ಮೋದಿ ಅಧಿಕಾರದಿಂದ ತೆಗೆಯುವ ಮೊದಲು ನಾನು ಸಾಯೋಲ್ಲ; ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಅಮಿತ್‌ ಶಾ ಆಕ್ರೋಶ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಮೋದಿ ಅಧಿಕಾರದಿಂದ ತೆಗೆಯುವ ಮೊದಲು ನಾನು ಸಾಯೋಲ್ಲ; ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಅಮಿತ್‌ ಶಾ ಆಕ್ರೋಶ

ಮೋದಿ ಅಧಿಕಾರದಿಂದ ತೆಗೆಯುವ ಮೊದಲು ನಾನು ಸಾಯೋಲ್ಲ; ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಅಮಿತ್‌ ಶಾ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಂತೆ ಕಾಂಗ್ರೆಸ್‌ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆಗೆ ಗೃಹ ಸಚಿವ ಅಮಿತ್‌ ಶಾ ತಿರುಗೇಟು ನೀಡಿದ್ದಾರೆ.

ಮೋದಿ ಅವರ ಕುರಿತಾದ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅಮಿತ್‌ ಶಾ ಕಿಡಿ ಕಾರಿದ್ದಾರೆ.
ಮೋದಿ ಅವರ ಕುರಿತಾದ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅಮಿತ್‌ ಶಾ ಕಿಡಿ ಕಾರಿದ್ದಾರೆ.

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂಧ ಕಿತ್ತೊಗೆಯುವುದರಿಂದ ನೋಡುವ ಮೊದಲು ನಾನು ಸಾಯುವುದಿಲ್ಲ ಎನ್ನುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ ಅವರ ವ್ಯಂಗಭರಿತ ಟೀಕೆಗೆ ಬಿಜೆಪಿ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಚುನಾವಣಾ ಭಾಷಣದಲ್ಲಿ ಅಸಹ್ಯಕರ ಮತ್ತು ಅವಮಾನಕರವಾಗಿ ತಮ್ಮನ್ನು, ತಮ್ಮ ನಾಯಕರನ್ನು ಟೀಕಿಸುವ ಮೂಲಕ ಅವಮಾನಿಸಿದ್ದಾರೆ. ಪ್ರಧಾನಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರವೇ ನಾನು ಸಾಯುತ್ತೇನೆ ಎಂದು ಹೇಳುವ ಮೂಲಕ ಅವರು ಅನಗತ್ಯವಾಗಿ ಪ್ರಧಾನಿ ಮೋದಿಯ ಅವರ ವೈಯಕ್ತಿಕ ಆರೋಗ್ಯ ವಿಷಯಗಳಿಗೆ ಎಳೆದು ತಂದಿದ್ದಾರೆ" ಎಂದು ಅಮಿತ್ ಶಾ ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯವರ ಬಗ್ಗೆ ನಿರಂತರವಾಗಿ ಯೋಚಿಸುತ್ತಾರೆ. ಕಾಂಗ್ರೆಸ್ ನವರಿಗೆ ಪ್ರಧಾನಿ ಮೋದಿಯವರ ಬಗ್ಗೆ ಎಷ್ಟು ದ್ವೇಷ ಮತ್ತು ಭಯವಿದೆ ಎಂಬುದನ್ನು ಈ ಹೇಳಿಕೆ ತೋರಿಸುತ್ತದೆ ಎಂದು ಅಮಿತ್ ಶಾ ಕಟಕಿಯಾಡಿದರು.

ಖರ್ಗೆ ಅವರ ಆರೋಗ್ಯದ ಬಗ್ಗೆ ಮೋದಿ ಜಿ ಪ್ರಾರ್ಥಿಸುತ್ತಾರೆ. ನಾನು ಪ್ರಾರ್ಥಿಸುತ್ತೇನೆ. ಅವರು ದೀರ್ಘ, ಆರೋಗ್ಯಕರ ಜೀವನವನ್ನು ನಡೆಸಲಿ ಎಂದು ನಾವೆಲ್ಲರೂ ಪ್ರಾರ್ಥಿಸುತ್ತೇವೆ. ಅವರು ಅನೇಕ ವರ್ಷಗಳ ಕಾಲ ಬದುಕಲಿ ಮತ್ತು 2047 ರ ವೇಳೆಗೆ ವಿಕಿಸತ ಭಾರತದ ಸೃಷ್ಟಿಯನ್ನು ನೋಡಲು ಅವರು ಬದುಕಲಿ ಶಾ ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಕಾಶ್ಮೀರದ ಚುನಾವಣಾ ಸಭೆಯ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡುವ ಕೊಂಚ ಬಳಲಿದಂತೆ ಕಂಡರು. ಅಲ್ಲಿಯೇ ಕುಳಿತ ಅವರು ಕೆಲ ಕ್ಷಣದ ನಂತರ ಭಾಷಣ ಮುಂದುವರಿಸಿದರು. ಪ್ರಧಾನಿ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ತೆಗೆದುಹಾಕುವವರೆಗೂ ನಾನು ಸಾಯುವುದಿಲ್ಲ ಎಂದು ಹೇಳಿದರು.

ನನಗೆ 83 ವರ್ಷ ವಯಸ್ಸು. ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿಯನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಖರ್ಗೆ ಅವರು ಖಡಕ್‌ ಆಗಿಯೇ ಹೇಳಿದ್ದರು.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.