ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ವಜಾ, ಸೋತಾಗ ಇವಿಎಂ ಮೇಲೇಕೆ ಅನುಮಾನ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ಸುಪ್ರೀಂ ಕೋರ್ಟ್‌ ಪೀಠ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ವಜಾ, ಸೋತಾಗ ಇವಿಎಂ ಮೇಲೇಕೆ ಅನುಮಾನ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ಸುಪ್ರೀಂ ಕೋರ್ಟ್‌ ಪೀಠ

ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ವಜಾ, ಸೋತಾಗ ಇವಿಎಂ ಮೇಲೇಕೆ ಅನುಮಾನ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ಸುಪ್ರೀಂ ಕೋರ್ಟ್‌ ಪೀಠ

Voting Machine Issue: ಚುನಾವಣೆ ಮತದಾನ ಹೇಗಿರಬೇಕು. ಹಿಂದಿನ ಬ್ಯಾಲೆಟ್‌ ಮೂಲಕವೋ ಅಥವಾ ಇವಿಎಂ ಬಳಸಬೇಕೋ ಎನ್ನುವ ಕುರಿತು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಏನಿದೆ ತೀರ್ಪು. ಇಲ್ಲಿದೆ ವಿವರ.

ಇವಿಎಂ ರದ್ದುಪಡಿಸಿ ಬ್ಯಾಲೆಟ್‌ ಪೇಪರ್‌ ಚುನಾವಣೆ ನಡೆಸುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.
ಇವಿಎಂ ರದ್ದುಪಡಿಸಿ ಬ್ಯಾಲೆಟ್‌ ಪೇಪರ್‌ ಚುನಾವಣೆ ನಡೆಸುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

Voting Machine Issue: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ. ಈ ಹಿಂದೆಯೂ ಕೆಲವು ಬಾರಿ ಇಂತಹ ಅರ್ಜಿಯನ್ನು ವಜಾಗೊಳಿಸಿದ ಉದಾಹರಣೆಯೂ ಇದೆ.

ಸುಪ್ರೀಂಕೋರ್ಟ್‌ ಹೇಳಿದ್ದೇನು

ಈ ಹಿಂದೆ ಆಂಧ್ರಪ್ರದೇಶದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯರೋಪಗಳನ್ನು ಕೋರ್ಟ್‌ ಉಲ್ಲೇಖಿಸಿತು.ಈ ಹೇಳಿಕೆಗಳನ್ನು ಸ್ಮರಿಸಿದ ವಿಭಾಗೀಯ ಪೀಠ ನ್ಯಾಯಮೂರ್ತಿಗಳು ಅರ್ಜಿದಾರರ ವಾದವನ್ನು ತಳ್ಳಿಹಾಕಿದರು.

ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿತು.

ಅರ್ಜಿದಾರರಿಗೆ ತಪರಾಕಿ

ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು.

ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ, ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತಲ್ಲದೆ, ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ನಾವು ಇದನ್ನು ತಳ್ಳಿಹಾಕುತ್ತಿದ್ದೇವೆ. ನೀವು ಇದನ್ನೆಲ್ಲ ವಾದಿಸುವ ಸ್ಥಳ ಇದು ಅಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿ ಆದೇಶಿಸಿತು.

ನಿಲ್ಲದ ಬೇಡಿಕೆ

ಇದು ಎಲೆಕ್ಟ್ರಾನಿಕ್‌ ಮಂತ್ರ ಜಾರಿಗೊಂಡ ಮೊದಲಿನಿಂದಲೂ ನಡೆದುಕೊಂಡು ಬಂದಿದ್ದು, ಚುನಾವಣೆ ವೇಳೆ ಸುಮ್ಮನಿದ್ದು ಫಲಿತಾಂಶ ಬಂದಾಗ ಈ ರೀತಿ ಪ್ರತಿಕ್ರಿಯಿಸುವುದು ನಡೆದಿದೆ.ಎಲ್ಲಾ ರಾಜಕೀಯ ಪಕ್ಷಗಳು ಇಂತಹ ಹೇಳಿಕೆಗಳನ್ನು ಫಲಿತಾಂಶದ ನಂತರ ನೀಡುವುದು ಸಾಮಾನ್ಯವೂ ಆಗಿದೆ. ಈ ಬಾರಿಯೂ ಮಹಾರಾಷ್ಟ್ರದಲ್ಲಿನ ಫಲಿತಾಂಶ ಆಧರಿಸಿ ಕಾಂಗ್ರೆಸ್‌ ಸಹಿತ ಪ್ರತಿಪಕ್ಷಗಳ ನಾಯಕರು ಅನುಮಾನ ವ್ಯಕ್ತಪಡಿಸಿ ಬ್ಯಾಲೆಟ್‌ ಮತ ವ್ಯವಸ್ಥೆಗೂ ಒತ್ತಾಯಿಸಿದ್ದರು.

 

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.