Tamil Nadu: ತಮಿಳುನಾಡಿನ ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕದಲ್ಲಿ ಭಾರೀ ಬೆಂಕಿ ಅವಘಡ! ಕಾರಣವೇನು?
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Tamil Nadu: ತಮಿಳುನಾಡಿನ ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕದಲ್ಲಿ ಭಾರೀ ಬೆಂಕಿ ಅವಘಡ! ಕಾರಣವೇನು?

Tamil Nadu: ತಮಿಳುನಾಡಿನ ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕದಲ್ಲಿ ಭಾರೀ ಬೆಂಕಿ ಅವಘಡ! ಕಾರಣವೇನು?

Tamil Nadu News: ತಮಿಳುನಾಡಿನ ಹೊಸೂರಿನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್​​ ಮೊಬೈಲ್ ಉತ್ಪಾದನಾ ವಿಭಾಗದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ತಮಿಳುನಾಡಿನ ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕದಲ್ಲಿ ಭಾರೀ ಬೆಂಕಿ ಅವಘಡ
ತಮಿಳುನಾಡಿನ ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕದಲ್ಲಿ ಭಾರೀ ಬೆಂಕಿ ಅವಘಡ

ತಮಿಳುನಾಡು: ಇಲ್ಲಿನ ಹೊಸೂರಿನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕದಲ್ಲಿ ಇಂದು (ಸೆಪ್ಟೆಂಬರ್​ 28, ಶನಿವಾರ) ಭಾರಿ ಬೆಂಕಿ ಅವಘಡ ಸಂಭವಿಸಿದೆ. ಸೆಲ್​ಫೋನ್ ಉತ್ಪಾದನಾ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಅಪಾರ ಆಸ್ತಿಪಾಸ್ತಿ ಹಾನಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

ನಾಗಮಂಗಲಂ ಬಳಿಯ ಉದ್ದನಪಲ್ಲಿಯಲ್ಲಿರುವ ಕಂಪನಿಯ ಮೊಬೈಲ್ ಫೋನ್ ಬಿಡಿ ಭಾಗಗಳ ಪೇಂಟಿಂಗ್ ಘಟಕದಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದಟ್ಟವಾದ ಹೊಗೆ ಬಹುಬೇಗನೇ ಈ ಪ್ರದೇಶವನ್ನು ಆವರಿಸಿಕೊಂಡಿತು. ಇದು ಕಾರ್ಮಿಕರು ಮತ್ತು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿ ಮಾಡಿತು. ನೌಕರರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಯಿತು.

ಘಟನೆಯ ಸಮಯದಲ್ಲಿ ಸುಮಾರು 1,500ಕ್ಕೂ ಅಧಿಕ ಕಾರ್ಮಿಕರು ಮೊದಲ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (ಟಿಇಪಿಎಲ್) ವಕ್ತಾರರು ಮನಿಕಂಟ್ರೋಲ್​ಗೆ ನೀಡಿದ ಹೇಳಿಕೆಯಲ್ಲಿ ತಮಿಳುನಾಡಿನ ಹೊಸೂರು ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ದೃಢಪಡಿಸಿದ್ದಾರೆ.

ಎಲ್ಲಾ ಉದ್ಯೋಗಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತುರ್ತು ಪ್ರೋಟೋಕಾಲ್​ಗಳನ್ನು ಅನುಸರಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ಏನೆಂಬುದರ ತನಿಖೆ ನಡೆಯುತ್ತಿದೆ. ಕಂಪನಿಯು ತನ್ನ ಉದ್ಯೋಗಿಗಳನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದೆ. ಉಸಿರಾಟದ ತೊಂದರೆ ಎದುರಿಸಿದ ಮೂವರು ಉದ್ಯೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.