South India Rain: ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಮಹಾರಾಷ್ಟ್ರದಲ್ಲಿ ಇಂದು, ನಾಳೆ ಭಾರಿ ಮಳೆಯ ಮುನ್ಸೂಚನೆ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  South India Rain: ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಮಹಾರಾಷ್ಟ್ರದಲ್ಲಿ ಇಂದು, ನಾಳೆ ಭಾರಿ ಮಳೆಯ ಮುನ್ಸೂಚನೆ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

South India Rain: ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಮಹಾರಾಷ್ಟ್ರದಲ್ಲಿ ಇಂದು, ನಾಳೆ ಭಾರಿ ಮಳೆಯ ಮುನ್ಸೂಚನೆ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಇಂದು ಮತ್ತು ನಾಳೆ ದಕ್ಷಿಣ ಭಾರತದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಭಾರತದಲ್ಲಿ ಪ್ರಮುಖವಾಗಿ ಮಹಾರಾಷ್ಟ್ರ, ತೆಲಂಗಾಣ, ಕೇರಳದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಭಾರತದಲ್ಲಿ ಪ್ರಮುಖವಾಗಿ ಮಹಾರಾಷ್ಟ್ರ, ತೆಲಂಗಾಣ, ಕೇರಳದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಬೆಂಗಳೂರು: ದಕ್ಷಿಣ ಭಾರತದಲ್ಲಿ (South India Rain) ನೈರುತ್ಯ ಮುಂಗಾರು (Southwest Monsoon) ಚುರುಕಾಗಿದ್ದು, ನೆರೆಯ ತೆಲಂಗಾಣ (Telangana), ಆಂಧ್ರಪ್ರದೇಶ (Andhra Pradesh), ಮಹಾರಾಷ್ಟ್ರ (Maharashtra), ಕೇರಳದಲ್ಲಿ (Kerala) ಇಂದು (ಜುಲೈ 27, ಗುರುವಾರ) ಮತ್ತು ನಾಳೆ (ಜುಲೈ 28, ಶುಕ್ರವಾರ) ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತೆಲಂಗಾಣದ ಕೆಲವು ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿಜಾಮಾಬಾದ್, ವರಂಗಲ್, ಮೇದಕ್,ನಲ್ಲಗೋಂಡ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹಲವೆಡೆ ಮಳೆಯ ಮುಂಗಾರು ಕೊರತೆಯ ನಡುವೆ ಮುಲುಗು, ಕೊತಗುಡೆಂ, ಖಮ್ಮಂ, ಕರೀಂನಗರ, ಸೂರ್ಯಪೇಟ್ ಹಾಗೂ ವನಪರ್ತಿ ಜಿಲ್ಲೆಗಳಲ್ಲಿ ನಿನ್ನೆ (ಜುಲೈ 26, ಬುಧವಾರ) ಅಧಿಕ ಮಳೆಯಾಗಿದೆ. ಇಡೀ ರಾಜ್ಯದ ಪೈಕಿ ವೆಂಕಟಾಪುರಂ ಅತಿ ಹೆಚ್ಚು 19 ಸೆಂಟಿ ಮೀಟರ್ ಮಳೆಯಾಗಿದೆ. ಸೂರ್ಯಪೇಟ್ ಜಿಲ್ಲೆಯ ಕೊಡದಲ್ಲಿ 11, ಚಿಲ್ಕೂರ್ 9, ವನಪರ್ತಿಯ ಪೆಬ್ಬೈರ್

ಮುನ್ಸೂಚನೆಯಂತೆ ಹಲವೆಡೆ ಭಾರೀ ಮಳೆಯಾಗದಿದ್ದರೂ, ನೈರುತ್ಯ ಮುಂಗಾರು ತೆಲಂಗಾಣದಲ್ಲಿ ಸಕ್ರಿಯವಾಗಿದೆ ಮತ್ತು ತೆಲಂಗಾಣದ ಮುಲುಗು, ಕೊತಗುಡೆಂ, ಖಮ್ಮಂ, ಕರೀಂನಗರ, ಸೂರ್ಯಪೇಟ್ ಮತ್ತು ವನಪರ್ತಿ ಜಿಲ್ಲೆಗಳಲ್ಲಿ ಬುಧವಾರ ಅತಿ ಹೆಚ್ಚು ಮಳೆಯಾಗಿದೆ.

ಆಂಧ್ರಪ್ರದೇಶದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಹಳದಿ ಎಚ್ಚರಿಕೆ ನೀಡಲಾಗಿದೆ. ಜನರು ಎಚ್ಚರಿಕೆಯಿಂದ ಇರಬೇಕೆಂದು ವಿಪತ್ತು ನಿರ್ವಹಣಾ ಸಂಸ್ಥೆ ಮಾಹಿತಿ ನೀಡಿದೆ.

ರಾಜಧಾನಿ ಮುಂಬೈ ಸೇರಿದಂತೆ ಮಹಾರಾಷ್ಟ್ರ ಮೂರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯ ಮುನ್ಸೂಚನೆ. ಹೀಗಾಗಿ ಇಲ್ಲೂ ಕೂಡ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಐಎಂಡಿ (IMD) ಎಚ್ಚರಿಕೆ ನೀಡಿದೆ. ಮುಂಬೈ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಗೂ ರಾಯಗಢದಲ್ಲಿ ಜುಲೈ 27 ರಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ

ಕೇರಳದಲ್ಲಿ ಮುಂದಿನ 48 ಗಂಟೆಗಳಲ್ಲಿ ಕೆಲವು ಪ್ರತ್ಯೇಕ ಸ್ಥಳಗಳಲ್ಲಿ 7 ರಿಂದ 11 ಸೆಂಟಿ ಮೀಟರ್ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪರಿಣಾಮವಾಗಿ ವಾಯುಭಾರ ಕುಸಿತವಾಗಿದೆ. ಇದರಿಂದ ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಹಾಗೂ ಕಾಸರಗೋಡು ಸೇರಿದಂತೆ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಯೆಲ್ಲೋ ಅಲರ್ಟ್ ಎಂದರೆ ಈ 6 ರಿಂದ 11 ಸೆಂಟಿ ಮೀಟರ್ ವರೆಗೆ ಭಾರಿ ಮಳೆಯಾಗುತ್ತೆ.

ಇಂದು (ಜುಲೈ 27, ಗುರುವಾರ) ತಮಿಳುನಾಡು, ಪುದುಚೇರಿಯ (Puducherry) ಕೆಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಯಮತ್ತೂರು ಜಿಲ್ಲೆಯ ನೀಲಗಿರಿ ಮತ್ತು ಘಟ್ಟ ಪ್ರದೇಶಗಳಲ್ಲಿ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಚೆನ್ನೈನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.