ಕನ್ನಡ ಸುದ್ದಿ  /  Nation And-world  /   Supreme Court Former Judge Justice S Abdul Nazeer Appointed As Andhra Pradesh Governor

Abdul Nazeer Andhra Governor: ಆಂಧ್ರ ರಾಜ್ಯಪಾಲರಾಗಿ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಮಂಗಳೂರಿನ ಅಬ್ದುಲ್‌ ನಜೀರ್‌ ಪರಿಚಯ

ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌. ಅಬ್ದುಲ್‌ ನಜೀರ್‌ ಅವರನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ನೇಮಕ ಮಾಡಿದ್ದಾರೆ.

ಆಂಧ್ರ ರಾಜ್ಯಪಾಲರಾಗಿ ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ, ಮಂಗಳೂರಿನ ಅಬ್ದುಲ್‌ ನಜೀರ್‌ ನೇಮಕ
ಆಂಧ್ರ ರಾಜ್ಯಪಾಲರಾಗಿ ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ, ಮಂಗಳೂರಿನ ಅಬ್ದುಲ್‌ ನಜೀರ್‌ ನೇಮಕ

ನವದೆಹಲಿ: ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌. ಅಬ್ದುಲ್‌ ನಜೀರ್‌ ಅವರನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ನೇಮಕ ಮಾಡಿದ್ದಾರೆ. ಆಂಧ್ರ ಮಾತ್ರವಲ್ಲದೆ ಛತ್ತಿಸ್‌ಗಢ, ಬಿಹಾರ, ಮಣಿಪುರ ಸೇರಿದಂತೆ ವಿವಿಧ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ.

ಎಸ್.ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡದ ಬೆಳುವಾಯಿ ಮೂಲದವರು. ಇವರ ನೇಮಕಕ್ಕೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿನಂದನೆ ಸಲ್ಲಿಸಿ ಟ್ವೀಟ್‌ ಮಾಡಿದ್ದಾರೆ. "ನೂತನವಾಗಿ ಆಂದ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಶ್ರೀ ಎಸ್‌. ಅಬ್ದುಲ್ ನಜೀರ್ ರವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ, ನಂತರ ಸುಪ್ರಿಂ ಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ, ನಿವೃತ್ತರಾಗಿದ್ದರು" ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್‌ ನಜೀರ್‌ ಬಗ್ಗೆ ಗೊತ್ತೆ?

  • ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಅಬ್ದುಲ್‌ ನಜೀರ್‌ ಅವರು ಕರ್ನಾಟಕದವರು. ಇವರು ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆ ತಾಲೂಕಿನ ಬೆಳುವಾಯಿಯವರು.
  • ಅಬ್ದುಲ್‌ ನಜೀರ್‌ ಅವರು ಇದೇ ಜನವರಿ 14ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು.
  • ನಿವೃತ್ತ ನ್ಯಾಯಮೂರ್ತಿ ಅಬ್ದುಲ್‌ ನಜೀರ್‌ ಅವರು ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದರು.
  • 2017ರಲ್ಲಿ ತ್ರಿವಳಿ ತಲಾಖ್ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠದಲ್ಲಿ ಅಬ್ದುಲ್ ನಜೀರ್ ಇದ್ದರು. ಆ ಐತಿಹಾಸಿಕ ತೀರ್ಪಿನಲ್ಲಿ ನ್ಯಾಯಪೀಠವು ತ್ರಿವಳಿ ತಲಾಖ್ ಅನ್ನು ಅಸಿಂಧುಗೊಳಿಸಿತ್ತು.
  • ನ್ಯಾಯಮೂರ್ತಿ ನಜೀರ್‌ ಅವರು 1958ರ ಜನವರಿ 5ರಂದು ಜನಿಸಿದರು.
  • ಬೆಳುವಾಯಿ ಗ್ರಾಮದಲ್ಲಿ ಜನಿಸಿದ ಅಬ್ದುಲ್‌ ನಜೀರ್‌ ಅವರು ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ.
  • ಇವರು ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದಾರೆ.
  • ಫೆಬ್ರವರಿ 18, 1983 ರಂದು ವಕೀಲರಾಗಿ ನೋಂದಾಯಿಸಿದರು.
  • ಕರ್ನಾಟಕ ಹೈಕೋರ್ಟ್‌ನಲ್ಲಿ ಕಾರ್ಯನಿರ್ವಹಿಸಿದ ಇವರು 2003ರ ಮೇ 12 ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿರಾದರು.
  • ನಿವೃತ್ತ ನ್ಯಾಯಮೂರ್ತಿ ಅಬ್ದುಲ್‌ ನಜೀರ್‌ ಅವರು ಸರಳತೆಗೆ ಹೆಸರುವಾಸಿಯಾಗಿದ್ದರು. ಈ ಕುರಿತು ಇವರ ಬೀಳ್ಗೊಡುಗೆ ಸಂದರ್ಭದಲ್ಲಿ ಸಿಜೆಐ ಡಿವೈ ಚಂದ್ರಚೂಡ್‌ ಪ್ರಸ್ತಾಪಿಸಿದ್ದರು. ನಜೀರ್‌ ಅವರು 2019 ರವರೆಗೆ ಪಾಸ್‌ಪೋರ್ಟ್ ಹೊಂದಿರಲಿಲ್ಲವಂತೆ. ಇತ್ತೀಚೆಗೆ ಮೊದಲ ಬಾರಿಗೆ ಹೊರದೇಶಕ್ಕೆ ಪ್ರಯಾಣಿಸಿದ್ದರು ಎಂದಿದ್ದರು.