರವಾಸಿ ತಾಣ ಊಟಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ.

ಪ್ರವಾಸಿ ತಾಣ ಊಟಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ
ಪ್ರವಾಸಿ ತಾಣ ಊಟಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ

ಊಟಿ: ತಮಿಳುನಾಡಿನ ನೀಲಗಿರಿ ಪ್ರದೇಶದಲ್ಲಿ ಭಾರೀ ಮಾಳೆಯಾಗುತ್ತಿದ್ದು, ಸಾಮಾನ್ಯ ಜನಜೀವನಕ್ಕೆ ತೊಂದರೆ ಉಂಟಾಗಿದೆ. ಅದರ ಬೆನ್ನಲ್ಲೇ ಐಎಂಡಿ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಊಟಿ ಸಹಿತ ಗುಡ್ಡಗಾಡು ಪ್ರವಾಸಿ ಆಕರ್ಷಣೆಯ ಪ್ರಸಿದ್ಧ ಸ್ಥಳಗಳನ್ನು ಪ್ರವಾಸಿಗರಿಗೆ ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ, ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಸ್ಥಳಗಳನ್ನು ಮುಚ್ಚುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಬೋಟ್ ಹೌಸ್, ದೊಡ್ಡಬೆಟ್ಟ ಶಿಖರ, ಪೈನ್ ಅರಣ್ಯ ಮತ್ತು ಇತರ ಸ್ಥಳಗಳನ್ನು ಮುಚ್ಚಲಾಗಿದೆ. ಜತೆಗೆ ಹಿರಿಯ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೆ, ಊಟಿ-ಕೂನೂರು ರಸ್ತೆಯಲ್ಲಿ 60ಕ್ಕೂ ಅಧಿಕ ಮರಗಳು ಉರುಳಿ ಬಿದ್ದಿವೆ, 14 ಸ್ಥಳಗಳಲ್ಲಿ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹೀಗಾಗಿ ಜನರಿಗೆ ತೊಂದರೆ ಉಂಟಾಗಿದೆ.

ಮಳೆಯಿಂದಾಗಿ ತಾಪಮಾನ ಮತ್ತಷ್ಟು ಕಡಿಮೆಯಾಗಿದ್ದು, ಜನರು ಮನೆಯನ್ನು ಬೆಚ್ಚಗಿಡಲು ದೀಪಗಳನ್ನು ಹಚ್ಚುವಂತೆ ಸೂಚಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಈ ಪ್ರದೇಶಕ್ಕೆ ರೆಡ್ ಅಲರ್ಟ್ ಘೋಷಿಸಿದೆ. ಜತೆಗೆ ಕಳೆದ 24 ಗಂಟೆಗಳಲ್ಲಿ 20 ಸೆಂ.ಮೀ.ಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ವಾಡಿಕೆಗಿಂತ ಮೊದಲೇ ಮಳೆ ಆರಂಭವಾಗಿದ್ದರಿಂದ, ಪ್ರವಾಸಿಗರು ಊಟಿ ಪ್ರವಾಸವನ್ನು ಮುಂದೂಡಬೇಕಾಗಿದೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.