ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Suriname: ಸುರಿನಾಮ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವಕ್ಕೆ ಪಾತ್ರರಾದ ರಾಷ್ಟ್ರಪತಿ ದ್ರೌಪದಿ ಮುರ್ಮು

Suriname: ಸುರಿನಾಮ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವಕ್ಕೆ ಪಾತ್ರರಾದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೂರಿನಾಮ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಆ ದೇಶದ ಅಧ್ಯಕ್ಷ ಚಂದ್ರಿಕಾ ಪ್ರಸಾದ್ ಅವರಿಂದ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೂರಿನಾಮ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೂರಿನಾಮ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದಿದ್ದಾರೆ.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ಸುರಿನಾಮ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಗ್ರ್ಯಾಂಡ್ ಆರ್ಡರ್ ಆಫ್ ದಿ ಚೈನ್ ಆಫ್ ದಿ ಯಲ್ಲೋ ಸ್ಟಾರ್’ (Grand Order of the Chain of the Yellow Star) ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಮೂರು ದಿನಗಳ ಸುರಿನಾಮ್ ಪ್ರವಾಸದಲ್ಲಿ ಇರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಲ್ಲಿನ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷ ಚಂದ್ರಿಕಾಪ್ರಸಾದ್ ಸಂತೋಖಿ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುರಿನಾಮ್ ಸರ್ಕಾರ ಹಾಗೂ ಅಧ್ಯಕ್ಷ ಸಂತೋಖಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಈ ಗೌರವ ತಮಗೆ ಮಾತ್ರವಲ್ಲದೆ, ಭಾರತದ ಜನರಿಗೆ ಸಲ್ಲುತ್ತದೆ. ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಉತ್ಕೃಷ್ಟಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಭಾರತೀಯ-ಸುರಿನಾಮ್ ಸಮುದಾದಯ ಜನರಿಗೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಪ್ರತಿ ದೇಶ ಹಾಗೂ ಪ್ರದೇಶದ ಕಾನೂನುಬದ್ಧ ಆಸಕ್ತಿಗಳು, ಕಾಳಜಿಗಳಿಗೆ ಸೂಕ್ಷ್ಮವಾಗಿರುವ ಅಂತರ್ಗತ ವಿಶ್ವ ಕ್ರಮಕ್ಕೆ ಭಾರತದ ವಿಧಾನವನ್ನು ಅವರು ಒತ್ತಿ ಹೇಳಿದ್ದಾರೆ.

ಭಾರತವು ತನ್ನ ಜಿ 20 ಅಧ್ಯಕ್ಷತೆಯ ಮೂಲಕ ಅಭಿವೃದ್ಧಿಶೀಲ ರಾಷ್ಟ್ರಗಳು ಮತ್ತು ಮುಂದುವರಿದ ಆರ್ಥಿಕತೆಗಳೊಂದಿಗೆ ಬಲವಾದ ಸೇತುವೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ರಾಷ್ಟ್ರಪತಿಗಳಿಗೆ ಗೌರವಾರ್ಥ ಆಯೋಡಿಸಿದ್ದ ಔತಣ ಕೂಡದಲ್ಲೂ ದ್ರೌಪತಿ ಮುರ್ಮು ಅವರು ಭಾಗವಹಿಸಿದ್ದಾರೆ.

ಕಳೆದ ವರ್ಷದ ಜುಲೈನಲ್ಲಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆಗೇರಿದ್ದರು. ಆ ಬಳಿಕ ಮುರ್ಮು ಅವರು ಕೈಗೊಂಡಿರುವ ಮೊದಲ ವಿದೇಶಿ ಪ್ರವಾಸ ಇದಾಗಿದೆ.

IPL_Entry_Point

ವಿಭಾಗ