ಕನ್ನಡ ಸುದ್ದಿ  /  Nation And-world  /  Sc To Hear Joint Plea Of 14 Political Parties Alleging Arbitrary Use Of Ed, Cbi Against Opposition Leaders

Court News: ಕೇಂದ್ರ ಸರಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ, 14 ರಾಜಕೀಯ ಪಕ್ಷಗಳು ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು

14 ರಾಜಕೀಯ ಪಕ್ಷಗಳು ಒಟ್ಟಾಗಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಡೆಸಲು ಸುಪ್ರೀಂಕೋರ್ಟ್‌ ಶುಕ್ರವಾರ ಸಮ್ಮತಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಏಪ್ರಿಲ್ 5 ರಂದು ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಒಪ್ಪಿದೆ.

ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌ (PTI)

ನವದೆಹಲಿ: ವಿರೋಧ ಪಕ್ಷದ ನಾಯಕರನ್ನು ಬಂಧಿಸಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ)ವನ್ನು ಕೇಂದ್ರ ಸರಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು 14 ರಾಜಕೀಯ ಪಕ್ಷಗಳು ಒಟ್ಟಾಗಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಡೆಸಲು ಸುಪ್ರೀಂಕೋರ್ಟ್‌ ಶುಕ್ರವಾರ ಸಮ್ಮತಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಏಪ್ರಿಲ್ 5 ರಂದು ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಒಪ್ಪಿದೆ.

ತನಿಖಾ ಸಂಸ್ಥೆಗಳಾದ ಇಡಿ ಮತ್ತು ಸಿಬಿಐ ಅನ್ನು ಕೇಂದ್ರ ಸರಕಾರವು ತನಗೆ ಬೇಕಾದ್ದಂತೆ ಬಳಸುತ್ತಿದೆ ಎಂದು 14 ರಾಜಕೀಯ ಪಕ್ಷಗಳು ಸಲ್ಲಿಸಿರುವ ಮನವಿಯನ್ನು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪ್ರಸ್ತಾಪಿಸಿದ್ದಾರೆ. ಹಿರಿಯ ವಕೀಲ ಸಿಂಘ್ವಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ರೀತಿ ದಾಳಿ ನಡೆಸಿದಾಗ ಬಂಧನ ಪೂರ್ವ ಮತ್ತು ಬಂಧನದ ನಂತರ ಮತ್ತು ಅವುಗಳ ಜಾರಿಗಾಗಿ ಮಾರ್ಗಸೂಚಿಗಳನ್ನು ಸುಪ್ರೀಂಕೋರ್ಟ್‌ ನೀಡಬೇಕು ಎಂದಿದ್ದಾರೆ.

"ಇಂದು ಇಡಿ ಮತ್ತು ಸಿಬಿಐ ಅನ್ನು ವಿರೋಧ ಪಕ್ಷಗಳ ನಾಯಕರ ವಿರುದ್ಧ ಬಳಸಲಾಗುತ್ತಿದೆ ಮತ್ತು ಶೇಕಡಾ 95 ರಷ್ಟು ಪ್ರಕರಣಗಳು ವಿರೋಧ ಪಕ್ಷದ ನಾಯಕರದ್ದಾಗಿವೆ. ನಾವು ಬಂಧನ ಪೂರ್ವ ಮಾರ್ಗಸೂಚಿಗಳನ್ನು ಮತ್ತು ಬಂಧನದ ನಂತರದ ಮಾರ್ಗಸೂಚಿಗಳನ್ನು ಕೇಳುತ್ತಿದ್ದೇವೆ" ಎಂದು ಅವರು ಹೇಳಿದ್ದಾರೆ.

ಈ ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳುತ್ತಿವೆ ಎಂದು ಸಿಂಘ್ವಿ ಹೇಳಿದರು. ಅಸ್ತಿತ್ವದಲ್ಲಿರುವ ತನಿಖೆಗಳ ಮೇಲೆ ಪರಿಣಾಮ ಬೀರಲು ಅವರು ಬಯಸುವುದಿಲ್ಲ ಎಂದೂ ಈ ಸಂದರ್ಭದಲ್ಲಿ ಅವರು ಹೇಳಿದ್ದಾರೆ.

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ರಾಷ್ಟ್ರೀಯ ಜನತಾ ದಳ, ಭಾರತ್ ರಾಷ್ಟ್ರ ಸಮಿತಿ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ನ್ಯಾಷನಲ್ ಕಾನ್ಫರೆನ್ಸ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ), ಶಿವಸೇನಾ ಉದ್ಧವ್ ಶಿಬಿರ, ಜಾರ್ಖಂಡ್ ಮುಕ್ತಿ ಸೇರಿದಂತೆ ವಿವಿಧ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿವೆ. ಮೋರ್ಚಾ (ಜೆಎಂಎಂ), ಜನತಾ ದಳ (ಯುನೈಟೆಡ್), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಸೇರಿದಂತೆ ಒಟ್ಟು ಹದಿನಾಲ್ಕು ಪಕ್ಷಗಳು ಈ ಅರ್ಜಿಗೆ ಸಹಿ ಹಾಕಿವೆ.

ಈ ಹಿಂದೆಯೂ ಹಲವು ಬಾರಿ ಪ್ರತಿಪಕ್ಷಗಳ ನಾಯಕರ ಮನೆ, ಕಚೇರಿ ಮೇಲೆ ದಾಳಿ ನಡೆದಾಗ ಪ್ರತಿಪಕ್ಷಗಳು ಬಿಜೆಪಿಯು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸುತ್ತಿತ್ತು. ಈ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿಯರಿಗೆ ವಿವಿಧ ಒಂಬತ್ತು ಪಕ್ಷಗಳ ನಾಯಕರು ಪತ್ರ ಬರೆದಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿಕಾರ ಹೇಳಿಕೆಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ ಈ ಬೆಳವಣಿಗೆಯಾಗಿದೆ.

IPL_Entry_Point