ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Rape Case Against Congress Mla: ಮಾಜಿ ಸಚಿವ, ಕಾಂಗ್ರೆಸ್ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

Rape Case Against Congress MLA: ಮಾಜಿ ಸಚಿವ, ಕಾಂಗ್ರೆಸ್ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

38 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಉಮಂಗ್ ಸಿಂಘಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಉಮಂಗ್ ಸಿಂಘಾರ್
ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಉಮಂಗ್ ಸಿಂಘಾರ್

ಧಾರ್ (ಮಧ್ಯಪ್ರದೇಶ): 38 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಉಮಂಗ್ ಸಿಂಘಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಉಮಂಗ್ ಸಿಂಘಾರ್ ಅವರ ಪತ್ನಿಯಂತೆ ನಾನು ಜೀವನ ನಡೆಸುತ್ತಿದ್ದೇನೆ, ನನ್ನ ಮೇಲೆ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ಧಾರ್ ನಗರದ ನೌಗಾಂವ್ ಪೊಲೀಸ್ ಠಾಣೆಯಲ್ಲಿ ಭಾನುವಾರ ಸಂಜೆ ಪ್ರಕರಣ ದಾಖಲಾಗಿದೆ ಎಂದು ಧಾರ್‌ನ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆದಿತ್ಯ ಪ್ರತಾಪ್ ಸಿಂಗ್​​ ತಿಳಿಸಿದ್ದಾರೆ

ಗಂಧವಾನಿ ಕ್ಷೇತ್ರವನ್ನು ಪ್ರತಿನಿಧಿಸುವ ಮತ್ತು ಕಾಂಗ್ರೆಸ್‌ನ ರಾಷ್ಟ್ರೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಉಮಂಗ್ ಸಿಂಘಾರ್ ಈ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಿಭಾಗದ ಅಧ್ಯಕ್ಷ ಕೆ ಕೆ ಮಿಶ್ರಾ ಪಿಟಿಐಗೆ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ ಆದರೆ ಮೇಲ್ನೋಟಕ್ಕೆ ಇದು "ರಾಜಕೀಯ ಪ್ರೇರಿತ" ಪ್ರಕರಣವಾಗಿದೆ ಎಂದು ತೋರುತ್ತದೆ ಎಂದು ಹೇಳಿದ್ದಾರೆ.

ಆರೋಪಿ ವಿರುದ್ಧ ಮಹಿಳೆ ದೈಹಿಕ ಹಾಗೂ ಮಾನಸಿಕ ಚಿತ್ರಹಿಂಸೆ, ಅತ್ಯಾಚಾರ, ನಿಂದನೆ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ ಎಂದು ಎಸ್ಪಿ ಸಿಂಗ್ ಹೇಳಿದ್ದಾರೆ. ಆಕೆಯ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ 294, 323, 376 (2), 377, 498 (ಎ), 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಶಾಸಕ ಉಮಂಗ್ ಸಿಂಘಾರ್​ಗೆ ಇತರ ಪತ್ನಿಯರೂ ಇದ್ದಾರೆ ಎಂದು ಬಿಜೆಪಿ ನಾಯಕ, ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಶಾಸಕ ಉಮಂಗ್ ಸಿಂಘಾರ್ ವಿರುದ್ಧವೂ ಪ್ರಕರಣವೊಂದು ದಾಖಲಾಗಿತ್ತು. ತಮ್ಮ ಮನೆಯಲ್ಲಿ ಹಲವಾರು ವರ್ಷಗಳಿಂದ ಅಡುಗೆ ಕೆಲಸಕ್ಕಿದ್ದ ಮಹಿಳೆ ಮೇಲೆ ಸಿಂಘಾರ್ ಪತ್ನಿ ಹಲ್ಲೆ ನಡೆಸಿದ್ದರು ಹಾಗೂ ಸಿಂಘಾರ್​ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಪ್ರಕರಣ ದಾಖಲಾಗಿತ್ತು.

IPL_Entry_Point