Sanjay Malhotra: ಆರ್‌ಬಿಐನ 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ, ಶಕ್ತಿಕಾಂತ್‌ ದಾಸ್‌ ಅಧಿಕಾರಾವಧಿ ಅಂತ್ಯ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Sanjay Malhotra: ಆರ್‌ಬಿಐನ 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ, ಶಕ್ತಿಕಾಂತ್‌ ದಾಸ್‌ ಅಧಿಕಾರಾವಧಿ ಅಂತ್ಯ

Sanjay Malhotra: ಆರ್‌ಬಿಐನ 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ, ಶಕ್ತಿಕಾಂತ್‌ ದಾಸ್‌ ಅಧಿಕಾರಾವಧಿ ಅಂತ್ಯ

Sanjay Malhotra: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ)ನ 26ನೇ ಗವರ್ನರ್ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಮಂಗಳವಾರ ಹಾಲಿ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅಧಿಕಾರಾವಧಿ ಅಂತ್ಯವಾಗಲಿದೆ. ಡಿಸೆಂಬರ್‌ 11ರಂದು ಆರ್‌ಬಿಐನ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅಧಿಕಾರ ಸ್ವೀಕರಿಸಲಿದ್ದಾರೆ.

Sanjay Malhotra: ಆರ್‌ಬಿಐನ 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ (ANI FILE)
Sanjay Malhotra: ಆರ್‌ಬಿಐನ 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ (ANI FILE) (HT_PRINT)

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಗವರ್ನರ್ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ. ಇದೇ ಬುಧವಾರದಿಂದ ಅನ್ವಯವಾಗುವಂತೆ ಮೂರು ವರ್ಷಗಳ ಕಾಲ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ರಾಜಸ್ಥಾನ ಕೇಡರ್‌ನ 1990-ಬ್ಯಾಚ್‌ನ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿಯಾಗಿರುವ ಮಲ್ಹೋತ್ರಾ ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿದ್ದಾರೆ. ಇದರೊಂದಿಗೆ ಅಮೆರಿಕದ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಕಂದಾಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಜಯ್ ಮಲ್ಹೋತ್ರಾ ಅವರು ತನ್ನ 33 ವರ್ಷಗಳ ವೃತ್ತಿಜೀವನದಲ್ಲಿ, ಶ್ರೀ ಮಲ್ಹೋತ್ರಾ ಅವರು ವಿದ್ಯುತ್, ಹಣಕಾಸು ಮತ್ತು ತೆರಿಗೆ, ಮಾಹಿತಿ ತಂತ್ರಜ್ಞಾನ, ಗಣಿಗಳು ಇತ್ಯಾದಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಪ್ರತ್ಯಕ್ಷ ಮತ್ತು ಪರೋಕ್ಷ ತೆರಿಗೆಗಳಿಗೆ ತೆರಿಗೆ ನೀತಿ ರೂಪಿಸುವಲ್ಲಿ ಸಂಜಯ್‌ ಮಲ್ಹೋತ್ರಾ ಪ್ರಮುಖ ಪಾತ್ರವಹಿಸಿದ್ದಾರೆ.

ಇಲ್ಲಿಯವರೆಗೆ ಶಕ್ತಿಕಾಂತ ದಾಸ್ ಅವರು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳವಾರ ಅಂದರೆ, ಡಿಸೆಂಬರ್‌ 10ರಂದು ಅವರ ಅಧಿಕಾರಾವಧಿ ಮುಕ್ತಾಯಗೊಳ್ಳಲಿದೆ. ದಾಸ್‌ ಅವರು ಊರ್ಜಿತ್‌ ಪಟೇಲ್‌ ಹಠಾತ್‌ ನಿರ್ಗಮನದ ಬಳಿಕ ಡಿಸೆಂಬರ್‌ 12, 2018ರಂದು ಆರ್‌ಬಿಐನ 25ನೇ ಗವರ್ನರ್‌ ಆಗಿ ನೇಮಕಗೊಂಡಿದ್ದರು. ಈಗ ಆರ್‌ಬಿಐನ 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕಗೊಂಡಿದ್ದಾರೆ.

ಸರಕಾರಿ ಸ್ವಾಮ್ಯದ ಆರ್‌ಇಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕರಾಗಿ, ಕಂದಾಯ ಕಾರ್ಯದರ್ಶಿಯಾಗಿ, ಜಿಎಸ್‌ಟಿ ಕೌನ್ಸಿಲ್‌ನ ಪದನಿಮಿತ್ಯ ಕಾರ್ಯದರ್‌ಶಿಯಾಗಿ ಕೆಲಸ ಮಾಡಿದ್ದರು. ಬಜೆಟ್‌ ವಿಚಾರದಲ್ಲಿ ತೆರಿಗೆ ಸಂಬಂಧಪಟ್ಟಂತೆ ನೀತಿಗಳನ್ನು ಪರಿಚಯಿಸುವಲ್ಲಿ ಇವರ ಪಾತ್ರ ಪ್ರಮ ಉಖವಾಗಿದೆ. ಇತ್ತೀಚೆಗೆ ತೆರಿಗೆ ಸಂಗ್ರಹ ಭಾರಿ ಏರಿಕೆ ಕಾಣುವಲ್ಲಿಯೂ ಇವರ ಪಾತ್ರ ಮಹತ್ವದ್ದಾಗಿದೆ.

Whats_app_banner

ವಿಭಾಗ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.