ಕನ್ನಡ ಸುದ್ದಿ  /  Nation And-world  /  Rahul Gandhi's Disqualification: Congress To Observe "Black Day" In Wayanad

Rahul Gandhi: ರಾಹುಲ್‌ ಗಾಂಧಿ ಅನರ್ಹತೆ, ವಯನಾಡ್‌ನಲ್ಲಿ ಕಾಂಗ್ರೆಸ್‌ನಿಂದ "ಕರಾಳ ದಿನ" ಆಚರಿಸಿ ಪ್ರತಿಭಟನೆ

ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಸಂಸದರಾಗಿದ್ದರು. ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ವಿರುದ್ಧದ ಪ್ರತಿಭಟನೆಯಾಗಿ ವಯನಾಡಿನಲ್ಲಿ ಇಂದು ಕರಾಳ ದಿನಕ್ಕೆ ಕರೆ ನೀಡಿದೆ.

ರಾಹುಲ್‌ ಗಾಂಧಿ (ಸಂಗ್ರಹ ಚಿತ್ರ)
ರಾಹುಲ್‌ ಗಾಂಧಿ (ಸಂಗ್ರಹ ಚಿತ್ರ) (PTI)

ವಯನಾಡು: ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ವಿರುದ್ಧದ ಪ್ರತಿಭಟನೆಯಾಗಿ ವಯನಾಡಿನಲ್ಲಿ ಇಂದು ಕರಾಳ ದಿನ ಆಚರಿಸುವುದಾಗಿ ವಯನಾಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಎನ್‌ಡಿ ಅಪ್ಪಚ್ಚನ್ ಹೇಳಿದ್ದಾರೆ. ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಸಂಸದರಾಗಿದ್ದರು.

ರಾಹುಲ್ ಗಾಂಧಿ ವಿರುದ್ಧದ ಕ್ರಮವು "ತರಾತುರಿ ಮತ್ತು ರಾಜಕೀಯ ಪ್ರೇರಿತ" ಎಂದು ಇದಕ್ಕೂ ಮುನ್ನ ಕೇರಳದ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಹೇಳಿದ್ದರು. "ಲೋಕಸಭೆಯ ಸೆಕ್ರೆಟರಿಯೇಟ್ ಕ್ರಮವನ್ನು ಕಾಂಗ್ರೆಸ್ ಪಕ್ಷವು ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ಎದುರಿಸಲಿದೆ" ಎಂದು ಅವರು ಹೇಳಿದ್ದಾರೆ.

"ರಾಹುಲ್ ಗಾಂಧಿಯನ್ನು ಲೋಕಸಭೆಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶವು ತರಾತುರಿ ಮತ್ತು ರಾಜಕೀಯ ಪ್ರೇರಿತವಾಗಿದೆ. ಲೋಕಸಭೆಯ ಸೆಕ್ರೆಟರಿಯೇಟ್ ಕ್ರಮವನ್ನು ಕಾಂಗ್ರೆಸ್ ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ಎದುರಿಸಲಿದೆ" ಎಂದು ಲೋಪಿ ಹೇಳಿದೆ.

"ಸೂರತ್ ನ್ಯಾಯಾಲಯದ ತೀರ್ಪು ಅಂತಿಮವಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವ ಮತ್ತು ಕಾನೂನು ಸುವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿದೆ. ದೇಶದಲ್ಲಿ ಸುಪ್ರೀಂ ಕೋರ್ಟ್‌ವರೆಗೆ ಕಾನೂನು ವ್ಯವಸ್ಥೆ ಇದೆ. ರಾಹುಲ್ ಗಾಂಧಿ ಕಾನೂನು ಮಾರ್ಗದ ಮೂಲಕ ಮರಳಿ ಬರಲಿದ್ದಾರೆ. ರಾಹುಲ್ ಅಥವಾ ಕಾಂಗ್ರೆಸ್ ಈ ವಿಷಯದಲ್ಲಿ ಮೌನವಾಗಿರಲು ಸಾಧ್ಯವಿಲ್ಲ. ನಾವು ಇನ್ನೂ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳಿಗಾಗಿ ಧ್ವನಿ ಎತ್ತುತ್ತೇವೆ" ಎಂದು ಕೇರಳದ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಹೇಳಿದ್ದಾರೆ.

ಮೋದಿ ಉಪ ನಾಮ‌ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವದಿಂದ ನಿನ್ನೆ ಅನರ್ಹಗೊಂಡಿದ್ದರು. ಮೊನ್ನೆಯಷ್ಟೇ ಸೂರತ್ ಜಿಲ್ಲಾ ನ್ಯಾಯಾಲಯ ರಾಹುಲ್ ಅವರನ್ನು ಅಪರಾಧಿ ಎಂದು ತೀರ್ಪು ನೀಡಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ, ಲೋಕಸಭಾ ಸಚಿವಾಲಯ ರಾಹುಲ್ ಅವರನ್ಬು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ನಿನ್ನೆ ಅಧಿಕೃತ ಆದೇಶ ಹೊರಡಿಸಲಾಗಿದೆ.

ಎರಡು ವರ್ಷ ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿಯವರನ್ನು 1951ರ ಜನಪ್ರತಿನಿಧಿ ಕಾಯ್ದೆ ಅನ್ವಯ ಅನರ್ಹಗೊಂಳಿಸಲಾಗಿದೆ ಎಂದು ಲೋಕಸಭಾ ಸಚಿವಾಲಯ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ. ರಾಹುಲ್ ಗಾಂಧಿಯವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಇದಕ್ಕೆ ಪ್ರತಿಭಟನೆಯಾಗಿ ಇಂದು ವಯನಾಡಿನಲ್ಲಿ ಕಾಂಗ್ರೆಸ್‌ "ಬ್ಲ್ಯಾಕ್‌ ಡೇ" ಘೋಷಿಸಿದೆ.

ಲೋಕಸಭೆಯ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಮತ್ತು ಕೆಲವು ತಿಂಗಳ ಹಿಂದೆ ಫೈಜಲ್ ಅವರನ್ನು ಅನರ್ಹಗೊಳಿಸಿರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ. ಅಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮೊಟಕುಗೊಳಿಸಲಾಗುತ್ತಿದೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.́

ಎಲ್ಲಾ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ ಎಂದು 2019ರ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಹೇಳಿದ ರಾಹುಲ್‌ ಗಾಂಧಿ ಇದೀಗ ಲೋಕಸಭೆಯಿಂದ ಅಮಾನತುಗೊಂಡಿದ್ದಾರೆ. ಇದೀಗ ಬಿಜೆಪಿ ನಾಯಕಿ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಅವರ ಹಳೆಯ ಟ್ವೀಟ್ ವೈರಲ್ ಆಗಿದೆ. "ಮೋದಿ" ಪದವನ್ನು "ಭ್ರಷ್ಟಾಚಾರ" ಎಂದು ಮರು ವ್ಯಾಖ್ಯಾನಿಸಬೇಕು ಎಂದು ಖುಷ್ಬು ಅವರು 2018ರಲ್ಲಿ ಟ್ವೀಟ್‌ ಮಾಡಿದ್ದರು. ಈ ಕುರಿತ ವರದಿ ಇಲ್ಲಿದೆ ಓದಿ.

IPL_Entry_Point