ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ರಜವುಲ್ಲಾ ನಿಜಾಮಾನಿಯನ್ನು ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ ಅಪರಿಚಿತ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ರಜವುಲ್ಲಾ ನಿಜಾಮಾನಿಯನ್ನು ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ ಅಪರಿಚಿತ

ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ರಜವುಲ್ಲಾ ನಿಜಾಮಾನಿಯನ್ನು ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ ಅಪರಿಚಿತ

ಆರ್‌ಎಸ್‌ಎಸ್ ಪ್ರಧಾನ ಕಚೇರಿಯ ಮೇಲಿನ ದಾಳಿಯ ಸೂತ್ರಧಾರ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ರಜವುಲ್ಲಾ ನಿಜಾಮಾನಿಯನ್ನು ಅಪರಿಚಿತ ಬಂದೂಕುಧಾರಿಗಳು ಪಾಕಿಸ್ತಾನದ ಸಿಂಧ್‌ನಲ್ಲಿ ಹತ್ಯೆ ಮಾಡಿದ್ದಾರೆ.

ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ರಜವುಲ್ಲಾ ನಿಜಾಮಾನಿ
ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ರಜವುಲ್ಲಾ ನಿಜಾಮಾನಿ (X/ Paras Nayak)

ನವದೆಹಲಿ: 2006 ರಲ್ಲಿ ಆರ್‌ಎಸ್‌ಎಸ್ ಪ್ರಧಾನ ಕಚೇರಿಯ ಮೇಲೆ ನಡೆದ ದಾಳಿಯ ಹಿಂದಿನ ಮಾಸ್ಟರ್‌ ಮೈಂಡ್ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ರಜವುಲ್ಲಾ ನಿಜಾಮಿ ಅಲಿಯಾಸ್ ಅಬು ಸೈಯುಲ್ಲಾನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಭಾನುವಾರ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ ಸರ್ಕಾರದಿಂದ ಭದ್ರತೆ ಒದಗಿಸಿದ್ದ ನಿಜಾಮನಿಯು ಇಂದು ಮಧ್ಯಾಹ್ನ ಸಿಂಧ್‌ನ ಮಾಟ್ಲಿಯಲ್ಲಿರುವ ತನ್ನ ನಿವಾಸದಿಂದ ಹೊರಟಿದ್ದನು. ರಸ್ತೆ ಮಾರ್ಗದ ಮೂಲಕ ಸಾಗುವಾಗ ಕ್ರಾಸಿಂಗ್ ಬಳಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಗ್ಪುರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿಯ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಮಾತ್ರವಲ್ಲದೆ, ಲಷ್ಕರ್ ಭಯೋತ್ಪಾದಕನಾಗಿದ್ದ ಈತ 2005 ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಮೇಲಿನ ದಾಳಿ ಮತ್ತು 2001ರಲ್ಲಿ ರಾಂಪುರದ ಸಿಆರ್‌ಪಿಎಫ್ ಶಿಬಿರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದನು.

ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.