ಕನ್ನಡ ಸುದ್ದಿ  /  Nation And-world  /  Rajiv Gandhi Assassination Case: Supreme Court Orders Release Of Nalini Sriharan, Rp Ravichandran

Rajiv Gandhi assassination case: ನಳಿನಿ ಶ್ರೀಹರನ್‌, ಆರ್‌ಪಿ ರವಿಚಂದ್ರನ್‌ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಆದೇಶ

Rajiv Gandhi assassination case: ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ, ಮೇ ತಿಂಗಳಲ್ಲಿ ಬಿಡುಗಡೆಯಾದ ಮತ್ತೊಬ್ಬ ಅಪರಾಧಿ ಎಜಿ ಪೆರಾರಿವಾಲನ್ ಪ್ರಕರಣವನ್ನು ಪರಿಗಣನೆಗೆ ತೆಗೆದುಕೊಂಡು ನಳಿನಿ ಶ್ರೀಹರನ್‌, ಆರ್‌ಪಿ ರವಿಚಂದ್ರನ್‌ ಬಿಡುಗಡೆಗೆ ಆದೇಶವನ್ನು ನೀಡಿದೆ.

ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌

ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಇಬ್ಬರು ಅಪರಾಧಿಗಳಾದ ನಳಿನಿ ಶ್ರೀಹರನ್ ಮತ್ತು ಆರ್ ಪಿ ರವಿಚಂದ್ರನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠ, ಮೇ ತಿಂಗಳಲ್ಲಿ ಬಿಡುಗಡೆಯಾದ ಮತ್ತೊಬ್ಬ ಅಪರಾಧಿ ಎಜಿ ಪೆರಾರಿವಾಲನ್ ಅವರ ಪ್ರಕರಣವನ್ನು ಪರಿಗಣನೆಗೆ ತೆಗೆದುಕೊಂಡು ಈ ಆದೇಶ ಪ್ರಕಟಿಸಿದೆ.

ಪ್ರಸ್ತುತ ಪೆರೋಲ್ ಮೇಲೆ ಹೊರಗಿರುವ ನಳಿನಿ, ಮದ್ರಾಸ್ ಹೈಕೋರ್ಟ್ ತನ್ನ ಮನವಿಯನ್ನು ತಿರಸ್ಕರಿಸಿದ ನಂತರ ಜೈಲಿನಿಂದ ಬೇಗನೆ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮೇ 18 ರಂದು ಸುಪ್ರೀಂ ಕೋರ್ಟ್ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ವಿಶೇಷ ಅಧಿಕಾರವನ್ನು ಚಲಾಯಿಸುವ ಮೂಲಕ 30 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ ನಂತರ ನಳಿನಿ ಕೂಡ ಅರ್ಜಿಯನ್ನು ಸಲ್ಲಿಸಿದ್ದರು. ಸಂಪೂರ್ಣ ನ್ಯಾಯವನ್ನು ಪರಿಪಾಲಿಸಲು ಪೆರಾರಿವಾಲನ್ ಪ್ರಕರಣದ ತೀರ್ಪು ಉಲ್ಲೇಖಿಸಿದ ನಳಿನಿ ಪರ ವಕೀಲರು, ಬಿಡುಗಡೆಗೆ ಮನವಿ ಮಾಡಿದ್ದರು.

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ 1991ರ ಮೇ 21 ರಂದು ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಲ್‌ಟಿಟಿಇ ಆತ್ಮಹತ್ಯಾ ಬಾಂಬರ್‌ನಿಂದ ಕೊಲ್ಲಲ್ಪಟ್ಟರು. ಈ ಪ್ರಕರಣದಲ್ಲಿ ನಳಿನಿ, ಪೆರಾರಿವಾಲನ್‌, ಆರ್‌ಪಿ ರವಿಚಂದ್ರನ್‌ ಮತ್ತು ಇತರರು ಬಂಧಿಸಲ್ಪಟ್ಟಿದ್ದರು. ಅವರ ಮೇಲಿನ ಆರೋಪ ಸಾಬೀತಾಗಿ ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟಿತ್ತು.

ಪ್ರಕರಣದಲ್ಲಿ ಏಳು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 1999 ರಲ್ಲಿ, ಸುಪ್ರೀಂ ಕೋರ್ಟ್ ಅವರಲ್ಲಿ ನಾಲ್ವರಿಗೆ ಮರಣದಂಡನೆ ಮತ್ತು ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು. 2000 ರಲ್ಲಿ, ನಳಿನಿಯ ಮರಣದಂಡನೆಯನ್ನು ಜೀವಾವಧಿಗೆ ಪರಿವರ್ತಿಸಲಾಯಿತು. 2014 ರಲ್ಲಿ, ಸುಪ್ರೀಂ ಕೋರ್ಟ್ ಪೆರಾರಿವಾಲನ್ ಸೇರಿದಂತೆ ಇತರ ಮೂರು ಮರಣದಂಡನೆಯನ್ನು ಜೀವಾವಧಿಗೆ ಇಳಿಸಿತ್ತು.

IPL_Entry_Point