Kannada News  /  Nation And-world  /  Protection Of Hindu Faith Ap Govt To Build Around 3,000 Temples To Protect Hindu Faith
ತಿರುಪತಿ ದೇವಸ್ಥಾನ (ಸಾಂಕೇತಿಕ ಚಿತ್ರ)
ತಿರುಪತಿ ದೇವಸ್ಥಾನ (ಸಾಂಕೇತಿಕ ಚಿತ್ರ) (HT_PRINT ((Nikhil B/Wikimedia Commons))

Protection of Hindu faith: ಆಂಧ್ರಪ್ರದೇಶದ ಪ್ರತಿ ಗ್ರಾಮದಲ್ಲೂ ದೇವಸ್ಥಾನ; ಖಚಿತ ಪಡಿಸಲು ಕ್ರಮ ಕೈಗೊಂಡ ಸರ್ಕಾರ

01 March 2023, 15:21 ISTHT Kannada Desk
01 March 2023, 15:21 IST

Protection of Hindu faith: ಲೋಕಸಭೆ ಚುನಾವಣೆ ಜತೆ ಜತೆಗೆ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದೆ ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌. ಹಿಂದುಗಳ ವಿಶ್ವಾಸ ಗೆಲ್ಲುವುದಕ್ಕೆ ಮುಖ್ಯಮಂತ್ರಿ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಮುಂದಾಗಿದ್ದಾರೆ.

ಆಂಧ್ರಪ್ರದೇಶದ ಪ್ರತಿ ಗ್ರಾಮದಲ್ಲೂ ದೇವಸ್ಥಾನ ಇರುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಸರ್ಕಾರ, ರಾಜ್ಯದಲ್ಲಿ ದೇವಾಲಯಗಳ ನಿರ್ಮಾಣವನ್ನು ದೊಡ್ಡ ರೀತಿಯಲ್ಲಿ ಕೈಗೆತ್ತಿಕೊಂಡಿರುವುದಾಗಿ ಹೇಳಿದೆ.

ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ನಿರ್ದೇಶನದ ಮೇರೆಗೆ, ಹಿಂದು ಧರ್ಮವನ್ನು ರಕ್ಷಿಸಲು ಮತ್ತು ಪ್ರಸ್ತುತಿ ಮಾಡಲು ಈ ಉಪಕ್ರಮವನ್ನು ಘೋಷಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಕೊಟ್ಟು ಸತ್ಯನಾರಾಯಣ ಹೇಳಿದರು.

ಹಿಂದು ನಂಬಿಕೆಯನ್ನು ಬೃಹತ್ ಪ್ರಮಾಣದಲ್ಲಿ ರಕ್ಷಿಸಲು ಮತ್ತು ಪ್ರಚಾರ ಮಾಡಲು, ದುರ್ಬಲ ವರ್ಗಗಳ ಪ್ರದೇಶಗಳಲ್ಲಿ ಹಿಂದು ದೇವಾಲಯಗಳ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ ಎಂದು ದತ್ತಿ ಸಚಿವರೂ ಆಗಿರುವ ಸತ್ಯನಾರಾಯಣ ಮಂಗಳವಾರ ತಿಳಿಸಿದರು.

ತಿರುಮಲ ತಿರುಪತಿ ದೇವಸ್ಥಾನಮ್ಸ್‌, ಶ್ರೀ ವಾಣಿ ಟ್ರಸ್ಟ್ ದೇವಾಲಯಗಳ ನಿರ್ಮಾಣಕ್ಕೆ ತಲಾ 10 ಲಕ್ಷ ರೂಪಾಯಿ ಮೀಸಲಿಡಲಾಗಿದೆ. ಇದಕ್ಕೆ ಹೊರತಾಗಿ 1,330 ದೇವಾಲಯಗಳ ನಿರ್ಮಾಣ ಶುರುಮಾಡಲಾಗಿದೆ. ದೇವಸ್ಥಾನಗಳ ನಿರ್ಮಾಣದ ಪಟ್ಟಿಗೆ 1,465 ದೇಗುಲಗಳನ್ನು ಸೇರಿಸಲಾಗಿದೆ. ಅದೇ ರೀತಿ ಕೆಲವು ಶಾಸಕರ ಮನವಿ ಮೇರೆಗೆ 200ಕ್ಕೂ ಹೆಚ್ಚು ದೇವಸ್ಥಾನಗಳನ್ನು ನಿರ್ಮಿಸಲಾಗುವುದು. ಉಳಿದ ದೇವಾಲಯಗಳ ನಿರ್ಮಾಣವನ್ನು ಇತರೆ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಮಾಡಲಾಗುವುದು ಎಂದು ಸಚಿವ ಸತ್ಯನಾರಾಯಣ ವಿವರಿಸಿದರು.

ದತ್ತಿ ಇಲಾಖೆಯ ಅಧೀನದಲ್ಲಿ 978 ದೇವಸ್ಥಾನಗಳ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಪ್ರತಿ 25 ದೇವಸ್ಥಾನಗಳ ಕಾಮಗಾರಿಯನ್ನು ಒಬ್ಬ ಸಹಾಯಕ ಎಂಜಿನಿಯರ್‌ಗೆ ವಹಿಸಲಾಗಿದೆ. ಎಂದು ಸಚಿವರು ತಿಳಿಸಿದರು.

ಕೆಲವು ದೇವಾಲಯಗಳನ್ನು ಪುನರುಜ್ಜೀವನಗೊಳಿಸಲು ಮತ್ತು ದೇವಾಲಯಗಳಲ್ಲಿ ಧಾರ್ಮಿಕ ಕ್ರಿಯೆಗಳನ್ನು ನಡೆಸಲು ಸಿಜಿಎಫ್ ನಿಧಿಯಲ್ಲಿದ್ದ 270 ಕೋಟಿ ರೂಪಾಯಿ ಪೈಕಿ 238 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಅದೇ ರೀತಿ 28 ಕೋಟಿ ರೂಪಾಯಿಯಲ್ಲಿ, ಪ್ರತಿ ದೇವಸ್ಥಾನಕ್ಕೆ ಧಾರ್ಮಿಕ ಕ್ರಿಯೆಗಳಿಗೆ (ದೂಪ ದೀಪ ನೈವೇದ್ಯಂ) 5,000 ರೂಪಾಯಿಯಂತೆ 15 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ. ದೂಪ ದೀಪ ಯೋಜನೆಯಡಿ, 2019 ರ ವೇಳೆಗೆ ಕೇವಲ 1,561 ದೇವಾಲಯಗಳನ್ನು ನೋಂದಾಯಿಸಲಾಗಿತ್ತು. ಅದು ಈಗ 5,000 ಕ್ಕೆ ವಿಸ್ತರಣೆ ಆಗಿದೆ ಎಂದು ಸಚಿವ ಸತ್ಯನಾರಾಯಣ ಹೇಳಿದರು.

ಗಮನಿಸಬಹುದಾದ ಸುದ್ದಿಗಳು

ಕೇಜ್ರಿವಾಲ್‌ ರಾಜ್ಯ ಪ್ರವಾಸಕ್ಕೆ ಮುನ್ನ ಬಿಜೆಪಿ ಸೇರಿದ ಆಪ್‌ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಮತ್ತು ಸಂಗಡಿಗರು

Bhaskar Rao joined BJP: ಆಮ್‌ ಆದ್ಮಿ ಪಕ್ಷದ ಕರ್ನಾಟಕ ಘಟಕದ ಉಪಾಧ್ಯಕ್ಷ, ನಿವೃತ್ತ ಪೊಲೀಸ್‌ ಅಧಿಕಾರಿ ಭಾಸ್ಕರ್ ರಾವ್‌‌ ಇಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸೇರಿದರು. ಬೆಂಗಳೂರಿನಲ್ಲಿ ಪಕ್ಷದ ರಾಜ್ಯ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಶಂಕರಪ್ಪ ಅವರ ಉಪಸ್ಥಿತಿಯಲ್ಲಿ ಪಕ್ಷ ಸೇರ್ಪಡೆ ನಡೆಯಿತು. ಪೂರ್ಣ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

ತಮಿಳುನಾಡಲ್ಲಿ ಇನ್ನು ಆನೆ ಸಾಕುವಂತಿಲ್ಲ; ದೇಗುಲಗಳಲ್ಲಿರುವ ಮತ್ತು ವ್ಯಕ್ತಿಗಳು ಸಾಕುತ್ತಿರುವ ಆನೆಗಳ ತಪಾಸಣೆಗೆ ಕೋರ್ಟ್‌ ಸೂಚನೆ

Court News: ಇನ್ನು ಮುಂದೆ ಖಾಸಗಿ ವ್ಯಕ್ತಿಗಳು ಅಥವಾ ಧಾರ್ಮಿಕ ಸಂಸ್ಥೆಗಳು ಆನೆಗಳನ್ನು ಸ್ವಾಧೀನಪಡಿಸಿ ಕೊಳ್ಳಬಾರದು ಎಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಸರ್ಕಾರದ ಕಾರ್ಯದರ್ಶಿ, ಪರಿಸರ ಮತ್ತು ಅರಣ್ಯ ಇಲಾಖೆಗೆ ನಿರ್ದೇಶನ ನೀಡಿದೆ. ತಮಿಳುನಾಡಿನಲ್ಲಿ ಇನ್ನು ಮುಂದೆ ಖಾಸಗಿ ವ್ಯಕ್ತಿಗಳು ಅಥವಾ ಧಾರ್ಮಿಕ ಸಂಸ್ಥೆಗಳು ಆನೆಗಳನ್ನು ಸ್ವಾಧೀನಪಡಿಸಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಸರ್ಕಾರದ ಕಾರ್ಯದರ್ಶಿ, ಪರಿಸರ ಮತ್ತು ಅರಣ್ಯ ಇಲಾಖೆಗೆ ಸೂಚಿಸಿದೆ. ವಿವರ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ