ಉಗ್ರರು ಎಲ್ಲಿ ಅಡಗಿ ಕೂತರೂ ಬಿಡುವುದಿಲ್ಲ: ಆದಂಪುರ ವಾಯುನೆಲೆಯಿಂದ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಉಗ್ರರು ಎಲ್ಲಿ ಅಡಗಿ ಕೂತರೂ ಬಿಡುವುದಿಲ್ಲ: ಆದಂಪುರ ವಾಯುನೆಲೆಯಿಂದ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ

ಉಗ್ರರು ಎಲ್ಲಿ ಅಡಗಿ ಕೂತರೂ ಬಿಡುವುದಿಲ್ಲ: ಆದಂಪುರ ವಾಯುನೆಲೆಯಿಂದ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ

ಭಾರತದಲ್ಲಿ ಮತ್ತೊಂದು ಭಯೋತ್ಪಾದಕ ದಾಳಿ ಸಂಭವಿಸಿದರೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಆದಂಪುರ ವಾಯುನೆಲೆಗೆ ಭೇಟಿ ನೀಡಿದ್ದ ಅವರು ಯೋಧರೊಡನೆ ಸಂವಾದದಲ್ಲಿ ತೊಡಗಿದ್ದರು.

ಆದಂಪುರ ವಾಯುನೆಲೆಯಿಂದ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ
ಆದಂಪುರ ವಾಯುನೆಲೆಯಿಂದ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ

ನವದೆಹಲಿ: ಭಾರತದಲ್ಲಿ ಮತ್ತೊಂದು ಭಯೋತ್ಪಾದಕ ದಾಳಿಗೆ ಅವಕಾಶ ನೀಡಿದರೆ ಅದರ ಪರಿಣಾಮ ಚೆನ್ನಾಗಿರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಾಕಿಸ್ತಾನಕ್ಕೆ ಬಲವಾದ ಎಚ್ಚರಿಕೆ ನೀಡಿದ್ದಾರೆ. ಪಂಜಾಬ್‌ನ ಆದಂಪುರ ವಾಯುನೆಲೆಯಲ್ಲಿ ವಾಯುಪಡೆಯ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಯಾವಾಗಲೂ ಶಾಂತಿಯಿಂದ ಇರುತ್ತದೆ, ಆದರೆ ಶತ್ರುಗಳ ನಮ್ಮ ಮೇಲೆ ದಾಳಿ ಮಾಡಿದರೆ ಅವರಿಗೆ ಸೂಕ್ತ ಉತ್ತರ ನೀಡಲು ಅದು ಯಾವಾಗಲೂ ಸಿದ್ಧವಾಗಿದೆ ಎಂದು ಹೇಳಿದರು.

ಪಾಕಿಸ್ತಾನವು ಭಯೋತ್ಪಾದನೆ ಅಥವಾ ಯಾವುದೇ ರೀತಿಯ ಮಿಲಿಟರಿ ದುಷ್ಕೃತ್ಯವನ್ನು ಇನ್ನು ಮುಂದೆ ಬಿಚ್ಚಿಟ್ಟರೆ ಭಾರತವು ಸೂಕ್ತ ಉತ್ತರವನ್ನು ನೀಡುತ್ತದೆ ಎಂದು ಮೋದಿ ಹೇಳಿದ್ದಾರೆ. ನಾವು ಯಾವಾಗಲೂ ಜಾಗರೂಕರಾಗಿರಬೇಕು ಮತ್ತು ಸಿದ್ಧರಾಗಿರಬೇಕು. ನಾವು ಶತ್ರುಗಳಿಗೆ ನವ ಭಾರತದೊಂದಿಗೆ ವ್ಯವಹರಿಸುತ್ತಿದ್ದೇವೆ ಎಂದು ನೆನಪಿಸುತ್ತಲೇ ಇರಬೇಕು ಎಂದು ಮೋದಿ ವಾಯುನೆಲೆಯಲ್ಲಿ ತಿಳಿಸಿದ್ದಾರೆ.

ನಾವು ಉಗ್ರರ ಅಡಗುತಾಣವನ್ನು ಉಡಾಯಿಸಿ, ಧೂಳೆಬ್ಬಿಸಿದ್ದೇವೆ. ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆಗಳು ಪಾಕಿಸ್ತಾನ ಸೇನೆಯನ್ನು ಸೋಲಿಸಿವೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರು ಶಾಂತಿಯುತವಾಗಿ ಬದುಕಲು ಯಾವುದೇ ಸ್ಥಳವಿಲ್ಲ ಎಂಬ ಸಂದೇಶವನ್ನು ನಾವು ಅವರಿಗೆ ನೀಡಿದ್ದೇವೆ. ಉಗ್ರರು ಎಲ್ಲಿಯೇ ಅಡಗಿ ಕೂತರೂ, ಮನೆಗೆ ನುಗ್ಗಿ ನಾವು ಹೊಡೆಯುತ್ತೇವೆ ಎಂದು ಮೋದಿ ಪ್ರತಿಪಾದಿಸಿದರು.

ಮಂಗಳವಾರ ಬೆಳಿಗ್ಗೆ ಪಂಜಾಬ್‌ನ ಆದಂಪುರ ವಾಯುನೆಲೆಗೆ ಭೇಟಿ ನೀಡಿದ ಪ್ರಧಾನಿ ಮೋದಿ, ಪಾಕಿಸ್ತಾನದೊಂದಿಗಿನ ಇತ್ತೀಚಿನ ಸಂಘರ್ಷದ ಸಮಯದಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿರುವ ವಾಯುಪಡೆಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.

ಭಾರತ್ ಮಾತಾ ಕಿ ಜೈ ಎನ್ನುವುದು ಕೇವಲ ಘೋಷಣೆಯಲ್ಲ

ಅದು ಕೇವಲ ಘೋಷಣೆಯಲ್ಲ, ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಡುವ ದೇಶದ ಸೈನಿಕರ ಪ್ರತಿಜ್ಞೆಯಾಗಿದೆ ಮತ್ತು ಆಪರೇಷನ್ ಸಿಂದೂರ್ ನಂತರ ಅವರ ಶೌರ್ಯದ ಕಥೆಗಳು ಇತಿಹಾಸದಲ್ಲಿ ಶಾಶ್ವತವಾಗಿ ಅಚ್ಚಳಿಯದೆ ಉಳಿದಿವೆ ಎಂದು ಮೋದಿ ಹೇಳಿದರು.

ಭಾರತ್ ಮಾತಾ ಕಿ ಜೈ ಕೇವಲ ಘೋಷಣೆಯಲ್ಲ, ಅದು ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಡುವ ನಮ್ಮ ಸೈನಿಕರ ಪ್ರತಿಜ್ಞೆಯಾಗಿದೆ. ನಮ್ಮ ಡ್ರೋನ್‌ಗಳು ಮತ್ತು ಕ್ಷಿಪಣಿಗಳು ನಮ್ಮ ಶತ್ರುಗಳನ್ನು ಅಪ್ಪಳಿಸಿದಾಗ, ಅವರು 'ಭಾರತ್ ಮಾತಾ ಕಿ ಜೈ' ಎಂದು ಕೇಳುತ್ತಾರೆ. ನಿಮ್ಮ ಶೌರ್ಯದ ಕಥೆಗಳು ಇತಿಹಾಸದಲ್ಲಿ ಶಾಶ್ವತವಾಗಿ ಅಚ್ಚಳಿಯದೆ ಉಳಿಯುತ್ತವೆ. ನಮ್ಮ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಸಿಬ್ಬಂದಿಗೆ ನಾನು ನಮಸ್ಕರಿಸುತ್ತೇನೆ ಎಂದು ಮೋದಿ ಹೇಳಿದರು.

ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.