ಕನ್ನಡ ಸುದ್ದಿ  /  Nation And-world  /  Political News Lok Sabha Election 2024 Pm Narendra Modi To Bs Yediyurappa Bjp Releases Star Campaigners List Rmy

Lok Sabha Polls 2024: ಪ್ರಧಾನಿ ಮೋದಿರಿಂದ ಅಮಿತ್ ಶಾವರೆಗೆ; ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ, ಕರ್ನಾಟಕದ ಅಪ್ಪ, ಮಗನಿಗೆ ಸ್ಥಾನ

BJP Star Campaigners: ಲೋಕಸಭೆ ಚುನಾವಣೆಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ಬಿವೈ ವಿಜಯೇಂದ್ರ ಸ್ಥಾನ ಪಡೆದಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಕರ್ನಾಟಕದಿಂದ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಬಿವೈ ವಿಜಯೇಂದ್ರ ಸ್ಥಾನ ಪಡೆದಿದ್ದಾರೆ.
ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಕರ್ನಾಟಕದಿಂದ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಬಿವೈ ವಿಜಯೇಂದ್ರ ಸ್ಥಾನ ಪಡೆದಿದ್ದಾರೆ.

ಬೆಂಗಳೂರು: 18ನೇ ಲೋಕಸಭೆ ಚುನಾವಣೆಗೆ (Lok Sabha Election 2024) ವಿವಿಧ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದರಲ್ಲಿ ಬ್ಯುಸಿಯಾಗಿರುವ ನಡುವೆಯೇ ಅತಿ ದೊಡ್ಡ ರಾಜಕೀಯ ಪಕ್ಷ ಭಾರತೀಯ ಜನತಾ ಪಾರ್ಟಿ-ಬಿಜೆಪಿ ಲೋಕ ಸಮರಕ್ಕೆ 40 ಸದಸ್ಯರ ಸ್ಟಾರ್ ಪ್ರಚಾರಕರ (BJP Star Campaigners List) ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi), ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಟ್ಟಿಯಲ್ಲಿರುವ ಪ್ರಮುಖನಾಯರಾಗಿದ್ದಾರೆ.

ರಾಜ್ಯವಾರು ನೋಡುವುದಾದರೆ ಕರ್ನಾಟಕದ ಅಪ್ಪ, ಮಗ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa), ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಸ್ಥಾನ ಪಡೆದಿದ್ದಾರೆ. ಬುಧವಾರ (ಮಾರ್ಚ್ 27) ಬಿಡುಗಡೆ ಮಾಡಿರುವ ಸ್ಟಾರ್ ಕ್ಯಾಂಪೇರ್‌ ಪಟ್ಟಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೆಸರು ಕೂಡ ಇದೆ. ಸಚಿವೆ ಸ್ಮೃತಿ ಇರಾನಿ, ಗಿರಿರಾಜ್ ಸಿಂಗ್, ನಿತ್ಯಾನಂದ ರೈ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಕೂಡ ಈ ಪಟ್ಟಿಯಲ್ಲಿದ್ದಾರೆ.

ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್, ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿಹ್ಹಾ, ರೇಣು ದೇವಿ, ಮಂಗಲ್ ಪಾಂಡೆ, ಪ್ರೇಮ್ ಕುಮಾರ್, ನೀರಜ್ ಕುಮಾರ್ ಸಿಂಗ್, ಸೈಯದ್ ಶಾನವಾಜ್ ಹುಸೇನ್ ಹಾಗೂ ಸುಶೀಲ್ ಕುಮಾರ್ ಮೋದಿ ಸೇರಿದಂತೆ ಕೆಲವು ರಾಜ್ಯಗಳ ಉಪ ಮುಖ್ಯಮಂತ್ರಿಗಳನ್ನು ಬಿಜೆಪಿ ಸ್ಟಾರ್ ಕ್ಯಾಂಪೇನ್‌ರಗಳಾಗಿ ನೇಮಿಸಿಕೊಂಡಿದೆ.

ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಸೇರಿದಂತೆ ಮೂವರು ಹಾಲಿ ಸಂಸದರಿಗೆ ಬಿಹಾರದಲ್ಲಿ ಈ ಬಾರಿ ಟಿಕೆಟ್ ನೀಡಿಲ್ಲ. ಇತ್ತ ರಾಜ್ಯದಲ್ಲೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ, ಅನಂತಕುಮಾರ್ ಹೆಗಡೆ, ಡಿವಿ ಸದಾನಂದ ಗೌಡ ಸೇರಿ ಕೆಲವರಿಗೆ ಟಿಕೆಟ್ ನೀಡಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರು ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು, ಅವರಿಗೆ ಹಾಸನ, ಮಂಡ್ಯ ಹಾಗೂ ಕೋಲಾರವನ್ನು ಬಿಟ್ಟುಕೊಟ್ಟಿದ್ದಾರೆ. ಕೋಲಾರದಲ್ಲಿ ಬಿಜೆಪಿ ಹಾಲಿ ಸಂಸದ ಎಸ್ ಮುನಿಸ್ವಾಮಿಗೆ ಟಿಕೆಟ್ ಕೈತಪ್ಪಿದೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ ಇಂದು (ಮಾರ್ಚ್ 31, ಭಾನುವಾರ) ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ರಾಲಿಯಲ್ಲಿ ಭಾಗವಹಿಸುವ ಮೂಲಕ ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಯುಪಿಯಲ್ಲಿ ಚುನಾವಣಾ ಪ್ರಚಾರವನ್ನು ನಡೆಸಲಿಸಿದ್ದಾರೆ. ಈ ವೇಳೆ ಪಕ್ಷದ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

2014 ರಿಂದ ಸತತ ಎರಡು ಬಾರಿ ಎನ್‌ಡಿಎ ಮೈತ್ರಿ ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದೆ. ಈ ಬಾರಿ ಗೆದ್ದರೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗುತ್ತದೆ. ನರೇಂದ್ರ ಮೋದಿ ಸತತ 2 ಬಾರಿ ಪ್ರಧಾನಿಯಾಗಿದ್ದು, ಅವರು ಕೂಡ ಹ್ಯಾಟ್ರಿಕ್ ಪ್ರಧಾನಿಯ ನಿರೀಕ್ಷೆಯಲ್ಲಿದ್ದಾರೆ. 2024ರ ಲೋಕಸಭಾ ಚುನಾವಣೆ ಏಪ್ರಿಲ್ 19 ರಿಂದ ಜೂನ್ 1 ವರೆಗೆ ಒಟ್ಟು 7 ಹಂತಗಳಲ್ಲಿ ನಡೆಯಲಿದೆ. ಇದರ ಜೊತೆಗೆ ಇದೇ ಅವಧಿಯಲ್ಲಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳೂ ನಡೆಯಲಿವೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ವಿಧಾನಸಭೆಯ ಫಲಿತಾಂಶ ಜೂನ್ 4 ರಂದು ಪ್ರಕಟವಾಗಲಿದೆ.